AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು: ಸಿದ್ದರಾಮಯ್ಯ

ನೆಲಮಂಗಲದಲ್ಲಿ ಬೀರೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ವತಿಯಿಂದ ಶ್ರೀ ಬೀರೇಶ್ವರ ಸಮುದಾಯ ಭವನ ಮತ್ತು ಪ್ರಾರ್ಥನಾ ಮಂದಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಅಲ್ಲದೆ, ನೆಲಮಂಗಲದವರೆಗೆ ಮೆಟ್ರೋ ವಿಸ್ತರಣೆ ಮಾಡುವ ಬಗ್ಗೆ ಸರ್ಕಾರ ಪರಿಶೀಲಿಸಲಿ ಎಂದು ತಿಳಿಸಿದರು.

ಮುಂದಿನ ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯImage Credit source: ANI/File
ಬಿ ಮೂರ್ತಿ, ನೆಲಮಂಗಲ
| Updated By: Rakesh Nayak Manchi|

Updated on: Dec 03, 2023 | 5:58 PM

Share

ನೆಲಮಂಗಲ, ಡಿ.3: ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ವರ್ಷಗಳಲ್ಲಿ ಎತ್ತಿನಹೊಳೆ (Ettinahole) ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ನೆಲಮಂಗಲದಲ್ಲಿ ಬೀರೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ವತಿಯಿಂದ ಶ್ರೀ ಬೀರೇಶ್ವರ ಸಮುದಾಯ ಭವನ ಮತ್ತು ಪ್ರಾರ್ಥನಾ ಮಂದಿರ ಉದ್ಘಾಟಿಸಿ ಅವರು ಮಾತನಾಡಿದರು.

ನೆಲಮಂಗಲ ಪಟ್ಟಣಕ್ಕೆ ಕುಡಿಯುವ ನೀರಿನ ಬೇಡಿಕೆ ಇದೆ. ನೆಲಮಂಗಲ ಸುತ್ತಮುತ್ತಲ ಪ್ರದೇಶಗಳ ಕೆರೆಗಳನ್ನು ತುಂಬುವ ವೃಷಭಾವತಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಈ ಯೋಜನೆಯಿಂದ ನೀರಿನ ಅಂತರ್ಜಲ ಮಟ್ಟ ಹೆಚ್ಚಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮೆಟ್ರೋ ಸಂಪರ್ಕವನ್ನು ನೆಲಮಂಗಲದವರೆಗೂ ವಿಸ್ತರಿಸುವ ಯೋಜನೆ ಸರ್ಕಾರ ಪರಿಶೀಲಿಸಲಿದೆ. ನೆಲಮಂಗಲದ ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಗೊಳಿಸಲಾಗುವುದು. ಹಣ ಬಿಡುಗಡೆ ಮಾಡಿ ನಾನೇ ನೆಲಮಂಗಲಕ್ಕೆ ಬಂದು ಗುದ್ದಲಿ ಪೂಜೆ ಮಾಡುತ್ತೇನೆ ಎಂದರು.

ಜಾತಿಯ ಎಲ್ಲೆಯ ಮೀರಿ ಸಮಾಜ ಬೆಳೆಯಬೇಕು

ಕುರುಬರು ಸಾಮಾನ್ಯವಾಗಿ ಶೈವ ಪಂಥದವರು. ಬೀರೇಶ್ವರ ಕುರುಬ ಸಮುದಾಯದ ಕುಲದೇವರು. ಇವರು ದೈವಭಕ್ತರು. ದೇವನೊಬ್ಬ ನಾಮ ಹಲವು. ನಾವು ಇತರರಿಗೆ ಒಳಿತು ಬಯಸಿದರೆ ಭಗವಂತನೂ ಒಳ್ಳೆಯದನ್ನೇ ಮಾಡುತ್ತಾನೆ. ಮನುಷ್ಯ ಮತ್ತೊಮ್ಮ ಮನುಷ್ಯನನ್ನು ದ್ವೇಷಿಸಬಾರದು. ಯಾವುದೇ ಜಾತಿ ಮತ ಧರ್ಮದ ಸೇರಿದ ಮನುಷ್ಯರನ್ನು ನಾವು ಗೌರವದಿಂದ ಕಾಣುವುದೇ, ದೇವರಿಗೆ ಅರ್ಪಿಸುವ ಗೌರವ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Leelavathi: ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಸಮಾಜದ ತಾರತಮ್ಯ ತೊಲಗಿ, ಎಲ್ಲರೂ ಮನುಷ್ಯರಾಗಿ ಬಾಳಬೇಕು ಎಂದು ಕನಕದಾಸರು ಬಯಸಿದ್ದರು. ಜಾತಿಯ ಎಲ್ಲೆಯ ಮೀರಿ ಸಮಾಜ ಬೆಳೆಯಬೇಕು. ಕನಕದಾಸರು ಒಂದು ಜಾತಿಗೆ ಸೀಮತವಾಗದೇ ವಿಶ್ವ ಮಾನವ ಎಂದು ಕರೆಸಿಕೊಂಡರು. ನಾವೆಲ್ಲರೂ ವಿಶ್ವಮಾನವರಾಗುವ ದಾರಿಯಲ್ಲಿ ನಡೆಯಬೇಕು. ಕುವೆಂಪುರವರು ಸರ್ವಜನಾಂಗದ ಶಾಂತಿಯ ತೋಟದಂತಹ ಸಮಾಜವನ್ನು ನಿರ್ಮಿಸಬೇಕು ಎಂದರು.

ಗ್ಯಾರಂಟಿಗಳಿಂದ ಜನರ ಆರ್ಥಿಕತೆ ಹೆಚ್ಚುತ್ತದೆ

ಮುಖ್ಯಮಂತ್ರಿಯಾಗಿ ಎಲ್ಲ ಧರ್ಮದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುವುದು ನನ್ನ ಗುರಿಯಾಗಿದೆ. ಬಡವರಿಗೆ ಅಕ್ಕಿ, ಉಚಿತ ವಿದ್ಯುತ್, ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆಗಳು ಯಾವುದೇ ಜಾತಿಧರ್ಮಕ್ಕೆ ಸೀಮಿತವಾಗಿಲ್ಲ. 1.14 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಜನರ ಕೈಗೆ ಬರುವ ದುಡ್ಡು, ಅವರ ಇತರೆ ಅವಶ್ಯಕತೆಗಳನ್ನು ಪೂರೈಸಿ, ಆರ್ಥಿಕತೆ ಹೆಚ್ಚುತ್ತದೆ ಎಂದರು.

ಕೇವಲ ಶ್ರೀಮಂತರಲ್ಲದೇ, ಬಡವರು ಊಟಮಾಡುವಂತಾಗಬೇಕು. ಕರ್ನಾಟಕ ಹಸಿವುಮುಕ್ತ ರಾಜ್ಯವಾಗಬೇಕು. 1.30 ಕೋಟಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆಗಳಿಂದ ಲಾಭವಾಗಿದೆ. ಸಮಾಜ ನಿಂತ ನೀರಾಗದೆ ಬದಲಾವಣೆಯಾಗಬೇಕು. ಸಮಾಜಕ್ಕೆ ಚಲನೆ ದೊರೆತಾಗ ಆರ್ಥಿಕತೆ ಚುರುಕಾಗುತ್ತದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌