ಕೊರೊನಾದಿಂದ ಮಾಜಿ ರಾಜ್ಯಸಭಾ ಸದಸ್ಯ ಕೆ ಬಿ ಶಾಣಪ್ಪ ನಿಧನ
K.B.Shanappa: 2006ರಿಂದ 12 ರವರೆಗೆ ರಾಜ್ಯಸಭಾ ಸದಸ್ಯರಾಗಿದ್ದ ಕೆ.ಬಿ ಶಾಣಪ್ಪ, 2012-18 ರವರೆಗೆ ವಿಧಾನಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.
ಕಲಬುರಗಿ: ರಾಜ್ಯಸಭಾ ಮಾಜಿ ಸದಸ್ಯ ಕೆ.ಬಿ.ಶಾಣಪ್ಪ (82) ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದ ಕಾರಣ ಜಿಮ್ಸ್ ಆಸ್ಪತ್ರೆಯ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 2006ರಿಂದ 12 ರವರೆಗೆ ರಾಜ್ಯಸಭಾ ಸದಸ್ಯರಾಗಿದ್ದ ಕೆ.ಬಿ ಶಾಣಪ್ಪ, 2012-18 ರವರೆಗೆ ವಿಧಾನಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.
ಕೆ.ಬಿ.ಶಾಣಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಶಾಣಪ್ಪನವರ ಸಾವಿನ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ. ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಿಎಂ ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವರು, ಹಿರಿಯ ನಾಯಕರೂ ಆಗಿದ್ದ ಶ್ರೀ ಕೆ.ಬಿ.ಶಾಣಪ್ಪನವರು ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— B.S. Yediyurappa (@BSYBJP) May 9, 2021
ಖಾಸಗಿ ಆಸ್ಪತ್ರೆಗಳು ಮಾನವೀಯತೆಯಿಂದ ವರ್ತಿಸಲಿ; ಸಚಿವ ಜಗದೀಶ್ ಶೆಟ್ಟರ್ ಮನವಿ ಬೆಳಗಾವಿ ಜಿಲ್ಲೆಯಲ್ಲಿ 30kl ಆಕ್ಸಿಜನ್ ಡಿಮ್ಯಾಂಡ್ ಇದ್ದು ಮುಂದಿನ ದಿನಗಳಲ್ಲಿ ಅದನ್ನು ಹೆಚ್ಚಿಸುತ್ತೇವೆ. ಆಕ್ಸಿಜನ್ ವಿಚಾರವಾಗಿ ಕೇಂದ್ರ ಸಚಿವರ ಜೊತೆಗೆ ಸಂಪರ್ಕದಲ್ಲಿದ್ದೇನೆ. ಇನ್ನೂ ಎರಡರಿಂದ ಮೂರು ದಿನಗಳಲ್ಲಿ ಆಕ್ಸಿಜನ್ ಸಮಸ್ಯೆ ಕಡಿಮೆಯಾಗಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿಯಲ್ಲಿ ಆಕ್ಸಿಜನ್ ವಿತರಣೆ ಮಾಡಲು ಎನ್‌ಜಿಓಗಳಿಗೆ ಕಷ್ಟವಾಗುತ್ತಿದೆ. ಈ ಕಾರಣದಿಂದ ಜಿಲ್ಲಾಡಳಿತವೇ ಆಕ್ಸಿಜನ್ ವಿತರಣೆ ಮಾಡುತ್ತಿದೆ. ಕೆಲ ಖಾಸಗಿ ಆಸ್ಪತ್ರೆಯವರು ಹೆಚ್ಚಿನ ಹಣ ಚಾರ್ಜ್ ಮಾಡುತ್ತಿದ್ದಾರೆ. ಅಮಾನವೀಯವಾಗಿ ನಡೆದುಕೊಳ್ಳುತ್ತಿದ್ದಾರೆ. ಅಂತಹ ಆಸ್ಪತ್ರೆಗಳ ಬಳಿ ಮಾನವೀಯವಾಗಿ ನಡೆದುಕೊಳ್ಳುವಂತೆ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದರು.
ಜಿಲ್ಲೆಗೆ 24KL ಆಕ್ಸಿಜನ್ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ. ಲಭ್ಯವಿರುವ ಇತಿಮಿತಿಯಲ್ಲಿ ಕೆಲಸ ಮಾಡಬೇಕಿದೆ. ಬೆಳಗಾವಿ ಜಿಲ್ಲೆಗೆ 30KL ಆಕ್ಸಿಜನ್ ಅಗತ್ಯವಿದ್ದು ಮುಂದೆ ಹೆಚ್ಚಿಸುತ್ತೇವೆ. ಆಕ್ಸಿಜನ್ ಹಂಚಿಕೆ ಜವಾಬ್ದಾರಿ ನೀಡಿದ ನಂತರ ಹಲವು ಸಭೆಗಳಲ್ಲಿ ಭಾಗಿಯಾಗಿದ್ದೇನೆ. ಬೆಳಗಾವಿಯ ಆಕ್ಸಿಜನ್ ಸಮಸ್ಯೆ ಬಗ್ಗೆ ಚರ್ಚೆ ಮಾಡಿದ್ದೇನೆ. ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುತ್ತೇವೆ. ಮಹಾರಾಷ್ಟ್ರ ರಾಜ್ಯಕ್ಕೆ ಮನವಿ ಮಾಡಿಕೊಂಡು ಅಲ್ಲಿಂದಲೂ ಆಕ್ಸಿಜನ್ ತರುವ ಪ್ರಯತ್ನ ಮಾಡುತ್ತೇವೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಸಂಸದೆ ಸುಮಲತಾ ಅಂಬರೀಶ್ ವಿಶೇಷ ಸಂದರ್ಶನ: ‘ಕರ್ತವ್ಯ ದೋಷದಿಂದ ಒಂದು ಜೀವ ಹೋದ್ರೂ ಅದಕ್ಕೆ ನಾವೇ ಜವಾಬ್ದಾರಿ…’
ಕೊವಿಡ್ ವಾರ್ಡ್ನಲ್ಲಿ ಹಾಡು, ನೃತ್ಯ; ಮಾನಸಿಕ ಖಿನ್ನತೆ ಕಡಿಮೆಯಾಗಿ ಸಂತಸದ ವಾತಾವರಣ ನಿರ್ಮಾಣ: ವಿಡಿಯೋ ನೋಡಿ
(Ex Rajya Sabha member K B Shanappa died of covid in Kalaburagi)