ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನಿಸಲಾಗಿದೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ದೂರು ದಾಖಲಿಸಿದ್ದು, ಭಾರತೀಯ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66(ಸಿ) ಅಡಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಕೇಂದ್ರ ವಿಭಾಗದ ಸೈಬ‌ರ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ
ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್
Updated By: ವಿವೇಕ ಬಿರಾದಾರ

Updated on: Aug 14, 2025 | 3:05 PM

ಬೆಂಗಳೂರು, ಆಗಸ್ಟ್​ 14: ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ (Thawar Chand Gehlot) ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ (Fake Facebook Account) ತೆರೆದು ವಂಚನೆಗೆ ಯತ್ನಿಸಲಾಗಿದ್ದು, ಈ ಸಂಬಂಧ ಬೆಂಗಳೂರು ಕೇಂದ್ರ ವಿಭಾಗದ ಸೈಬ‌ರ್ ಅಪರಾಧ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್​ ಅವರು ನೀಡಿದ ನೀಡಿದ ದೂರು ಆಧರಿಸಿ ಭಾರತೀಯ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆ.66 (ಸಿ)ರ ಅಡಿ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.

ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಅವರ ಹೆಸರಿನಲ್ಲಿ ಫೇಸ್‌ಬುಕ್ ಖಾತೆ ತೆರೆದು ಮೆಸೇಜ್​ ಮಾಡಲಾಗಿದೆ. ನಕಲಿ ಖಾತೆ ತೆರೆದಿರುವ ಆರೋಪಿಯನ್ನು ಪತ್ತೆಹಚ್ಚಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗೊದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Thu, 14 August 25