ರೈತರ ಬದುಕಿನ ಜೊತೆ ಚೆಲ್ಲಾಟ ಆಡೋದು ಮುರುಗೇಶ್ ನಿರಾಣಿ ಕೆಲಸ, ಬಿಜೆಪಿ ಸರ್ಕಾರಕ್ಕೆ ಇನ್ನೂ ಬುದ್ದಿ ಬಂದಿಲ್ಲ: ಹೆಚ್ ಡಿ ಕುಮಾರಸ್ವಾಮಿ ಕಿಡಿಕಿಡಿ
ಬೆಂಗಳೂರಿನಲ್ಲಿ ಬದಕಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಬೆಂಗಳೂರು ಸುತ್ತಮುತ್ತ ಕೈಗಾರಿಕಾ ಬರಬೇಕು ಎಂಬ ಚಿಂತನೆ ಬಿಡಿ. ಕೃಷಿಯೇತರ ಭೂಮಿಗಳಲ್ಲಿ ಕೈಗಾರಿಕೆಗಳನ್ನ ಆರಂಭ ಮಾಡಿ. ಫಲವತ್ತಾದ ಜಮೀನನ್ನ ಭೂಸ್ವಾಧೀನ ಮಾಡೋದು ಬೇಡ -ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ
ದೇವನಹಳ್ಳಿ: ಬಿಜೆಪಿ ಸರ್ಕಾರ ಇದ್ದಾಗ ಭೂ ವ್ಯವಹಾರಗಳಲ್ಲಿ ಕೈಗಾರಿಕಾ ಸಚಿವರನ್ನ ಅರೆಸ್ಟ್ ಮಾಡಿದ್ದರು. ಅಷ್ಟೆಲ್ಲಾ ಆದ್ರೂ ಇನ್ನೂ ಬುದ್ದಿ ಬಂದಿಲ್ಲ ಬಿಜೆಪಿ ಸರ್ಕಾರಕ್ಕೆ. ಈಗಿನ ಕೈಗಾರಿಕಾ ಸಚಿವರದ್ದು ಬ್ರಹ್ಮಾಂಡ ಭ್ರಷ್ಟಾಚಾರ ಇದೆ. ರೈತರ ಬದುಕಿನ ಜೊತೆ ಚೆಲ್ಲಾಟ ಆಡೋದು ಮುರುಗೇಶ್ ನಿರಾಣಿ ಕೆಲಸವಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಬದಕಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಬೆಂಗಳೂರು ಸುತ್ತಮುತ್ತ ಕೈಗಾರಿಕಾ ಬರಬೇಕು ಎಂಬ ಚಿಂತನೆ ಬಿಡಿ. ಕೃಷಿಯೇತರ ಭೂಮಿಗಳಲ್ಲಿ ಕೈಗಾರಿಕೆಗಳನ್ನ ಆರಂಭ ಮಾಡಿ. ಫಲವತ್ತಾದ ಜಮೀನನ್ನ ಭೂಸ್ವಾಧೀನ ಮಾಡೋದು ಬೇಡ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಚಪ್ಪರಕಲ್ಲು ಬಳಿಯ ಜಿಲ್ಲಾಡಳಿತ ಭವನದ ಬಳಿ ಮಾಜಿ ಸಿಎಂ ಎಚ್ ಡಿ ಕೆ ಹೇಳಿದ್ದಾರೆ.