ಕರ್ನಾಟಕದಲ್ಲಿ ಈ ಎರಡು ದಿನ ಎಸ್ಕಾಂ ಆನ್​ಲೈನ್ ಸೇವೆ ಸ್ಥಗಿತ, ಕಾರಣ ಇಲ್ಲಿದೆ

| Updated By: Rakesh Nayak Manchi

Updated on: Nov 18, 2023 | 9:57 AM

ಕಾಂಗ್ರೆಸ್ ಸರ್ಕಾರ ಬಂದ ನಂತರ ಉಚಿತ ವಿದ್ಯುತ್ ಯೋಜನೆ ಜಾರಿಗೊಳಿಸಿದೆ. ಅದರೆ, ಬಿಲ್ ದರ ಹೆಚ್ಚಳವಾಗಿದ್ದಲ್ಲದೆ, ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ. ರಾಜ್ಯದಾದ್ಯಂತ ಪವರ್ ಕಟ್​ನಿಂದ ಜನರು ಆಕ್ರೋಶಗೊಂಡಿದ್ದಾರೆ. ಈ ನಡುವೆ, ರಾಜ್ಯದಲ್ಲಿ ಈ ಎರಡು ದಿನ ಎಸ್ಕಾಂ ಆನ್​ಲೈನ್ ಸೇವೆ ಸಿಗುವುದಿಲ್ಲ. ಕಾರಣ ಇಲ್ಲಿದೆ.

ಕರ್ನಾಟಕದಲ್ಲಿ ಈ ಎರಡು ದಿನ ಎಸ್ಕಾಂ ಆನ್​ಲೈನ್ ಸೇವೆ ಸ್ಥಗಿತ, ಕಾರಣ ಇಲ್ಲಿದೆ
ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ನವೆಂಬರ್ 24 ಮತ್ತು 26 ರಂದು ಎಸ್ಕಾಂ ಆನ್​ಲೈನ್ ಸೇವೆ ಗ್ರಾಹಕರಿಗೆ ಲಭ್ಯವಿರುವುದಿಲ್ಲ (ಸಾಂದರ್ಭಿಕ ಚಿತ್ರ)
Image Credit source: Getty Images
Follow us on

ಬೆಂಗಳೂರು, ನ.18: ಕಾಂಗ್ರೆಸ್ ಸರ್ಕಾರ ಬಂದ ನಂತರ ಉಚಿತ ವಿದ್ಯುತ್ ಯೋಜನೆ ಜಾರಿಗೊಳಿಸಿದೆ. ಅದರೆ, ಬಿಲ್ ದರ ಹೆಚ್ಚಳವಾಗಿದ್ದಲ್ಲದೆ, ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ. ರಾಜ್ಯದಾದ್ಯಂತ ಪವರ್ ಕಟ್​ನಿಂದ ಜನರು ಆಕ್ರೋಶಗೊಂಡಿದ್ದಾರೆ. ಈ ನಡುವೆ, ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ನವೆಂಬರ್ 24 ಮತ್ತು ನವೆಂಬರ್ 26 ರಂದು ಎಸ್ಕಾಂ ಆನ್​ಲೈನ್ ಸೇವೆ (ESKOM online service) ಗ್ರಾಹಕರಿಗೆ ಲಭ್ಯವಿರುವುದಿಲ್ಲ.

ರಾಜ್ಯದ ಐದೂ ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್​​ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ ಈ ಎರಡು ದಿನದಂದು ಎಸ್ಕಾಂ ಆನ್​ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: ಅಕ್ರಮ ವಿದ್ಯುತ್ ಸಂಪರ್ಕ: ಬೆಸ್ಕಾಂಗೆ ದಂಡ ಪಾವತಿಸಿದ ಹೆಚ್​​ಡಿ ಕುಮಾರಸ್ವಾಮಿ, ಎಷ್ಟು ಗೊತ್ತಾ?

ನ.24 ರಂದು ಮಧ್ಯಾಹ್ನ 12 ಗಂಟೆಯಿಂದ ನ.26 ರಂದು ಬೆಳಗ್ಗೆ 11.59 ಗಂಟೆವರೆಗೆ ಎಲ್ಲಾ ರೀತಿಯ ಆನ್ ಲೈನ್ ಸೇವೆ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬೆಸ್ಕಾಂ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರು ಸಹಕಾರ ನೀಡುವಂತೆ ಕೋರಿದೆ.

ವಿವಿಧ ಪೋರ್ಟಲ್​ಗಳಲ್ಲಿರುವ ಡೇಟಾಗಳನ್ನು ನೂತನ ಪೋರ್ಟಲ್​ಗೆ ವರ್ಗಾವಣೆ ಮಾಡುವ ಕೆಲಸ ನಡೆಯುವ ಹಿನ್ನೆಲೆ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗುತ್ತಿದೆ. ಅದರಂತೆ, ಈ ಎರಡು ದಿನ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ಸೇವೆ ಲಭ್ಯವಿರುವುದಿಲ್ಲ. ಇದರಿಂದಾಗಿ ಬೆಸ್ಕಾಂ, ಚೆಸ್ಕ್ ಮೆಸ್ಕಾಂ, ಜೆಸ್ಕಾಂ, ಹೆಸ್ಕಾಂ ವ್ಯಾಪ್ತಿಯ ಜನರಿಗೆ ಸಮಸ್ಯೆಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ