ವಿದೇಶಗಳಿಂದ 6.2 ಶತಕೋಟಿ ಡಾಲರ್ ಹೂಡಿಕೆ, 40 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆಯಲ್ಲಿ ಕರ್ನಾಟಕ

ರಾಜ್ಯಕ್ಕೆ ಮತ್ತು ಇಲ್ಲಿನ ಕಂಪನಿಗಳಿಗೆ ಹೂಡಿಕೆ ಸೆಳೆಯುವ ಉದ್ದೇಶದಿಂದ ಐಟಿ ಬಿಟಿ ಇಲಾಖೆ ಜೂನ್​ ಮಧ್ಯಭಾಗದಲ್ಲಿ ವಿದೇಶಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಅದು ಫಲ ನೀಡುವ ಲಕ್ಷಣಗಳಿವೆ. ಅವುಗಳ ಪರಿಣಾಮವಾಗಿ ರಾಜ್ಯಕ್ಕೆ ಅಪಾರ ಪ್ರಮಾಣದ ಹೂಡಿಕೆ ಹರಿದು ಬರುವ ಮತ್ತು ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ. ಈ ಬಗ್ಗೆ ಸಚಿವ ಪ್ರಿಯಾಂಖ್ ಖರ್ಗೆ ನೀಡಿದ ಮಾಹಿತಿ ಇಲ್ಲಿದೆ.

ವಿದೇಶಗಳಿಂದ 6.2 ಶತಕೋಟಿ ಡಾಲರ್ ಹೂಡಿಕೆ, 40 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆಯಲ್ಲಿ ಕರ್ನಾಟಕ
ವಿದೇಶಗಳಿಂದ 6.2 ಶತಕೋಟಿ ಡಾಲರ್ ಹೂಡಿಕೆ, 40 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆಯಲ್ಲಿ ಕರ್ನಾಟಕ
Follow us
|

Updated on: Jun 26, 2024 | 10:18 AM

ಬೆಂಗಳೂರು, ಜೂನ್ 26: ವಿದೇಶಗಳಲ್ಲಿ ಕರ್ನಾಕದ ಸ್ಟಾರ್ಟಪ್ (Startup) ಹಾಗೂ ಕಂಪನಿಗಳಿಗೆ ಹೂಡಿಕೆ ಸೆಳೆಲು ಮಾಡಿರುವ ರೋಡ್​​ ಶೋಗಳ (International roadshows) ಪರಿಣಾಮ ಇದೀಗ 6.2 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆಯನ್ನು ರಾಜ್ಯ ನಿರೀಕ್ಷಿಸುತ್ತಿದೆ. ಪರಿಣಾಮವಾಗಿ 35,000 ದಿಂದ 40,000 ಉದ್ಯೋಗ ಸೃಷ್ಟಿಯ (Job Creation) ಭರವಸೆಯೂ ಮೂಡಿದೆ ಎಂದು ವರದಿಯಾಗಿದೆ. ಹೂಡಿಕೆಯನ್ನು ಆಕರ್ಷಿಸುವುದಕ್ಕಾಗಿ ರಾಜ್ಯ ಸರ್ಕಾರದ ವತಿಯಿಂದ ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್ (ಯುಕೆ), ಫ್ರಾನ್ಸ್ ಮತ್ತು ಜರ್ಮನಿಯ ಹಲವಾರು ನಗರಗಳಲ್ಲಿ ರೋಡ್‌ಶೋಗಳನ್ನು ನಡೆಸಲಾಗಿತ್ತು.

ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯ ಅಧಿಕಾರಿಗಳು ಜೂನ್ ಮಧ್ಯ ಭಾಗದಲ್ಲಿ ರೋಡ್‌ಶೋಗಳ ಮೂಲಕ ವಿವಿಧ ದೇಶಗಳೊಂದಿಗೆ ಹೊಸದಾಗಿ ಸಹಯೋಗವನ್ನು ಬೆಳೆಸಲು ಹಲವಾರು ನಗರಗಳಿಗೆ ಭೇಟಿ ನೀಡಿದ್ದರು.

6.2 ಬಿಲಿಯನ್ ಡಾಲರ್ ಹೂಡಿಕೆಯನ್ನು ನಿರೀಕ್ಷಿಸಲಾಗಿದೆ. ಉದ್ದೇಶಿತ ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ) ರಾಜ್ಯದಲ್ಲಿ 35,000-40,000 ಉದ್ಯೋಗಗಳನ್ನು ಸೃಷ್ಟಿಸಲಿವೆ ಎಂದು ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರೋಡ್‌ಶೋಗಳ ಮುಖ್ಯ ಉದ್ದೇಶಗಳು ಕರ್ನಾಟಕದ ಜೈವಿಕ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಪರಿಸರ ವ್ಯವಸ್ಥೆಯನ್ನು ವಿದೇಶಗಳಲ್ಲಿ ಪರಿಚಯಿಸುವುದಾಗಿದೆ. ಅದರ ಮೂಲಸೌಕರ್ಯ ಮತ್ತು ನೀತಿಗಳನ್ನು ಅಮೆರಿಕ ಮತ್ತು ಇತರ ದೇಶಗಳ ಕಂಪನಿಗಳು ಮತ್ತು ಸಂಸ್ಥೆಗಳಿಗೆ ಪರಿಚಯಿಸುವುದಾಗಿದೆ. ಇದರಿಂದ ರಾಜ್ಯದಲ್ಲಿ ವಿದೇಶಿ ಹೂಡಿಕೆ ಹರಿದುಬರಲು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯಲ್ಲಿವೆ ತೆರಿಗೆ ಕಟ್ಟದ 7 ಲಕ್ಷ ಆಸ್ತಿಗಳು; ಇ-ಖಾತಾ ಮೂಲಕ ಬಾಕಿ ತೆರಿಗೆ ವಸೂಲಿಗೆ ಪ್ಲಾನ್

ನಾವು ಯುರೋಪ್ ಮತ್ತು ಅಮೆರಿಕದಿಂದ ಬಯೋಟೆಕ್, ಸೆಮಿಕಂಡಕ್ಟರ್, ಎಐ ಮತ್ತು ವೈದ್ಯಕೀಯ ವಿಜ್ಞಾನಕ್ಕೆ ಸಂಬಂಧಿಸಿದ ವಿವಿಧ ಕ್ಷೇತ್ರಗಳಲ್ಲಿ ದೊಡ್ಡ ಪ್ರಮಾಣದ ಹೂಡಿಕೆಯನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ