AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ಶನಿವಾರ ಪಕ್ಷಾತೀತವಾಗಿ ಶಾಸಕರ ಭೇಟಿಗೆ ಸಿಎಂ ನಿರ್ಧಾರ

ಇತ್ತೀಚಿಗೆ ಶಾಸಕ ಬಸವರಾಜ ರಾಯರೆಡ್ಡಿ ಸೇರಿದಂತೆ ಕಾಂಗ್ರೆಸ್​ ಪಕ್ಷದ ಕೆಲವು ಶಾಸಕರು, ವಿವಿಧ ಸಚಿವರು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಿಎಂಗೆ ಪತ್ರ ಬರೆದು ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ, ಶಾಸಕರ ಭೇಟಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರತಿ ಶನಿವಾರ ಪಕ್ಷಾತೀತವಾಗಿ ಶಾಸಕರ ಭೇಟಿಗೆ ಸಿಎಂ ನಿರ್ಧಾರ
ಸಿಎಂ ಸಿದ್ದರಾಮಯ್ಯ
Anil Kalkere
| Updated By: ವಿವೇಕ ಬಿರಾದಾರ|

Updated on:Sep 23, 2023 | 10:05 AM

Share

ಬೆಂಗಳೂರು ಸೆ.23: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇನ್ಮುಂದೆ ಪ್ರತಿ ಶನಿವಾರ ಪಕ್ಷಾತೀತವಾಗಿ ರಾಜ್ಯದ ಎಲ್ಲಾ ಶಾಸಕರು (MLA), ವಿಧಾನ ಪರಿಷತ್​ ಸದಸ್ಯರು ಮತ್ತು ಸಂಸದರನ್ನು ಭೇಟಿ ಮಾಡಲಿದ್ದಾರೆ. ಸೆ.23 ಇಂದಿನಿಂದಲೇ ಇದು ಆರಂಭವಾಗಲಿದೆ. ಮುಖ್ಯಮಂತ್ರಿಗಳ ಗೃಹ ಕೃಷ್ಣಾದಲ್ಲಿ ಇಂದು ಬೆಳಗ್ಗೆ 11ಯಿಂದ ಮಧ್ಯಾಹ್ನ 2 ಗಂಟೆಯ ತನಕ ಭೇಟಿಯಾಗಲಿದ್ದಾರೆ. ಈ ವೇಳೆ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿ ಮತ್ತು ಅನುದಾನಗಳ ಬಗ್ಗೆ ಚರ್ಚೆ ಮಾಡಬಹುದಾಗಿದೆ.

ಮುಂದಿನ ವಾರ ಮುಖ್ಯಮಂತ್ರಿ ಅವರ ಸಮಯ ಅವಕಾಶ ಲಭ್ಯತೆ ಆಧಾರದಲ್ಲಿ ಶಾಸಕರು, ಸಂಸದರಿಗೆ ಸಿಎಂ ಭೇಟಿಗೆ ಅವಕಾಶ ಕಲ್ಪಿಸಲಾಗುವುದು. ಈ ಭೇಟಿ ಕಡ್ಡಾಯವಾಗಿರುವುದಿಲ್ಲ ಎಂದು ಈ ಸಂಬಂಧ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ. ಚಿರಂಜೀವಿ ಪ್ರಕಟಣೆ ಹೊರಡಸಿದ್ದಾರೆ.

ಇದನ್ನೂ ಓದಿ: ಕುಸಿದ ವಿದ್ಯುತ್‌ ಉತ್ಪಾದನೆ; ಇಂಧನ ಇಲಾಖೆಯ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಇತ್ತೀಚಿಗೆ ಶಾಸಕ ಬಸವರಾಜ ರಾಯರೆಡ್ಡಿ ಸೇರಿದಂತೆ ಕಾಂಗ್ರೆಸ್​ ಪಕ್ಷದ ಕೆಲವು ಶಾಸಕರು, ವಿವಿಧ ಸಚಿವರು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಿಎಂಗೆ ಪತ್ರ ಬರೆದು ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ, ಶಾಸಕರ ಭೇಟಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:04 am, Sat, 23 September 23

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು