AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೀಶ್​ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದರೂ ಸದ್ಯಕ್ಕೆ ಇಲ್ಲ ರಿಲೀಫ್

ಜಿಲ್ಲಾ ಪಂಚಾಯತ್​ ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು

ಯೋಗೀಶ್​ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದರೂ ಸದ್ಯಕ್ಕೆ ಇಲ್ಲ ರಿಲೀಫ್
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು
TV9 Web
| Updated By: ಸಾಧು ಶ್ರೀನಾಥ್​|

Updated on:Aug 11, 2021 | 1:53 PM

Share

ನವದೆಹಲಿ: ಜಿಲ್ಲಾ ಪಂಚಾಯತ್​ ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಇಂದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ ಜಾಮೀನು ಅವಧಿಯಲ್ಲಿ ಧಾರವಾಡಕ್ಕೆ ತೆರಳದಂತೆ ವಿನಯ್​ ಕುಲಕರ್ಣಿಗೆ ಸುಪ್ರೀಂಕೋರ್ಟ್ ಷರತ್ತು ವಿಧಿಸಿದೆ.  ನವೆಂಬರ್  5ರಂದು ಸಿಬಿಐನಿಂದ ಬಂಧನಕ್ಕೊಳಗಾಗಿರುವ ವಿನಯ್ ಕುಲಕರ್ಣಿ, 9 ತಿಂಗಳಿನಿಂದ ಬೆಳಗಾವಿ ಜೈಲಿನಲ್ಲಿದ್ದಾರೆ.

ಪ್ರಕರಣ ಹೈಕೋರ್ಟ್ ಮುಂದೆ ವಿಚಾರಣೆಗೆ ಬಾಕಿ ಇದೆ ಎಂದು ಕರ್ನಾಟಕದ ಪರ ವಕೀಲ ನಟರಾಜ್ ಸುಪ್ರೀಂ ಕೋರ್ಟ್​​ ಗಮನ ಸೆಳೆದರು. ಹೀಗಾಗಿ ಹೈಕೋರ್ಟ್ ಎರಡು ತಿಂಗಳೊಳಗೆ ಪ್ರಕರಣದ ವಿಚಾರಣೆ ನಡೆಸಬೇಕು ಎಂದೂ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಮಧ್ಯೆ, ಧಾರವಾಡ ಜಿಲ್ಲಾ ವ್ಯಾಪ್ತಿ ಪ್ರವೇಶಿಸದಂತೆ  ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿದೆ. ಸಾಕ್ಷಿಗಳಿಗೆ ಬೆದರಿಕೆ ಹಾಕಿದರೆ ವಿನಯ್ ಕುಲಕರ್ಣಿ ಜಾಮೀನು ರದ್ದುಪಡಿಸುವ ಎಚ್ಚರಿಕೆಯನ್ನು ಸುಪ್ರೀಂ ಕೋರ್ಟ್ ನೀಡಿದೆ.

ವಿನಯ್ ಕುಲಕರ್ಣಿ ಇನ್ನೂ ಬೆಳಗಾವಿ ಜೈಲಿನಲ್ಲಿಯೇ ದಿನ ದೂಡಬೇಕಿದೆ..

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಗೆ ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ಸಿಕ್ಕರೂ ಹೊರ ಬರಲಾಗದ ಸ್ಥಿತಿ ಎದುರಾಗಿದೆ. ವಿನಯ್​ ಕುಲಕರ್ಣಿ ಮೇಲೆ ಸಾಕ್ಷ್ಯ ನಾಶದ ಪ್ರಕರಣವು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಇತ್ತೀಚಿಗಷ್ಟೇ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಜಾಮೀನಿಗಾಗಿ ವಿನಯ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ನಲ್ಲಿ ವಿಚಾರಣಾ ಹಂತದಲ್ಲಿರೋ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದರೂ ಅದರಿಂದ ಸದ್ಯಕ್ಕೆ ರಿಲೀಫ್ ಇಲ್ಲವಾಗಿದ್ದು, ಇನ್ನೂ ಬೆಳಗಾವಿ ಜೈಲಿನಲ್ಲಿಯೇ ದಿನ ದೂಡಬೇಕಿದೆ.

ಕಳೆದ ತಿಂಗಳು ಧಾರವಾಡಕ್ಕೆ ಬಂದಿದ್ದ ವಿನಯ್ ಕುಲಕರ್ಣಿ: ಇತ್ತೀಚೆಗೆ  (ಜುಲೈ 27) ಧಾರವಾಡದ ಉಪ ನೋಂದಣಾಧಿಕಾರಿ ಕಚೇರಿಗೆ  ವಿನಯ್ ಕುಲಕರ್ಣಿ, ಬೆಳಗಾವಿ ಹಿಂಡಲಗಾ ಜೈಲಿನಿಂದ ಆಗಮಿಸಿದ್ದರು. ಪತ್ನಿ ಶಿವಲೀಲಾ ಅವರಿಗೆ ಜಿಪಿಎ (General Power Of Attorney) ನೀಡಿದ್ದರು. ಜಿಪಿಎ ಪ್ರಕ್ರಿಯೆಯ ಬಳಿಕ ತಮ್ಮ ಹಾಗೂ ಪತ್ನಿಯ ಹೆಸರಿನಲ್ಲಿ ಜಂಟಿ ಖಾತೆಯನ್ನು ತೆರೆದರು. ಹಣಕಾಸು ವ್ಯವಹಾರ ಸೇರಿದಂತೆ ತೆರಿಗೆ ಸಂಬಂಧಿತ ಪ್ರಕ್ರಿಯೆಗಳನ್ನು ನಿರ್ವಹಿಸಲು ಈ ಜಂಟಿ ಖಾತೆಯನ್ನು ತೆರೆಯಲಾಗಿದೆ.

ಯೋಗೀಶ್‌ಗೌಡ ಕೊಲೆ ಕೇಸ್‌ನಲ್ಲಿ ವಿನಯ್‌ಗೆ ಜೈಲು: ವಿನಯ್ ಕುಲಕರ್ಣಿ ನಿವಾಸಕ್ಕೆ ನಟ ದರ್ಶನ್ ಭೇಟಿ

(ex minister vinay kulkarni granted bail in supreme court)

Published On - 1:04 pm, Wed, 11 August 21