ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ಫೇಕ್ ವಾಟ್ಸಾಪ್​​​​: ಸೈಬರ್​ ಕ್ರೈಂಗೆ ತುಷಾರ್ ಗಿರಿನಾಥ್ ದೂರು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರ ಹೆಸರು, ಪದನಾಮ ಹಾಗೂ ಭಾವಚಿತ್ರವನ್ನು ಅಪರಿಚಿತ ದೂರವಾಣಿ ಸಂಖ್ಯೆ: 9428053334 ಯಿಂದ ವ್ಯಾಟ್ಸಪ್ ಮೂಲಕ ಅಧಿಕಾರಿಗಳಿಗೆ ಸಂದೇಶಗಳನ್ನು ರವಾನಿಸಲಾಗುತ್ತಿದೆ. ಹೀಗಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೈಬರ್​ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.​​ ನಕಲಿ ಕರೆ ಬಂದರೆ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿ ಎಂದು ತಿಳಿಸಿದೆ. 

ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ಫೇಕ್ ವಾಟ್ಸಾಪ್​​​​: ಸೈಬರ್​ ಕ್ರೈಂಗೆ ತುಷಾರ್ ಗಿರಿನಾಥ್ ದೂರು
ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ಫೇಕ್ ವಾಟ್ಸಾಪ್​​​​: ಸೈಬರ್​ ಕ್ರೈಂಗೆ ತುಷಾರ್ ಗಿರಿನಾಥ್ ದೂರು
Follow us
ಶಾಂತಮೂರ್ತಿ
| Updated By: ಗಂಗಾಧರ​ ಬ. ಸಾಬೋಜಿ

Updated on: May 24, 2024 | 3:44 PM

ಬೆಂಗಳೂರು, ಮೇ 24: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರ ಹೆಸರಲ್ಲಿ ಫೇಕ್ ವಾಟ್ಸಾಪ್​ ತೆರೆಯಲಾಗಿದೆ. 9428053334 ಸಂಖ್ಯೆಯಿಂದ ಅಧಿಕಾರಿಗಳಿಗೆ ತಪ್ಪು ಮಾಹಿತಿ ರವಾನೆ ಮಾಡಲಾಗುತ್ತಿದೆ. ಹೀಗಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Giri Nath) ಸೈಬರ್​ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.​​ ನಕಲಿ ನಂಬರ್​​ನಿಂದ ಸಂದೇಶ ರವಾನೆ ಆಗುತ್ತಿದ್ದಂತೆ ಪಾಲಿಕೆ ಅಲರ್ಟ್​ ಆಗಿದ್ದು, ನಕಲಿ ನಂಬರ್​​ನಿಂದ ಬರುವ ಸಂದೇಶಗಳಿಗೆ ಸ್ಪಂದನೆ ಮಾಡಬೇಡಿ. ಈ ನಂಬರ್​ನಿಂದ ಕರೆ ಬಂದರೆ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿ ಎಂದು ತಿಳಿಸಿದೆ.

ದೂರಿನಲ್ಲೇನಿದೆ?

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರ ಹೆಸರು, ಪದನಾಮ ಹಾಗೂ ಭಾವಚಿತ್ರವನ್ನು ಅಪರಿಚಿತ ದೂರವಾಣಿ ಸಂಖ್ಯೆ: 9428053334 ಯಿಂದ ವ್ಯಾಟ್ಸಪ್ ಮೂಲಕ ಅಧಿಕಾರಿಗಳಿಗೆ ಸಂದೇಶಗಳನ್ನು ರವಾನಿಸಲಾಗುತ್ತಿದೆ. ಅನಧಿಕೃತವಾಗಿ ಮುಖ್ಯ ಆಯುಕ್ತರ ಹೆಸರು, ಪದನಾಮ ಹಾಗೂ ಭಾವಚಿತ್ರವನ್ನು ದುರುಪಯೋಗಪಡಿಸಿಕೊಂಡು ಅಧಿಕಾರಿಗಳಿಗೆ ತಪ್ಪು ಮಾಹಿತಿ ರವಾನೆಯಾಗುತ್ತಿರುತ್ತದೆ.

ಇದನ್ನೂ ಓದಿ: ಜನರಿಗೆ ಕೋಟಿ‌ ಕೋಟಿ ರೂ. ಪಂಗನಾಮ: ಕಾಂಗ್ರೆಸ್ ಶಾಸಕ​ ಅಜಯ್ ಸಿಂಗ್ ಮಾಜಿ ಪಿಎ ಅರೆಸ್ಟ್

ಈ ನಿಟ್ಟಿನಲ್ಲಿ ಪಾಲಿಕೆ ಮಾಹಿತಿ ತಂತ್ರಜ್ಞಾನ ವಿಭಾಗದ ಉಪ ಮುಖ್ಯ ಮಾಹಿತಿ ಅಧಿಕಾರಿಯಾದ ಶ್ರೀ ಪ್ರಭಾಕರ್ ರವರು ತಕ್ಷಣ ಸೈಬರ್ ಕ್ರೈಮ್‌ನಲ್ಲಿ ದೂರು ದಾಖಲಿಸಿದ್ದಾರೆ. ಪಾಲಿಕೆಯ ಅಧಿಕಾರಿಗಳು ಅಥವಾ ನಾಗರೀಕರು 9428053334 ಸಂಖ್ಯೆಯಿಂದ ವ್ಯಾಟ್ಸಪ್ ಮೂಲಕ ಬರುವ ಸಂದೇಶಗಳಿಗೆ ಸ್ಪಂದಿಸದಂತೆ ಮುಖ್ಯ ಆಯುಕ್ತರು ಕೋರಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಬಳಿಕ ಬಿಬಿಎಂಪಿ ಎಲೆಕ್ಷನ್? ಡಿಕೆ ಶಿವಕುಮಾರ್ ಆ ಸೂಚನೆಯಿಂದ ಮೂಡಿತು ಕುತೂಹಲ

ಈ ರೀತಿಯ ಸಂದೇಶಗಳು ಯಾರಿಗಾದರೂ ಬಂದಲ್ಲಿ ಅಥವಾ ಯಾವುದೇ ಅನುಮಾನಗಳಿದ್ದಲ್ಲಿ ಕೂಡಲೆ ಮುಖ್ಯ ಆಯುಕ್ತರ ಕಛೇರಿಗೆ ವರದಿ ಮಾಡುವಂತೆ ಅಥವಾ ಸೈಬರ್ ಕ್ರೈಮ್‌ಗೆ ದೂರು ನೀಡುವಂತೆ ವಿನಂತಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ