ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕಾರಣ ರಾಜ್ಯ ಸರ್ಕಾರ ಲಾಕ್ಡೌನ್ ಕೂಡಾ ವಿಧಿಸಿದೆ. ಈಗಾಗಲೇ ಜಾರಿಯಲ್ಲಿರುವ ಲಾಕ್ಡೌನ್ನ ಮುಂದುವರೆಸಬೇಕು ಎಂಬ ಸಲಹೆಗಳು ಕೂಡಾ ಬಂದಿವೆ. ಕೊರೊನಾ ನಿಯಂತ್ರಿಸಲು ಲಾಕ್ಡೌನ್ ಮುಂದುವೆರೆಸುವುದು ಅನಿವಾರ್ಯ ಎಂದು ಹೇಳಲಾಗುತ್ತಿದೆ. ಈ ನಡುವೆ ಜೂನ್ ಮೊದಲ ವಾರಕ್ಕೆ ಬೆಂಗಳೂರಲ್ಲಿ ಕೊರೊನಾ ಕಡಿಮೆಯಾಗುತ್ತದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಹೆಚ್ಚಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ತಿಳಿದುಬಂದಿದೆ. ಹೀಗಾಗಿ ಜೂನ್ ಮೊದಲ ವಾರದವರೆಗೆ ಲಾಕ್ಡೌನ್ ಮುಂದುವರೆಯುವ ಸಾಧ್ಯತೆಯಿದೆ.
ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸೋಂಕು ಹರಡುವ ಸಾಧ್ಯತೆಯಿದೆ. ಹೀಗಾಗಿ ಗ್ರಾಮೀಣ ಭಾಗಕ್ಕೆ ಹೆಚ್ಚು ಆದ್ಯತೆ ನೀಡಿ. ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ಕೊವಿಡ್ ಕೇರ್ ಸೆಂಟರ್ಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಸೋಂಕಿತರನ್ನು ಶಿಫ್ಟ್ ಮಾಡಲೇಬೇಕು. ನಗರ ಪ್ರದೇಶಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಲಿದೆ. ಆದರೆ ಗ್ರಾಮೀಣ ಭಾಗದಲ್ಲಿ ತೀವ್ರವಾಗಿ ಹರಡಲಿದೆ. ಈ ಕಾರಣ ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ಕಟ್ಟೆಚ್ಚರ ವಹಿಸಿಬೇಕೆಂದು ರಾಜ್ಯ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.
ಇದನ್ನೂ ಓದಿ
ಚುನಾವಣಾ ಆಯೋಗದ ಸದಸ್ಯರ ಆಯ್ಕೆಗೆ ಸ್ವತಂತ್ರ ಕೊಲಿಜಿಯಂ ನೇಮಿಸುವಂತೆ ಸುಪ್ರೀಂಕೋರ್ಟ್ಗೆ ಮೊರೆ
(Experts have advised the state government to be wary of rural areas until end of June)