AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವಿಎಂ ಬಗ್ಗೆ ಕರ್ನಾಟಕದ ಬಹುಪಾಲು ಜನರಿಗಿದೆ ವಿಶ್ವಾಸ: ಸಿಂ ಸಿದ್ದರಾಮಯ್ಯ, ಖರ್ಗೆ ತವರಲ್ಲೇ ಹೆಚ್ಚು!

ಶೇ 83.61 ರಷ್ಟು ಕರ್ನಾಟಕದ ಮತದಾರರು EVM ಬಗ್ಗೆ ವಿಶ್ವಾಸ ಹೊಂದಿದ್ದಾರೆಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು ಮಂದಿ ಇವಿಎಂ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಈ ವರದಿಯನ್ನು ಕಾಂಗ್ರೆಸ್‌ನ ಇವಿಎಂ ಕುರಿತಾದ ಆರೋಪಗಳಿಗೆ ತಿರುಗೇಟು ನೀಡಲು ಬಳಸಿಕೊಂಡಿದೆ. ಈ ಬಗ್ಗೆ ಪ್ರಿಯಾಂಕ್ ಖರ್ಗೆ ಏನಂತಾರೆ? ತಿಳಿಯಲು ಮುಂದೆ ಓದಿ.

ಇವಿಎಂ ಬಗ್ಗೆ ಕರ್ನಾಟಕದ ಬಹುಪಾಲು ಜನರಿಗಿದೆ ವಿಶ್ವಾಸ: ಸಿಂ ಸಿದ್ದರಾಮಯ್ಯ, ಖರ್ಗೆ ತವರಲ್ಲೇ ಹೆಚ್ಚು!
ಸಾಂದರ್ಭಿಕ ಚಿತ್ರ
Ganapathi Sharma
|

Updated on: Jan 02, 2026 | 12:29 PM

Share

ಬೆಂಗಳೂರು, ಜನವರಿ 2: ಕರ್ನಾಟಕದಲ್ಲಿ ಶೇಕಡ 83.61 ರಷ್ಟು ಮತದಾರರು ವಿದ್ಯುನ್ಮಾನ ಮತಯಂತ್ರಗಳ (EVM) ಬಗ್ಗೆ ವಿಶ್ವಾಸಾರ್ಹತೆ ಹೊಂದಿರುವುದಾಗಿ ತಿಳಿಸಿರುವುದು ಸಮೀಕ್ಷೆಯೊಂದರಿಂದ ತಿಳಿದು ಬಂದಿದೆ. ವಿಶೇಷವೆಂದರೆ, ಇವಿಎಂ ಬಗ್ಗೆ ಸದಾ ತಕರಾರು ತೆಗೆಯುತ್ತಿರುವ ಕರ್ನಾಟಕದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತವರು ಜಿಲ್ಲೆ ಕಲಬುರಗಿಯಲ್ಲೇ (Kalaburagi) ಅತಿ ಹೆಚ್ಚು ಮತದಾರರು ಇವಿಎಂ ಬಗ್ಗೆ ವಿಶ್ವಾಸವಿದೆ ಎಂದಿದ್ದಾರೆ. ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಅಧೀನದಲ್ಲಿ ಕರ್ನಾಟಕ ಮಾನಿಟರಿಂಗ್ ಆ್ಯಂಡ್ ಎವ್ಯಾಲ್ಯೂಯೇಶನ್ ಅಥಾರಿಟಿ ವಿದ್ಯುನ್ಮಾನ ಮತ ಯಂತ್ರಗಳ ವಿಶ್ವಾಸಾರ್ಹತೆ ಬಗ್ಗೆ ಸಮೀಕ್ಷೆ ನಡೆಸಿದೆ.

ಕರ್ನಾಟಕದಲ್ಲಿ ಒಟ್ಟು ಶೇಕಡ 83.61 ರಷ್ಟು ಮತದಾರರು ಇವಿಎಂ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವುದು ಅಧ್ಯಯನದಿಂದ ತಿಳಿದುಬಂದಿದೆ. ಕಲಬುರಗಿಯಲ್ಲಿ ಶೇಕಡ 94.8ರಷ್ಟು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಶೇಕಡ 88.59ರಷ್ಟು ಮತದಾರರು ಇವಿಎಂ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮತಯಂತ್ರಗಳನ್ನು ನಿಖರತೆಯ ಕುರಿತು ಧನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. 2025ರ ಆಗಸ್ಟ್‌ನಲ್ಲಿ ಸಮೀಕ್ಷಾ ವರದಿಯನ್ನು ಸಲ್ಲಿಸಲಾಗಿತ್ತು ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ಏನು?

ಇವಿಎಂ ಕುರಿತು ನಡೆಸಿದ ಸಮೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆಯೇ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಸಮೀಕ್ಷೆ ನಡೆಸಿದ ಏಜೆನ್ಸಿ ಬಗ್ಗೆ ಪ್ರಸ್ತಾಪ ಮಾಡಿರುವ ಮಾಡಿರುವ ಅವರು, ರಾಜ್ಯ ಸರ್ಕಾರವು ಅದನ್ನು ಆ ಸಮೀಕ್ಷೆಯನ್ನು ಅನುಮೋದಿಸಿಲ್ಲ ಎಂದಿದ್ದಾರೆ. ‘ಮೊದಲನೆಯದಾಗಿ ಅದು ರಾಜ್ಯ ಸರ್ಕಾರ ಮಾಡಿಸಿದ ಸಮೀಕ್ಷೆಯೇ ಅಲ್ಲ. ಚುನಾವಣಾ ಆಯೋಗವು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಸಮೀಕ್ಷೆಗಾಗಿ ಬಾಲಕೃಷ್ಣನ್ ಅಥವಾ ಬಾಲಸುಬ್ರಮಣಿಯನ್ ನಡೆಸುತ್ತಿರುವ ಎನ್​ಜಿಒದ ಸಹಾಯವನ್ನು ಕೋರಲಾಗಿತ್ತು. ನನಗಿರುವ ಮಾಹಿತಿ ತಪ್ಪಲ್ಲವೆಂದಾದರೆ, ಬಾಲಕೃಷ್ಣನ್ ಅವರು ಪ್ರಧಾನ ಮಂತ್ರಿಯವರಿಗಾಗಿ ಬರೆದ ಪುಸ್ತಕದ ಲೇಖಕರಾಗಿದ್ದಾರೆ ಮತ್ತು ಪ್ರಧಾನ ಮಂತ್ರಿ ಕಚೇರಿಯೊಂದಿಗೆ ಬಹಳ ನಿಕಟವಾಗಿ ಕೆಲಸ ಮಾಡುತ್ತಾರೆ. ಅಂಥವರಿಂದ ನೀವು ಏನನ್ನು ನಿರೀಕ್ಷಿಸುತ್ತೀರಿ’ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ವೋಟ್ ಚೋರಿ ಆರೋಪ ಮಾಡುತ್ತಿರುವ ಮತ್ತು ಸದಾ ಇವಿಎಂ ಬಗ್ಗೆ ಪ್ರಶ್ನಿಸುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಕರ್ನಾಟಕದಲ್ಲಿ ನಡೆಸಿದ ಸಮೀಕ್ಷಾ ವರದಿನ್ನು ಮುಂದಿಟ್ಟುಕೊಡು ಬಿಜೆಪಿ ತಿರುಗೇಟು ನೀಡಿದೆ. ಚುನಾವಣೆಗಳಲ್ಲಿ ಕಾಂಗ್ರೆಸ್ ಸೋತಾಗ ಪ್ರತಿ ಬಾರಿ ರಾಹುಲ್ ಗಾಂಧಿ ಇವಿಎಂ ಅನ್ನು ಹಾಗೂ ಚುನಾವಣಾ ಆಯೋಗವನ್ನು ದೂಷಿಸುತ್ತಾರೆ. ಹಾಗೆ ಮಾಡಿದಾಗಲೆಲ್ಲ ಅವರ ಆರೋಪಗಳು ಸುಳ್ಳೆಂಬುದಕ್ಕೆ ಪುರಾವೆಗಳು ಸಿಗುತ್ತವೆ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲ ಹೇಳಿದ್ದಾರೆ.

ಇದನ್ನೂ ಓದಿ: EVM ಬದಲಿಗೆ ಬ್ಯಾಲೆಟ್ ಪೇಪರ್: ಸರ್ಕಾರದ ನಡೆ ಬಗ್ಗೆ ರಾಜ್ಯ ಚುನಾವಣಾ ಆಯುಕ್ತರು ಹೇಳಿದ್ದೇನು?

ಕರ್ನಾಟಕದಲ್ಲಿ ಜನರು ಇವಿಎಂಗಳನ್ನು ಸುರಕ್ಷಿತವೆಂದು ಪರಿಗಣಿಸುತ್ತಾರೆ ಮತ್ತು ಅವುಗಳನ್ನು ನಂಬುತ್ತಾರೆ ಎಂದು ಸಮೀಕ್ಷೆಯೊಂದರಿಂದ ಬಹಿರಂಗವಾಗಿದೆ. ರಾಹುಲ್ ಗಾಂಧಿ ಪ್ರತಿ ಬಾರಿ ಇವಿಎಂಗಳನ್ನು ಅಥವಾ ವ್ಯವಸ್ಥೆಯನ್ನು ದೂಷಿಸಿದಾಗ ಅವರಿಗೆ ವಾಸ್ತವದ ಅರಿವು ಮೂಡಿಸುವಂಥ ವಿದ್ಯಮಾನಗಳು ನಡೆಯತ್ತವೆ ಎಂದು ಶೆಹಜಾದ್ ಪೂನವಾಲ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ