ಧಾರವಾಡ: ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಇಂಜೆಕ್ಷನ್, ಮಾತ್ರೆಗಳು ಪತ್ತೆ

Edited By: ವಿವೇಕ ಬಿರಾದಾರ

Updated on: Feb 03, 2023 | 12:41 PM

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಇಂಜೆಕ್ಷನ್​, ಮಾತ್ರೆಗಳು ಪತ್ತೆಯಾಗಿವೆ.

ಧಾರವಾಡ: ಜಿಲ್ಲೆಯ ಕುಂದಗೋಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಇಂಜೆಕ್ಷನ್​, ಮಾತ್ರೆಗಳು ಪತ್ತೆಯಾಗಿವೆ. ಲೋಕಾಯುಕ್ತ ತಂಡ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ವೇಳೆ ಅವಧಿ ಮುಗಿದ ಇಂಜೆಕ್ಷನ್ ಮತ್ತು ಮಾತ್ರೆಗಳು ಪತ್ತೆಯಾಗಿವೆ. ಈ ಬಗ್ಗೆ ಲೋಕಾಯುಕ್ತ ತಂಡ ಅಧಿಕಾರಿಗಳನ್ನು ಪ್ರಶ್ನೆ ಮಾಡಿದಾಗ, ವಿಲೇವಾರಿ ಮಾಡಲು ಇಟ್ಟಿರೋದಾಗಿ ತಿಳಿಸಿದ್ದಾರೆ. ಇದಕ್ಕೆ ಲೋಕಾಯುಕ್ತ ಅಧಿಕಾರಿಗಳು ನೋಂದಣಿ ಪುಸ್ತಕ ತೋರಿಸಿ ಎಂದಿದ್ದಕ್ಕೆ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದು, ಉತ್ತರಿಸಲು ತಡಬಡಾಯಿಸಿದ್ದಾರೆ.

Loading...
Unable to load recommendations.
Follow Us
TV9 Web

TV9 Kannada

Read More