ಜೆಡಿಎಸ್ ಪಕ್ಷದಿಂದ ಉಚ್ಚಾಟನೆ: ವರಿಷ್ಠರ ಕ್ರಮ ಪ್ರಶ್ನಿಸಿದ್ದ ಸಿಎಂ ಇಬ್ರಾಹಿಂ ದಾವೆ ವಜಾ

ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಕ್ರಮ ಪ್ರಶ್ನಿಸಿದ್ದ ಸಿ.ಎಂ.ಇಬ್ರಾಹಿಂ ದಾವೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ವಜಾ ಮಾಡಲಾಗಿದೆ. ಹೆಚ್.ಡಿ.ದೇವೇಗೌಡ ಮತ್ತು ಹೆಚ್​​ಡಿ ಕುಮಾರಸ್ವಾಮಿ ಪ್ರತಿವಾದಿಯಾಗಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ಗೆ ಇಬ್ರಾಹಿಂ ಅರ್ಜಿ ಸಲ್ಲಿಸಿದ್ದರು. ದಾವೆ ಊರ್ಜಿತವಲ್ಲವೆಂದು ಹೆಚ್​ಡಿ ಕುಮಾರಸ್ವಾಮಿ ಪರ ವಕೀಲ ನಿಶಾಂತ್ ವಾದಿಸಿದ್ದಾರೆ.

ಜೆಡಿಎಸ್ ಪಕ್ಷದಿಂದ ಉಚ್ಚಾಟನೆ: ವರಿಷ್ಠರ ಕ್ರಮ ಪ್ರಶ್ನಿಸಿದ್ದ ಸಿಎಂ ಇಬ್ರಾಹಿಂ ದಾವೆ ವಜಾ
ಸಿ.ಎಂ.ಇಬ್ರಾಹಿಂ
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on: Mar 22, 2024 | 9:36 PM

ಬೆಂಗಳೂರು, ಮಾರ್ಚ್​ 22: ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಕ್ರಮ ಪ್ರಶ್ನಿಸಿದ್ದ ಸಿ.ಎಂ.ಇಬ್ರಾಹಿಂ (C.M Ibrahim) ದಾವೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ವಜಾ ಮಾಡಲಾಗಿದೆ. ಹೆಚ್.ಡಿ.ದೇವೇಗೌಡ ಮತ್ತು ಹೆಚ್​​ಡಿ ಕುಮಾರಸ್ವಾಮಿ ಪ್ರತಿವಾದಿಯಾಗಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ಗೆ ಇಬ್ರಾಹಿಂ ಅರ್ಜಿ ಸಲ್ಲಿಸಿದ್ದರು. ಪದಾಧಿಕಾರಿಗಳ ಉಚ್ಚಾಟನೆ, ಹಂಗಾಮಿ ಅಧ್ಯಕ್ಷರ ನೇಮಕ ಪ್ರಶ್ನಿಸಿದ್ದರು. ಈ ವೇಳೆ ದಾವೆ ಊರ್ಜಿತವಲ್ಲವೆಂದು ಹೆಚ್​ಡಿ ಕುಮಾರಸ್ವಾಮಿ ಪರ ವಕೀಲ ನಿಶಾಂತ್ ವಾದಿಸಿದ್ದಾರೆ.

ಉಚ್ಛಾಟಿನೆ ಬಳಿಕ ಸಿಎಂ ಇಬ್ರಾಹಿಂ ಅವರು ಕೋರ್ಟ್‌ ಮೆಟ್ಟಿಲೇರಿದ್ದರು. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮಾಡಿದ ವರಿಷ್ಠರ ಕ್ರಮ ಪ್ರಶ್ನಿಸಿ ಇಬ್ರಾಹಿಂ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿ ಅವರನ್ನು ಪ್ರತಿವಾದಿಯಾಗಿಸಿದ್ದರು.

ಇದನ್ನೂ ಓದಿ: ಜೆಡಿಎಸ್​ನಿಂದ ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ, ರಾಷ್ಟ್ರೀಯ ಉಪಾಧ್ಯಕ್ಷರಿಗೂ ಗೇಟ್​ಪಾಸ್

ಜೆಡಿಎಸ್ ವರಿಷ್ಠರು ಯಾವುದೇ ಮುನ್ಸೂಚನೆ ನೀಡದೇ ತಮ್ಮನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಸಿಟಿ ಸಿವಿಲ್ ಕೋರ್ಟ್​ನಲ್ಲಿ ಮೊಕದ್ದಮೆ ದಾಖಲಿಸಿದ್ದರು. ತಮ್ಮನ್ನು ಕಾನೂನು ಬಾಹಿರವಾಗಿ ಉಚ್ಚಾಟನೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ವಕೀಲ ಶತಬೀಷ್ ಹಾಗೂ ಶಿವಣ್ಣ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಅರ್ಜಿ ಕೋರ್ಟ್​ನಲ್ಲಿ ವಿಚಾರಣೆ ಮಾಡಲಾಗಿದೆ.

ನಮ್ಮದೇ ಒರಿಜಿನಲ್ ಜೆಡಿಎಸ್, ಬಿಜೆಪಿಗೆ ಬೆಂಬಲ ಇಲ್ಲ ಎಂದು ಸ್ವಪಪಕ್ಷದ ವರಿಷ್ಠರ ವಿರುದ್ಧವೇ ಗುಡುಗಿದ್ದ  ಸಿ.ಎಂ ಇಬ್ರಾಹಿಂ ಅವರನ್ನು ಅಕ್ಟೋಬರ್ 19ರಂದು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಇಬ್ರಾಹಿಂ ಮಾತಿಗೆ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಸಿಡಿಮಿಡಿಗೊಂಡಿದ್ದರು.

ಇದನ್ನೂ ಓದಿ: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ವಜಾ: ಹೆಚ್​ಡಿ ದೇವೇಗೌಡ ಪತ್ರ ವೈರಲ್

ಅಲ್ಲದೇ ಕೆಲ ಜೆಡಿಎಸ್ ನಾಯಕರು ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಪಟ್ಟು ಹಿಡಿದಿದ್ದರು. ಅದರಂತೆ ಅಂತಿಮವಾಗಿ ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ