AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯದಲ್ಲಿ ಮೇಕೆ-ಕುರಿ, ದನಕರುಗಳನ್ನ ಮೇಯಿಸುವುದು ನಿಷೇಧಿಸಲು ಸಲು ಈಶ್ವರ ಖಂಡ್ರೆ ಸೂಚನೆ

ಕಾಡಂಚಿನಲ್ಲಿರುವ ಗ್ರಾಮಸ್ಥರು ತಮ್ಮ ತಮ್ಮ ದನಕರು, ಮೇಕೆ, ಕುರಿ ಮೇಯಿಸುವುದಕ್ಕೆ ಅರಣ್ಯಗಳನ್ನೇ ಅವಲಂಬಿಸಿದ್ದಾರೆ. ಆದ್ರೆ. ಇದೀಗ ಇದಕ್ಕೆ ಬ್ರೇಕ್ ಹಾಕಲು ಅರಣ್ಯ ಇಲಾಖೆ ಮುಂದಾಗಿದೆ. ಕರ್ನಾಟಕದಲ್ಲಿರುವ ಎಲ್ಲಾ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸಚಿವ ಖಂಡ್ರೆ ಸೂಚನೆ ನೀಡಿದ್ದಾರೆ. ಹಾಗಾದ್ರೆ, ಅರಣ್ಯ ಇಲಾಖೆ ಈ ನಿರ್ಧಾರ ಕೈಗೊಂಡಿದ್ಯಾಕೆ ಎನ್ನುವ ಕಾರಣವನ್ನೂ ಸಹ ನೀಡಲಾಗಿದೆ,

ಅರಣ್ಯದಲ್ಲಿ ಮೇಕೆ-ಕುರಿ, ದನಕರುಗಳನ್ನ ಮೇಯಿಸುವುದು ನಿಷೇಧಿಸಲು ಸಲು ಈಶ್ವರ ಖಂಡ್ರೆ ಸೂಚನೆ
Forest
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ|

Updated on: Jul 22, 2025 | 7:24 PM

Share

ಬೆಂಗಳೂರು, (ಜುಲೈ 22): ಕರ್ನಾಟಕದಲ್ಲಿರುವ ಅರಣ್ಯ  (Forest) ಪ್ರದೇಶದೊಳಗೆ ದನಕರು (cattle), ಮೇಕೆ, ಕುರಿ ( sheep, goat) ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೇ ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೇ ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಜನರ ಸೇಡಿಗೆ ಬಲಿಯಾದ್ವಾ 5 ಹುಲಿಗಳು? ವ್ಯಾಘ್ರಗಳು ಸಾವಿಗೂ ಮುನ್ನ ನಡೆದಿದ್ದೇನು?

ದೊಡ್ಡ ಸಂಖ್ಯೆಯ ಸಾಕುಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಮಿಗಿಲಾಗಿ ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಉಲ್ಲೇಖಿಸಿದ್ದಾರೆ. ಅರಣ್ಯ ಸಂವರ್ಧನೆಯಾಗದಿದ್ದರೆ ಅದು ಆ ಅರಣ್ಯದಲ್ಲಿ ಹರಿಯುವ ನದಿಗಳ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳವಾಗುತ್ತದೆ. ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲೂ ನಿಯಮದಲ್ಲಿ ಅವಕಾಶ ಇರುವುದಿಲ್ಲ. ಹೀಗಾಗಿ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು, ಪರಿಸರವಾದಿಗಳು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ಕಾನೂನು ರೀತಿಯ ಕ್ರಮವಹಿಸುವಂತೆ ತಿಳಿಸಿದ್ದಾರೆ.

ಕಾಡಿನಲ್ಲಿರುವ ವನ್ಯಜೀವಿಗಳು ಮೇಯಲು ಹೋದ ದನಕರುಗಳನ್ನು ಕೊಂದಾಗ, ಆಕ್ರೋಶಗೊಂಡು ಕೆಲವರು ಮೃತ ಜಾನುವಾರುಗಳಿಗೆ ವಿಷಹಾಕುವ ಕಾರಣ ವನ್ಯಜೀವಿಗಳು ಸಾವಿಗೀಡಾಗುತ್ತವೆ. ಇದಕ್ಕೆ ಇತ್ತೀಚೆಗೆ ಹೂಗ್ಯಂ ವಲಯದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ಸಾವಿಗೀಡಾಗಿರುವುದೇ ಸಾಕ್ಷಿಯಾಗಿದೆ ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯಪಟ್ಟಿರುತ್ತಾರೆ ಎಂದು ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ.

ಮಿಗಿಲಾಗಿ ಮದ್ರಾಸ್ ಹೈಕೋರ್ಟ್ ತಮಿಳುನಾಡಿನ ಅರಣ್ಯದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದರ ವಿರುದ್ಧ ನೀಡಿದ ತೀರ್ಪಿನ ಬಳಿಕ, ನೆರೆಯ ರಾಜ್ಯದಿಂದಲೂ ನಮ್ಮ ರಾಜ್ಯಕ್ಕೆ ದನಕರುಗಳನ್ನು ತಂದು ಕಾಡಿನಲ್ಲಿ ಮೇಯಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ರಾಜ್ಯದ ಅರಣ್ಯಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಲು ಬಿಡುವುದನ್ನು ನಿರ್ಬಂಧಿಸಲು ಮತ್ತು ನಿಷೇಧಿಸಲು ನಿಯಮಾನುಸಾರ ಕ್ರಮವಹಿಸಲು ಸೂಚಿಸಿದ್ದಾರೆ.

ಅರಣ್ಯ ಇಲಾಖೆಯ ಈ ನಿರ್ಧಾರದಿಂದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮತ್ತೊಂದು ಸಮಸ್ಯೆ ಉಂಟಾಗಲಿದೆ. ಯಾಕಂದ್ರೆ ಈ ಭಾಗದ ಜನರು ಬಹುತೇಕ ಕಾಡಂಚಿನಲ್ಲಿ ವಾಸಿಸುತ್ತಾರೆ. ಹೀಗಾಗಿ ಅವರ ತಮ್ಮ ದನಕರು, ಮೇಕೆ ಕುರಿಗಳನ್ನು ಅರಣ್ಯ ಪ್ರದೇಶಗಳಲ್ಲೇ ಮೇಯಿಸುತ್ತಾರೆ. ಆದ್ರೆ, ಇದೀಗ ಅರಣ್ಯ ಇಲಾಖೆ  ಇದಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದು, ಇದು ವಿವಾದ ಸೃಷ್ಟಿಸುವ ಸಾಧ್ಯತೆಗಳಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ