ಬೆಂಗಳೂರು ಸೆ.23: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇನ್ಮುಂದೆ ಪ್ರತಿ ಶನಿವಾರ ಪಕ್ಷಾತೀತವಾಗಿ ರಾಜ್ಯದ ಎಲ್ಲಾ ಶಾಸಕರು (MLA), ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರನ್ನು ಭೇಟಿ ಮಾಡಲಿದ್ದಾರೆ. ಸೆ.23 ಇಂದಿನಿಂದಲೇ ಇದು ಆರಂಭವಾಗಲಿದೆ. ಮುಖ್ಯಮಂತ್ರಿಗಳ ಗೃಹ ಕೃಷ್ಣಾದಲ್ಲಿ ಇಂದು ಬೆಳಗ್ಗೆ 11ಯಿಂದ ಮಧ್ಯಾಹ್ನ 2 ಗಂಟೆಯ ತನಕ ಭೇಟಿಯಾಗಲಿದ್ದಾರೆ. ಈ ವೇಳೆ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿ ಮತ್ತು ಅನುದಾನಗಳ ಬಗ್ಗೆ ಚರ್ಚೆ ಮಾಡಬಹುದಾಗಿದೆ.
ಮುಂದಿನ ವಾರ ಮುಖ್ಯಮಂತ್ರಿ ಅವರ ಸಮಯ ಅವಕಾಶ ಲಭ್ಯತೆ ಆಧಾರದಲ್ಲಿ ಶಾಸಕರು, ಸಂಸದರಿಗೆ ಸಿಎಂ ಭೇಟಿಗೆ ಅವಕಾಶ ಕಲ್ಪಿಸಲಾಗುವುದು. ಈ ಭೇಟಿ ಕಡ್ಡಾಯವಾಗಿರುವುದಿಲ್ಲ ಎಂದು ಈ ಸಂಬಂಧ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ. ಚಿರಂಜೀವಿ ಪ್ರಕಟಣೆ ಹೊರಡಸಿದ್ದಾರೆ.
ಇದನ್ನೂ ಓದಿ: ಕುಸಿದ ವಿದ್ಯುತ್ ಉತ್ಪಾದನೆ; ಇಂಧನ ಇಲಾಖೆಯ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
ಇತ್ತೀಚಿಗೆ ಶಾಸಕ ಬಸವರಾಜ ರಾಯರೆಡ್ಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಕೆಲವು ಶಾಸಕರು, ವಿವಿಧ ಸಚಿವರು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಿಎಂಗೆ ಪತ್ರ ಬರೆದು ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ, ಶಾಸಕರ ಭೇಟಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:04 am, Sat, 23 September 23