ಕ್ವಾರಂಟೈನ್​ನಲ್ಲಿದ್ದ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನೀಡದ ವೈದ್ಯರು, ಶಿಶು ಬಲಿ

|

Updated on: May 19, 2020 | 4:16 PM

ಯಾದಗಿರಿ: ಗರ್ಭಿಣಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ಜನಿಸಿದ ಮಗು ಮೃತ ಪಟ್ಟಿದೆ ಎಂಬ ಆರೋಪ ಯಾದಗಿರಿ ಜಿಲ್ಲಾಸ್ಪತ್ರೆಯ ವೈದ್ಯರ ಮೇಲೆ ಬಂದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೋತಪೇಟ ಮೇಲಿನ ತಾಂಡಾದ ಗರ್ಭಿಣಿ ನಿನ್ನೆ ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಗರ್ಭಿಣಿ ಪುಣೆಯಿಂದ ಬಂದಿದ್ದು, ಭೀಮರಾಯನಗುಡಿ ಬಳಿಯ ಕ್ವಾರಂಟೈನ್ ಕೇಂದ್ರದಲ್ಲಿದ್ದರು. ಗರ್ಭಿಣಿ ಪುಣೆಯಿಂದ ಬಂದಿದ್ದಾಳೆ ಎಂಬ ಕಾರಣಕ್ಕೆ ಯಾದಗಿರಿ ಜಿಲ್ಲಾಸ್ಪತ್ರೆಯ ವೈದ್ಯರು ಆಕೆಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಸತತ 12 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ಒದ್ದಾಡಿದ್ರು ವೈದ್ಯರು ಚಿಕಿತ್ಸೆ […]

ಕ್ವಾರಂಟೈನ್​ನಲ್ಲಿದ್ದ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನೀಡದ ವೈದ್ಯರು, ಶಿಶು ಬಲಿ
Follow us on

ಯಾದಗಿರಿ: ಗರ್ಭಿಣಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ಜನಿಸಿದ ಮಗು ಮೃತ ಪಟ್ಟಿದೆ ಎಂಬ ಆರೋಪ ಯಾದಗಿರಿ ಜಿಲ್ಲಾಸ್ಪತ್ರೆಯ ವೈದ್ಯರ ಮೇಲೆ ಬಂದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೋತಪೇಟ ಮೇಲಿನ ತಾಂಡಾದ ಗರ್ಭಿಣಿ ನಿನ್ನೆ ಹೆರಿಗೆ ನೋವಿನಿಂದ ಬಳಲುತ್ತಿದ್ದರು.

ಗರ್ಭಿಣಿ ಪುಣೆಯಿಂದ ಬಂದಿದ್ದು, ಭೀಮರಾಯನಗುಡಿ ಬಳಿಯ ಕ್ವಾರಂಟೈನ್ ಕೇಂದ್ರದಲ್ಲಿದ್ದರು. ಗರ್ಭಿಣಿ ಪುಣೆಯಿಂದ ಬಂದಿದ್ದಾಳೆ ಎಂಬ ಕಾರಣಕ್ಕೆ ಯಾದಗಿರಿ ಜಿಲ್ಲಾಸ್ಪತ್ರೆಯ ವೈದ್ಯರು ಆಕೆಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಸತತ 12 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ಒದ್ದಾಡಿದ್ರು ವೈದ್ಯರು ಚಿಕಿತ್ಸೆ ನೀಡಿಲ್ಲ. ಗರ್ಭಿಣಿ ಮಹಿಳೆ ತೀವ್ರ ರಕ್ತಸ್ರಾವದಿಂದ ಬಳಲಿದ್ದಾರೆ.

ಕೊನೆ ಸಮಯದಲ್ಲಿ ಕಲಬುರ್ಗಿ ಜಿಲ್ಲಾಸ್ಪತ್ರೆಗೆ ಹೋಗುವಂತೆ ತಿಳಿಸಿದ್ದಾರೆ. ಕಲಬುರ್ಗಿ ಜಿಲ್ಲಾಸ್ಪತ್ರೆಯಲ್ಲಿ ಇವತ್ತು ಹೆರಿಗೆ ನಂತರ ಮಗು ಮೃತಪಟ್ಟಿದೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣ ಜನಿಸಿದ ಕೆಲ ಹೊತ್ತಿನಲ್ಲೇ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Published On - 3:42 pm, Tue, 19 May 20