AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kempegowda International Airport: ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಡಿಸಿಎಸ್​ ವ್ಯವಸ್ಥೆ ಸ್ಥಗಿತ, ಪ್ರಯಾಣಿಕರ ಪರದಾಟ

ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣಗಳಲ್ಲಿ ನಿರ್ಗಮನ ನಿಯಂತ್ರಣ ವ್ಯವಸ್ಥೆ (ಡಿಸಿಎಸ್) ಸ್ಥಗಿತಗೊಂಡಿದ್ದು, ಬುಧವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಲು ಸಜ್ಜಾಗಿದ್ದ ಸಾವಿರಾರು ಪ್ರಯಾಣಿಕರಿಗೆ ಚೆಕ್-ಇನ್ ಪ್ರಕ್ರಿಯೆಯು ಸುಮಾರು ಒಂದು ಗಂಟೆ ವಿಳಂಬವಾಯಿತು.

Kempegowda International Airport: ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಡಿಸಿಎಸ್​ ವ್ಯವಸ್ಥೆ  ಸ್ಥಗಿತ, ಪ್ರಯಾಣಿಕರ ಪರದಾಟ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ನಯನಾ ರಾಜೀವ್
|

Updated on: Jan 26, 2023 | 11:42 AM

Share

ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣಗಳಲ್ಲಿ ನಿರ್ಗಮನ ನಿಯಂತ್ರಣ ವ್ಯವಸ್ಥೆ (ಡಿಸಿಎಸ್) ಸ್ಥಗಿತಗೊಂಡಿದ್ದು, ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಲು ಸಜ್ಜಾಗಿದ್ದ ಸಾವಿರಾರು ಪ್ರಯಾಣಿಕರಿಗೆ ಚೆಕ್-ಇನ್ ಪ್ರಕ್ರಿಯೆಯು ಸುಮಾರು ಒಂದು ಗಂಟೆ ವಿಳಂಬವಾಯಿತು. ಗುರುವಾರ ಗಣರಾಜ್ಯೋತ್ಸವದ ರಜೆ ಮತ್ತು ವಾರಾಂತ್ಯ ಸಮೀಪಿಸುತ್ತಿರುವ ಕಾರಣ ಬುಧವಾರ ನಗರದಿಂದ ಹೊರಡಲು ಪ್ರಯಾಣಿಕರಲ್ಲಿ ಭಾರಿ ನೂಕುನುಗ್ಗಲು ಕಂಡುಬಂದಿದೆ.

ಎಲ್ಲರೂ ಮುದ್ರಿತ ಬೋರ್ಡಿಂಗ್ ಪಾಸ್‌ಗಳನ್ನು ವಿಮಾನ ನಿಲ್ದಾಣಕ್ಕೆ ತರುವುದನ್ನು ಕಡ್ಡಾಯಗೊಳಿಸುವಂತೆ ವಿಮಾನ ನಿಲ್ದಾಣ ನಿರ್ವಾಹಕರನ್ನು ಕೇಳಿಕೊಳ್ಳಲಾಯಿತು. ನವಿಟೇರ್ (ಡಿಜಿಟಲ್ ಪ್ಲಾಟ್‌ಫಾರ್ಮ್) ಬುಧವಾರ ಮಧ್ಯಾಹ್ನ 1.20 ರಿಂದ 2.19 ರವರೆಗೆ ಕೆಲಸ ಮಾಡಿರಲಿಲ್ಲ. ಇಂಡಿಗೋದಲ್ಲಿನ DCS ಅನ್ನು ಮಧ್ಯಾಹ್ನ 1.40 ಕ್ಕೆ ಮತ್ತು ಏರ್ ಏಷ್ಯಾದಲ್ಲಿ 1.51 ಕ್ಕೆ ಪುನಃಸ್ಥಾಪಿಸಲಾಯಿತು.

ಆಕಾಶ ಏರ್‌ಲೈನ್ಸ್ ಮೇಲೂ ಪರಿಣಾಮ ಬೀರಿದೆ. ಸುಮಾರು ಒಂದು ಗಂಟೆಯ ನಂತರ ಅಪ್ಲಿಕೇಶನ್ ಸಹಜ ಸ್ಥಿತಿಗೆ ಮರಳಿತು, ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ ಏರ್‌ಪೋರ್ಟ್ ಆಪರೇಟರ್‌ನ ಮೂಲವು ‘ಗೋನೌ’ ಸಾಫ್ಟ್‌ವೇರ್‌ನಲ್ಲಿ ಸ್ವಲ್ಪ ಸಮಸ್ಯೆಯಿದೆ ಎಂದು ದೃಢಪಡಿಸಿದೆ. ಅದನ್ನು ನಂತರ ಸರಿಪಡಿಸಲಾಯಿತು. ಆದರೆ, ದೋಷದಿಂದಾಗಿ ಕೆಲ ಪ್ರಯಾಣಿಕರು ಮೂರು ಗಂಟೆಗೂ ಹೆಚ್ಚು ಕಾಲ ಪರದಾಡುವಂತಾಯಿತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ