ಕರ್ನಾಟಕದಲ್ಲಿ ಮತ್ತೆ ಶುರುವಾಯ್ತು ಕೊರೊನಾ 4ನೇ ಅಲೆ ಆತಂಕ! ಮಾರ್ಗಸೂಚಿ ಜಾರಿಗೆ ತಜ್ಞರ ಸಲಹೆ
ಸಾರ್ವಜನಿಕರಿಗೆ ಮಾಸ್ಕ್ ಕಡ್ಡಾಯಗೊಳಿಸುವ ಜೊತೆಗೆ ಕೊರೊನಾ ಮಾರ್ಗಸೂಚಿ ಮತ್ತೆ ಜಾರಿಗೊಳಿಸುವ ಬಗ್ಗೆಯೂ ತಜ್ಞರು ಸಲಹೆ ನೀಡಿದ್ದಾರೆ. ಇನ್ನು ಜಿನೋಮಿಕ್ ಸೀಕ್ವೆನ್ಸ್, ಟೆಸ್ಟಿಂಗ್ ಹೆಚ್ಚಳ ಮಾಡಬೇಕು.
ಬೆಂಗಳೂರು: ನಿಯಂತ್ರಣದಲ್ಲಿದ್ದ ಕೊರೊನಾ (Coronavirsu) ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಮತ್ತೆ ಹೆಚ್ಚಾಗುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾದ ಬೆನ್ನಲ್ಲೇ 4ನೇ ಅಲೆ (Corona 4th Wave) ಆತಂಕ ಶುರುವಾಗಿದ್ದು, ಆರೋಗ್ಯ ಇಲಾಖೆ ತಜ್ಞರ ಜೊತೆ ಸಭೆ ನಡೆಸಿದೆ. ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಕೆಲ ತಜ್ಞರು, ದೇಶದಲ್ಲಿ ದಿನೇದಿನೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸಾರ್ವಜನಿಕರಿಗೆ ಮಾಸ್ಕ್ ಕಡ್ಡಾಯಗೊಳಿಸಲು ಸಲಹೆ ನೀಡಿದ್ದಾರೆ.
ಸಾರ್ವಜನಿಕರಿಗೆ ಮಾಸ್ಕ್ ಕಡ್ಡಾಯಗೊಳಿಸುವ ಜೊತೆಗೆ ಕೊರೊನಾ ಮಾರ್ಗಸೂಚಿ ಮತ್ತೆ ಜಾರಿಗೊಳಿಸುವ ಬಗ್ಗೆಯೂ ತಜ್ಞರು ಸಲಹೆ ನೀಡಿದ್ದಾರೆ. ಇನ್ನು ಜಿನೋಮಿಕ್ ಸೀಕ್ವೆನ್ಸ್, ಟೆಸ್ಟಿಂಗ್ ಹೆಚ್ಚಳ ಮಾಡಬೇಕು. ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡಬೇಕೆಂದು ಸಲಹೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಲಹೆ ಕೊಟ್ಟಿದ್ದಾರೆ.
ಕಳೆದೊಂದು ವಾರದಿಂದ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಸಾವಿರ ಗಡಿ ದಾಟಿದೆ. ಹೊಸ ಕೋವಿಡ್ ತಳಿ ಕಾಣಿಸಿಕೊಂಡರೆ ನಾಲ್ಕನೇ ಅಲೆ ನಿಶ್ಚಿತವಾದರೂ ಆತಂಕಪಡುವ ಅಗತ್ಯವಿಲ್ಲ. ಮುಂದಿನ 2-3 ವಾರಗಳು ನಿರ್ಣಾಯಕವಾಗಿದ್ದು, ಕೊವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.
ಇದನ್ನೂ ಓದಿ: Singer KK: ಕೆಕೆ ಹಾಡಿದ್ದ ಕೊನೆಯ ಹಾಡು ರಿಲೀಸ್; ನೆಚ್ಚಿನ ಗಾಯಕನ ಗೀತೆಯನ್ನು ಕೇಳಿ ಭಾವುಕರಾದ ಅಭಿಮಾನಿಗಳು
ಕೊರೊನಾ 4ನೇ ಅಲೆ ಎದುರಿಸಲು ಈಗಿನಿಂದಲೇ ತಯಾರಿ ಶುರುವಾಗಿದೆ. ಆರೋಗ್ಯ ಇಲಾಖೆ, ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದ್ದು ಇಂದು ಸಂಜೆ 7 ಗಂಟೆಗೆ ಟಾಸ್ಕ್ ಫೋರ್ಸ್ ಜತೆ ಇಲಾಖೆಯ ಮಹತ್ವದ ಸಭೆ ನಡೆಸಲಿದೆ. ಕೊರೊನಾ ಪ್ರಕರಣ ಹೆಚ್ಚಳ ಸಂಬಂಧ ಚರ್ಚೆ ನಡೆಯಲಿದೆ. ಮುನ್ನೆಚ್ಚರಿಕಾ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ಜತೆ ಸಭೆ ನಡೆಸುವುದಾಗಿ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಮಾಹಿತಿ ನೀಡಿದ್ದಾರೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:34 am, Tue, 7 June 22