Tv9 Digital Live | ಬಡವರು ನ್ಯಾಯಾಲಯಕ್ಕೆ ಹೋಗಿ ಪ್ರಯೋಜನವಿಲ್ಲ ಎನ್ನುವುದು ಎಷ್ಟು ನಿಜ?

ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸುಧಾರಣೆ ಅಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಮನ ಹರಿಸಬೇಕಾಗಿದೆ.

Tv9 Digital Live | ಬಡವರು ನ್ಯಾಯಾಲಯಕ್ಕೆ ಹೋಗಿ ಪ್ರಯೋಜನವಿಲ್ಲ ಎನ್ನುವುದು ಎಷ್ಟು ನಿಜ?
Tv9 ಕಾನೂನು ವರದಿಗಾರ ರಮೇಶ್, ಸುಪ್ರಿಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಮತ್ತು ಬಾರ್ ಕೌನ್ಸಿಲ್ ಮಾಜಿ ಮುಖ್ಯಸ್ಥ ಪಿ.ಪಿ. ಹೆಗ್ಡೆ.
Follow us
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 17, 2021 | 10:17 PM

ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ಮೂರು ದಿನಗಳ ಹಿಂದೆ ಬಡವರು ನ್ಯಾಯಾಲಯಕ್ಕೆ ಹೋಗಿ ಪ್ರಯೋಜನವಿಲ್ಲ ಎಂದು ಹೇಳಿದ್ದರು. ಈ ಹೇಳಿಯು ಸದ್ಯ ಭಾರೀ ಚರ್ಚೆಗೆ ಕಾರಣವಾಗಿದೆ. ನ್ಯಾಯಾಲಯಗಳಲ್ಲಿ ಬಡವರಿಗೆ ನ್ಯಾಯ ಸಿಗುತ್ತಿಲ್ಲವೆ ಎನ್ನುವ ಪ್ರಶ್ನೆ ಹಲವರಲ್ಲಿ ಮೂಡುವುದು ಸಹಜ. ಟಿವಿ9 ಡಿಜಿಟಲ್​ ಸಂವಾದದಲ್ಲಿ ಈ ಕುರಿತು ಸುಪ್ರಿಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡ , ಕರ್ನಾಟಕ ಬಾರ್ ಕೌನ್ಸಿಲ್ ಮಾಜಿ ಮುಖ್ಯಸ್ಥ ಪಿ.ಪಿ. ಹೆಗ್ಡೆ ಮತ್ತು ಟಿವಿ9ನ ಕಾನೂನು ವರದಿಗಾರರಾದ ರಮೇಶ್ ಚರ್ಚಿಸಿದರು. ಆ್ಯಂಕರ್ ಮಾಲ್ತೇಶ್ ಕಾರ್ಯಕ್ರಮ ನಡೆಸಿಕೊಟ್ಟರು.

ಸಂವಾದದ ಆರಂಭದಲ್ಲಿ ಮಾತನಾಡಿದ ಟಿವಿ9 ಕಾನೂನು ವರದಿಗಾರ ರಮೇಶ್, ರಂಜನ್​ ಗೊಗೊಯ್ ಹೇಳಿರುವ ಮಾತು ನೂರಕ್ಕೆ ನೂರು ನಿಜ. ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳೇ ಈ ಮಾತು ಹೇಳುವಾಗ ನಾವು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಆದರೆ ಅವರು ಕಾರ್ಯನಿರ್ವಹಿಸುವ ಕಾಲಕ್ಕೆ ಈ ಕುರಿತು ಒಂದಷ್ಟು ಸುಧಾರಣೆಗಳನ್ನು ತಂದಿದ್ದರೆ ಅಥವಾ ಈ ಬಗ್ಗೆ ಕ್ರಮಕೈಗೊಂಡಿದ್ದರೆ ಹೆಚ್ಚು ಸೂಕ್ತವಾಗಿರುತ್ತಿತ್ತು. ಕರ್ನಾಟಕ ಹೈಕೋರ್ಟ್​ನಲ್ಲಿ 46 ನ್ಯಾಯಾಧೀಶರಿದ್ದು, ಪ್ರತಿ ನಿತ್ಯ 200 ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ಹಳೆಯ ಕೇಸ್​ಗಳ ಕಡೆ ಗಮನ ಕೋಡಲು ಅಥವಾ ಹೊಸ ಕೇಸ್​ಗಳನ್ನು ತೆಗೆದುಕೊಳ್ಳುವಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ ಎಂದರು.

ನ್ಯಾಯಾಲಯಗಳಲ್ಲಿ ಪ್ರಕರಣಗಳು ವರ್ಷಗಟ್ಟಲೆ ಬಾಕಿ ಉಳಿಯುವ ಕಾರಣ, ಜನರು ರೌಡಿಗಳ ನೆರವು ಪಡೆಯಲು ಅಥವಾ ಅಧಿಕಾರಿಗಳಿಗೆ ಲಂಚ ನೀಡಲು ಮುಂದಾಗುತ್ತಾರೆ. ಸಾರ್ವಜನಿಕರು ಅಡ್ಡದಾರಿ ಹಿಡಿಯಲು ಪ್ರಾರಂಭಿಸುತ್ತಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗಮನ ಹರಿಸಿ ಕ್ರಮತೆಗೆದುಕೊಳ್ಳುವುದು ಅಗತ್ಯ ಎಂದು ರಮೇಶ್ ಹೇಳಿದ್ದಾರೆ.

ನ್ಯಾಯಾಲಯಗಳಿಗೆ ಮೂಲಸೌಕರ್ಯ ಬೇಕು ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸುಧಾರಣೆ ಅಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಮನ ಹರಿಸಬೇಕಾಗಿದೆ. ಮುಖ್ಯನ್ಯಾಯಮೂರ್ತಿ ಜೊತೆಗೆ ಕೇಂದ್ರ ಸರ್ಕಾರ ಮಾತನಾಡಿ ನ್ಯಾಯಾಲಯಗಳಲ್ಲಿ ಮೂಲಸೌಕರ್ಯ ಸುಧಾರಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಏಕೆ ಇಷ್ಟು ಪ್ರಕರಣಗಳು ಬಾಕಿ ಉಳಿದಿವೆ ಎಂಬ ಬಗ್ಗೆ  ನ್ಯಾಯಾಲಯದ ಜೊತೆಗೆ ಕೇಂದ್ರ ಸರ್ಕಾರ ಕೂತು ಮಾತುಕತೆ ನಡೆಸಿ ಸುಧಾರಣೆ ತರಬೇಕಾಗಿದೆ. ಆದರೆ ಇಂತಹ ಜವಾಬ್ದಾರಿ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಕ್ಕೆ ಇಲ್ಲ. ಅಧೀನ ನ್ಯಾಯಾಲಯಗಳಲ್ಲಿನ ನ್ಯಾಯಧೀಶರ ಸಂಖ್ಯೆಯನ್ನು ಹೆಚ್ಚಿಸಬೇಕು. ಹಾಗೂ ಸರ್ವೊಚ್ಛ ನ್ಯಾಯಾಲಯಗಳಲ್ಲಿ 5 ನಿಮಿಷದ ಕೇಸ್​ಗಳನ್ನು 1 ಗಂಟೆ ನಡೆಸುತ್ತಿರುವ ಕುರಿತು ಗಮನಹರಿಸಿ ನ್ಯಾಯಾಧೀಶರಿಗೆ ತರಬೇತಿ ನೀಡಬೇಕು ಎಂದು ಸುಪ್ರೀಂಕೋರ್ಟ್​ನ ನಿವೃತ ನ್ಯಾಯಮೂರ್ತಿಗಳಾದ ಗೋಪಾಲ್ ಗೌಡ ಹೇಳಿದರು.

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್​ನ ಮಾಜಿ ಮುಖ್ಯಸ್ಥ ಪಿ.ಪಿ. ಹೆಗ್ಡೆ ಮಾತನಾಡಿ,  ಈಗಿನ ನ್ಯಾಯಾಲಯ ವ್ಯವಸ್ಥೆಯಲ್ಲಿ ನ್ಯಾಯದಾನ ತಡವಾಗುತ್ತಿರುವುದು ನಿಜ. ಆದರೆ ಕೆಲವು ಸುಧಾರಣೆಗಳು ಕೂಡ ಇತ್ತೀಚಿನ ದಿನಗಳಲ್ಲಿ ಜಾರಿಗೆ ಬಂದಿದೆ.  ನಮ್ಮಂತಹ ದೇಶಗಳಲ್ಲಿ ಸರ್ಕಾರಗಳು ಮೊದಲು ಮೂಲಸೌಕರ್ಯಗಳಾದ ಆಹಾರ, ಶಿಕ್ಷಣ ನೀಡಲು ಗಮನ ಹರಿಸುತ್ತವೆ. ನಂತರದಲ್ಲಿ ನ್ಯಾಯ ವ್ಯವಸ್ಥೆ ಕಡೆ ಗಮನಹರಿಸುತ್ತವೆ ಎಂದು ಹೇಳಿದರು.

ಇದನ್ನೂ ಓದಿ: Tv9 Facebook Live | ಬಿಬಿಎಂಪಿ ಹೊಸ ಪಾರ್ಕಿಂಗ್ ನೀತಿ; ವರವೋ? ಬರೆಯೋ?

Published On - 10:15 pm, Wed, 17 February 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ