AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆತ್ತವರೊಂದಿಗೆ ಜೈಲು ಸೇರಿದ್ದ 4 ವರ್ಷದ ಬಾಲಕಿ ಸಾವು; ಪೊಲೀಸರ ವಿರುದ್ಧ ಕುಟುಂಬದ ಪ್ರತಿಭಟನೆ

ಪೊಲೀಸರು ನಡೆಸಿದ ಹಲ್ಲೆಯಿಂದ 4 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ಕಲಬುರಗಿ ಜಿಲ್ಲಾಸ್ಪತ್ರೆ ಎದುರು ಬಾಲಕಿಯ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

ಹೆತ್ತವರೊಂದಿಗೆ ಜೈಲು ಸೇರಿದ್ದ 4 ವರ್ಷದ ಬಾಲಕಿ ಸಾವು; ಪೊಲೀಸರ ವಿರುದ್ಧ ಕುಟುಂಬದ ಪ್ರತಿಭಟನೆ
ಕಲಬುರಗಿಯಲ್ಲಿ ಮಗು ಶವವಿಟ್ಟು ಪ್ರತಿಭಟನೆ ನಡೆಸುತ್ತಿರುವ ಕುಟುಂಬದ ಸದಸ್ಯರು
ಪೃಥ್ವಿಶಂಕರ
|

Updated on:Jan 03, 2021 | 6:13 PM

Share

ಕಲಬುರಗಿ: ಪೊಲೀಸರು ನಡೆಸಿದ ಹಲ್ಲೆಯಿಂದ 4 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ಕಲಬುರಗಿ ಜಿಲ್ಲಾಸ್ಪತ್ರೆ ಎದುರು ಬಾಲಕಿಯ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

ಜಿಲ್ಲೆಯ ಜೇವರ್ಗಿ ತಾಲೂಕಿನ ಜೈನಾಪುರದಲ್ಲಿ ಗ್ರಾ.ಪಂ. ಚುನಾವಣೆ ಸಂಬಂಧ ರಾಜು ತಳವಾರ ಹಾಗೂ ಸಂತೋಷ ತಳವಾರ ಕುಟುಂಬದ ನಡುವೆ ಗಲಾಟೆಯಾಗಿತ್ತು. ಗಲಾಟೆಯಲ್ಲಿ ಜೇವರ್ಗಿ ಪೊಲೀಸರು ಸಂತೋಷ್ ಕುಟುಂಬದ ಹತ್ತು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದರು. ಡಿ.31 ರಂದು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದರು.

ಸಂತೋಷ್ ಸಹೋದರ ರವಿ ಮತ್ತು ಆತನ ಪತ್ನಿ ಕೂಡಾ ಜೈಲು ಪಾಲಾಗಿದ್ದರು. ಹೀಗಾಗಿ ಹೆತ್ತವರ ಜೊತೆ ಜೈಲಿಗೆ ಹೋಗಿದ್ದ ನಾಲ್ಕು ವರ್ಷದ ಬಾಲಕಿ ಭಾರತಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಪೊಲೀಸರು ತಮ್ಮ ಮೇಲೆ ಮತ್ತು ಬಾಲಕಿ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆಯಿಂದಲೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ಹೆತ್ತವರು ಆರೋಪಿಸಿ ಕಲಬುರಗಿ ನಗರದ ಜಿಲ್ಲಾ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಜೇವರ್ಗಿ ಪೊಲೀಸರ ವಿರುದ್ಧ ಕ್ರಮಕ್ಕೆ ವಿವಿಧ ಮುಖಂಡರು ಆಗ್ರಹ ಮಾಡುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಬಾಗಿಯಾದ ಶಾಸಕ ಡಾ.ಅಜಯಸಿಂಗ್ ಜೇವರ್ಗಿ PSI ಮಂಜುನಾಥ ಹೂಗಾರ್ ಅವರನ್ನು ಅಮಾನತು ಮಾಡುವಂತೆ ಆಗ್ರಹ ಮಾಡಿ ಕಳೆದ ನಾಲ್ಕು ಗಂಟೆಯಿಂದ ರಸ್ತೆ ಮೇಲೆ ಕುಳಿತು ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ‌ ಶಾಸಕ ಡಾ.ಅಜಯಸಿಂಗ್ ಕೂಡಾ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದಾರೆ

ಗ್ರಾಮ ಪಂಚಾಯತಿ ಗಲಾಟೆ: ಹೆತ್ತವರ ಜೊತೆ ಜೈಲು‌ ಸೇರಿದ್ದ 3 ವರ್ಷದ ಬಾಲಕಿ ಸಾವು

Published On - 6:12 pm, Sun, 3 January 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ