AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: 4.5 ಲಕ್ಷ ಮೌಲ್ಯದ 72 ಲಕ್ಷ ಖೋಟಾ ನೋಟು ವಶಕ್ಕೆ; 6 ಜನರ ಬಂಧನ

ಅಸಲಿ ನೋಟು ಪಡೆದು ನಕಲಿ ನೋಟು ನೀಡಲು ಮುಂದಾಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ವ್ಯವಹಾರಕ್ಕೆ ಬಳಸಿದ್ದ ಎರಡು ಕಾರು ವಶಪಡಿಸಿಕೊಂಡ ಪೊಲೀಸರು, ಬೃಹತ್ ಪ್ರಮಾಣದ ಖೋಟಾ ನೋಟು ವ್ಯವಹಾರವನ್ನು ಬಯಲು ಮಾಡಿದ್ದಾರೆ.

ಉತ್ತರ ಕನ್ನಡ: 4.5 ಲಕ್ಷ ಮೌಲ್ಯದ 72 ಲಕ್ಷ ಖೋಟಾ ನೋಟು ವಶಕ್ಕೆ; 6 ಜನರ ಬಂಧನ
ನಕಲಿ ನೋಟು ದಂಧೆ
Follow us
TV9 Web
| Updated By: ganapathi bhat

Updated on:Jun 02, 2021 | 5:32 PM

ಕಾರವಾರ: ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರ ಕಾರ್ಯಾಚರಣೆಯ ಮೂಲಕ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ 6 ಜನರನ್ನು ಬಂಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಒಟ್ಟು ಬರೋಬ್ಬರಿ 4.5 ಲಕ್ಷ ಮೌಲ್ಯದ 72 ಲಕ್ಷ ಖೋಟಾ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಉತ್ತರಕನ್ನಡ ಜಿಲ್ಲೆ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಕಿರಣ ದೇಸಾಯಿ (40), ಗಿರೀಶ ಪೂಜಾರಿ (42), ಬೆಳಗಾವಿಯ ಅಮರ ನಾಯ್ಕ (30), ಸಾಗರ ಕುಣ್ಣೂರ್ಕರ್ (28), ದಾಂಡೇಲಿಯ ಶಬ್ಬೀರ್ ಕುಟ್ಟಿ (45), ಶಿವಾಜಿ ಕಾಂಬ್ಳೆ (52) ಎಂಬವರನ್ನು ಬಂಧಿಸಲಾಗಿದೆ. ಅಲ್ಲದೆ, ಖೋಟಾ ನೋಟು ಜಾಲಕ್ಕೆ ಬಳಸಿದ್ದ 2 ಕಾರುಗಳನ್ನು ಜಪ್ತಿ ಮಾಡಲಾಗಿದೆ.

ಅಸಲಿ ನೋಟು ಪಡೆದು ನಕಲಿ ನೋಟು ನೀಡಲು ಮುಂದಾಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ವ್ಯವಹಾರಕ್ಕೆ ಬಳಸಿದ್ದ ಎರಡು ಕಾರು ವಶಪಡಿಸಿಕೊಂಡ ಪೊಲೀಸರು, ಬೃಹತ್ ಪ್ರಮಾಣದ ಖೋಟಾ ನೋಟು ವ್ಯವಹಾರವನ್ನು ಬಯಲು ಮಾಡಿದ್ದಾರೆ. ಡಿಡಿಎಲ್ ವನಶ್ರೀ ಭಾಗದ ಶಿವಾಜಿ ಕಾಂಬ್ಳೆ ಎನ್ನುವವರ ಮನೆಯಲ್ಲಿ ವಾಹನ ವಶಕ್ಕೆ ಪಡೆಯಲಾಗಿದೆ. ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸೈಬರ್ ಕ್ರೈಂ ತಡೆಯಲು ಬೆಂಗಳೂರು ಪೊಲೀಸರು ಯಶಸ್ವಿ; ವಂಚಕರ ಖಾತೆಗೆ ಹೋಗಬೇಕಿದ್ದ 48 ಕೋಟಿ ರೂಪಾಯಿ ವಾಪಸ್!

ಆರ್​ಬಿಐ ಹೆಸರಲ್ಲಿ ಸುಮಾರು 2 ಕೋಟಿ ವಂಚನೆ ಮಾಡಿದ್ದ ಯುವತಿ, ಕೃತ್ಯಕ್ಕೆ ಸಹಕರಿಸುತ್ತಿದ್ದ ನಟ ಬಂಧನ

Published On - 5:22 pm, Wed, 2 June 21

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ