ನಂದಿಗಿರಿಧಾಮದ ತಪ್ಪಲಿನಲ್ಲಿ ಅಕ್ರಮ ಕಲ್ಲು ಕ್ವಾರಿ ಬ್ಲಾಸ್ಟಿಂಗ್, ರಾಶಿ ರಾಶಿ ಸ್ಫೋಟಕಗಳು ಪತ್ತೆ
ನಂದಿಗಿರಿಧಾಮದ ತಪ್ಪಲಿನಲ್ಲಿ ಅಕ್ರಮ ಕಲ್ಲು ಕ್ವಾರಿ ಬ್ಲಾಸ್ಟಿಂಗ್ ಮಾಡಲಾಗುತ್ತಿದ್ದು ಬ್ಲಾಸ್ಟಿಂಗ್‌ಗೆ ಸುತ್ತಮುತ್ತಲಿನ ಗ್ರಾಮಸ್ಥರು ತತ್ತರಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಕಣಿವೆ ನಾರಾಯಣಪುರ ಗ್ರಾಮದ ಸರ್ವೆ ನಂಬರ್ 39ರಲ್ಲಿ ಕಲ್ಲು ಕ್ವಾರಿ ಬ್ಲಾಸ್ಟಿಂಗ್ ಮಾಡಲಾಗುತ್ತಿದೆ. ಮಂಜುನಾಥ್ ಎಂಟರ್ಪ್ರೈಸಸ್ಗೆ ಸೇರಿದ ಕಲ್ಲು ಕ್ವಾರಿಯಲ್ಲಿ ರಾಶಿ ರಾಶಿ ಸ್ಫೋಟಕಗಳು ಪತ್ತೆಯಾಗಿವೆ.
ಚಿಕ್ಕಬಳ್ಳಾಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ ಸ್ಫೋಟಕ ಸಾಮಾಗ್ರಿಗಳನ್ನು ಬಳಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಈ ಬೆನ್ನಲ್ಲೆ ಈಗ ಜಿಲ್ಲೆಯ ನಂದಿಗಿರಿಧಾಮದ ತಪ್ಪಲಿನಲ್ಲಿ ಎಗ್ಗಿಲ್ಲದೆ ಅಕ್ರಮ ಕಲ್ಲು ಕ್ವಾರಿ ಬ್ಲಾಸ್ಟಿಂಗ್ ನಡೆಯುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.
ನಂದಿಗಿರಿಧಾಮದ ತಪ್ಪಲಿನಲ್ಲಿ ಅಕ್ರಮ ಕಲ್ಲು ಕ್ವಾರಿ ಬ್ಲಾಸ್ಟಿಂಗ್ ಮಾಡಲಾಗುತ್ತಿದ್ದು ಬ್ಲಾಸ್ಟಿಂಗ್‌ಗೆ ಸುತ್ತಮುತ್ತಲಿನ ಗ್ರಾಮಸ್ಥರು ತತ್ತರಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಕಣಿವೆ ನಾರಾಯಣಪುರ ಗ್ರಾಮದ ಸರ್ವೆ ನಂಬರ್ 39ರಲ್ಲಿ ಕಲ್ಲು ಕ್ವಾರಿ ಬ್ಲಾಸ್ಟಿಂಗ್ ಮಾಡಲಾಗುತ್ತಿದೆ.
ಮಂಜುನಾಥ್ ಎಂಟರ್ಪ್ರೈಸಸ್ಗೆ ಸೇರಿದ ಕಲ್ಲು ಕ್ವಾರಿಯಲ್ಲಿ ರಾಶಿ ರಾಶಿ ಸ್ಫೋಟಕಗಳು ಪತ್ತೆಯಾಗಿವೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯ ಕಣಿವೆ ನಾರಾಯಣಪುರದಲ್ಲಿ ಅಕ್ರಮ ತಂಡವವಾಡುತ್ತಿದೆ. ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ ಈ ಅಕ್ರಮವನ್ನು ತಡೆಯಬೇಕಿದೆ. ಇಲ್ಲದಿದ್ದರೆ ಅನಾಹುತ ಕಟ್ಟಿಟ್ಟ ಬುತ್ತಿ. ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ಸಾಗಿಸುತ್ತಿದ್ದ ಡೈನಮೈಟ್ ಸ್ಫೋಟಗೊಂಡು ಆರು ಕಾರ್ಮಿಕರು ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಗಣಿಗಾರಿಕೆಗೆ ಸ್ಫೋಟ ಬಳಕೆ ನಿಯಂತ್ರಣ ಹೇರುವಲ್ಲಿ ನಿರ್ಲಕ್ಷ್ಯ.. ರಾಜ್ಯದ ಹಲವೆಡೆ ಅನುಮತಿ ಇಲ್ದೆ ಸ್ಫೋಟಕ ಬಳಕೆ