ದಾವಣಗೆರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಓರ್ವ ಕಾರ್ಮಿಕ ಸಾವು

ಕಾರ್ಖಾನೆಗೆ ಬೆಂಕಿ ತಗುಲಿದ್ದ ಕಾರಣ ಮೂವರು ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಓರ್ವ ಕಾರ್ಮಿಕ ಮರಣ ಹೊಂದಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಓರ್ವ ಕಾರ್ಮಿಕ ಸಾವು
ಕಾರ್ಖಾನೆಯಲ್ಲಿ ಬೆಂಕಿ ಅವಘಡ
Updated By: ರಾಜೇಶ್ ದುಗ್ಗುಮನೆ

Updated on: Jan 08, 2021 | 3:55 PM

ದಾವಣಗೆರೆ: ಹರಪನಹಳ್ಳಿ ತಾಲೂಕಿನ ದುಗ್ಗವತಿ ಗ್ರಾಮದ ಬಳಿಯಿರುವ ಡಿಸ್ಟಿಲರಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಮೃತಪಟ್ಟ  ಕಾರ್ಮಿಕ  ಮಾಗಡಿ ಗ್ರಾಮದ  ರಘು(38) ಎಂದು ಗುರುತಿಸಲಾಗಿದೆ.

ಡಿಸ್ಟಿಲರಿ ಎಂಬ ಕಾರ್ಖಾನೆ, ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದವರಿಗೆ ಸೇರಿದ್ದಾಗಿದೆ. ಆಕಸ್ಮಿಕವಾಗಿ ಬೆಂಕಿ ಕಾರ್ಖಾನೆಗೆ ತಗುಲಿದ್ದು, ಮೂವರು ಕಾರ್ಮಿಕರಿಗೆ ಗಂಭೀರ ಗಾಯವಾಗಿತ್ತು. ಹತ್ತಿರದಲ್ಲಿದ್ದ ಆಸ್ಪತ್ರೆಗೆ ದಾಖಲಿಸುವ ಸಂದರ್ಭದಲ್ಲಿ ಓರ್ವ ಮರಣ ಹೊಂದಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವಾಗಿಲು ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

 

ಬೆಂಗಳೂರು: ಪೀಠೋಪಕರಣವಿದ್ದ ಗೋದಾಮಿನಲ್ಲಿ ಬೆಂಕಿ ಅವಘಡ