ಕೇಂದ್ರ ಸರ್ಕಾರದ ಟೆಂಡರ್ ಕೊಡಿಸುವ ನೆಪ: ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ನಕಲಿ ಆಪ್ತ ಊಟಿ ಪ್ರಕಾಶ ಎಂಬಾತನಿಂದ ವಂಚನೆ

ಕೇಂದ್ರ ಸರ್ಕಾರದ ಟೆಂಡರ್ ಗಳನ್ನ ಕೊಡಿಸುವುದಾಗಿ ಊಟಿ ಪ್ರಕಾಶ ವಂಚಿಸಿದ್ದಾನೆ. ವಂಚನೆಗೊಳಗಾದ ವ್ಯಕ್ತಿಯೊಬ್ಬ ಸಚಿವೆಗೆ ಕರೆ ಮಾಡಿದಾಗ ಪ್ರಕರಣ ಬಯಲಾಗಿದೆ. ಶೋಭಾ ಕರಂದ್ಲಾಜೆ ಆಪ್ತ ಸಹಾಯಕ ಈ ಸಂಬಂಧ ಸಂಜಯನಗರ ಠಾಣೆಗೆ ದೂರು ನೀಡಿದ್ದಾರೆ.

ಕೇಂದ್ರ ಸರ್ಕಾರದ ಟೆಂಡರ್ ಕೊಡಿಸುವ ನೆಪ: ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ನಕಲಿ ಆಪ್ತ ಊಟಿ ಪ್ರಕಾಶ ಎಂಬಾತನಿಂದ ವಂಚನೆ
ಸಚಿವೆ ಶೋಭಾ ಕರಂದ್ಲಾಜೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 18, 2022 | 12:54 PM

ಬೆಂಗಳೂರು: ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಎಂದು ಪರಿಚಯಿಸಿಕೊಂಡು ಊಟಿ ಮೂಲದ ಪ್ರಕಾಶ್ ಎಂಬಾತ ವಂಚನೆ ಎಸಗಿದ್ದಾನೆ. ಈ ಸಂಬಂಧ ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ‌ಪ್ರಕರಣ ದಾಖಲಾಗಿದೆ. ಊಟಿ ಪ್ರಕಾಶ (Ooty Prakash) ಊಟಿಯಲ್ಲಿ ವಂಚನೆ ಎಸಗಿದ್ದಾನೆ ಎಂದು ದೂರಲಾಗಿದೆ. ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಆಪ್ತ ಎಂದು ಹೇಳಿಕೊಂಡು (Fake PA) ಕೃಷಿಕರು, ಜಮೀನುದಾರರು, ಉದ್ಯಮಿಗಳಿಗೆ ಊಟಿ ಪ್ರಕಾಶ ವಂಚಿಸಿದ್ದಾನೆ.

ಕೇಂದ್ರ ಸರ್ಕಾರದ ಟೆಂಡರ್ ಗಳನ್ನ ಕೊಡಿಸುವುದಾಗಿ ಊಟಿ ಪ್ರಕಾಶ ವಂಚಿಸಿದ್ದಾನೆ. ವಂಚನೆಗೊಳಗಾದ ವ್ಯಕ್ತಿಯೊಬ್ಬ ಸಚಿವೆಗೆ ಕರೆ ಮಾಡಿದಾಗ ಪ್ರಕರಣ ಬಯಲಾಗಿದೆ. ಶೋಭಾ ಕರಂದ್ಲಾಜೆ ಆಪ್ತ ಸಹಾಯಕ ವರುಣ್ ಆದಿತ್ಯಾ ಎಂಬುವವರು ಈ ಸಂಬಂಧ ಸಂಜಯನಗರ ಠಾಣೆಗೆ ದೂರು ನೀಡಿದ್ದಾರೆ.

ಸತ್ತವರ ಹೆಸರಿನಲ್ಲಿ ಕೋಟ್ಯಂತರ ರೂ ಪಿಂಚಣಿ ಹಣ ಲೂಟಿ! ಅಂಚೆ ಸಿಬ್ಬಂದಿಯಿಂದ ಮಹಾ ಮೋಸ, ಓರ್ವ ಆರೋಪಿ ಆತ್ಮಹತ್ಯೆ

ಯಾದಗಿರಿ: ಸತ್ತವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಪಿಂಚಣಿ ಹಣವನ್ನು ಲೂಟಿ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಂಚೆ ಸಿಬ್ಬಂದಿಯಿಂದಲೇ ಇಂತಹ ಮಹಾ ಮೋಸ ನಡೆದಿದೆ. ಅಂಚೆ ಇಲಾಖೆಯ ಖದೀಮರ ಗ್ಯಾಂಗ್ ಕೆಲ ಸತ್ತವರು ಹಾಗೂ ಬದುಕಿದವರ ಹೆಸರಿನಲ್ಲಿ ಪಿಂಚಣಿ ಹಣ ದೋಚಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಫಲಾನುಭವಿಗಳಿಗೆ ಹೀಗೆ ಪಂಗನಾಮ ಹಾಕಲಾಗಿದೆ. ವಿಧವೆಯರು, ವೃದ್ಯಾಪ್ಯ ವೇತನ ಬಾಬತ್ತಿನಲ್ಲಿ ಒಟ್ಟು 293 ಪಿಂಚಣಿ ಫಲಾನುಭವಿಗಳಿಗೆ ಮಹಾ ಮೋಸವೆಸಗಲಾಗಿದೆ. ಅಂಚೆ ಇಲಾಖೆ ಕೆಲ ನೌಕರರು ಬಡವರ ಹೆಸರಿನಲ್ಲಿ ಹಣ ವಿತ್ ಡ್ರಾ ಮಾಡಿರುವುದು ಬೆಳಕಿಗೆ ಬಂದಿದೆ. ಶಾಖಾ ಅಂಚೆ ಪಾಲಕ ಸರದಾರ ನಾಯಕ ಹಾಗೂ ಸಹಾಯಕ ಶಾಖಾ ಅಂಚೆ ಪಾಲಕ ತ್ರಿಶೂಲ್ ಅವರುಗಳು ಈ ಮೋಸದ ಕೃತ್ಯ ನಡೆಸಿರುವುದು ಪತ್ತೆಯಾಗಿದೆ. ಈ ಅಂಚೆ ನೌಕರರು ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಳಬಟ್ಟಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.

ಸರಕಾರದಿಂದ ಕಳೆದ ವರ್ಷ ಸೆಪ್ಟೆಂಬರ್ 14 ರಿಂದ ಕಳೆದ ತಿಂಗಳ ಮೇ ತಿಂಗಳವರಗೆ ಪಾವತಿಯಾದ ಪಿಂಚಣಿ ಹಣ ಇವರಿಬ್ಬರಿಂದ ಲೂಟಿಯಾಗಿದೆ. 1 ಕೋಟಿ 27 ಲಕ್ಷ ರೂಪಾಯಿ ಪಿಂಚಣಿ ಹಣವನ್ನು ಈ ಖದೀಮರು ವಿತ್ ಡ್ರಾ ಮಾಡಿಕೊಂಡಿದ್ದಾರೆ. ಗೋಗಿ ಪೊಲೀಸ್ ಠಾಣೆಯಲ್ಲಿ ಒಟ್ಟು ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬಂಧನದ ಭೀತಿ, ಓರ್ವ ಆರೋಪಿ ಆತ್ಮಹತ್ಯೆ: ಪ್ರಕರಣ ದಾಖಲಾಗುವ ಮುನ್ನವೇ ಓರ್ವ ಆರೋಪಿ ತ್ರಿಶೂಲ್ ಎಂಬುವವನು ಜೂನ್ 10 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆ ಜೈಲು ಸೇರುವ ಆತಂಕದಿಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ನೌಕರ ತ್ರಿಶೂಲ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಸುರಪುರ ಉಪ ವಿಭಾಗದ ಅಂಚೆ ನಿರೀಕ್ಷಕ ಸಹನ್ ಕುಮಾರ ಅವರಿಂದ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

Published On - 12:21 pm, Sat, 18 June 22

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?