AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆಗೆ ಕಾರಣವಾಯ್ತಾ ಆ ಒಂದು ಹೈಪ್ರೊಫೈಲ್ ಕೇಸ್?

ಯಾದಗಿರಿಯ ಪಿಎಸ್​ಐ ಅನುಮಾಸ್ಪದ ಸಾವು ಬೆನ್ನಲ್ಲೇ ಸಿಸಿಬಿ ಇನ್​​​ಸ್ಪೆಕ್ಟರ್ ತಿಮ್ಮೆಗೌಡ ಆತ್ಮಹತ್ಯೆ ಶರಣಾಗಿದ್ದಾರೆ. ರಾಮನಗರದ ಕಗ್ಗಲಿಪುರದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ರೆ, ತಿಮ್ಮೇಗೌಡ ಸಾವಿನ ಸುತ್ತ ಸಂಶಯಗಳು ಹುಟ್ಟಿಕೊಂಡಿದ್ದು, ತಿಮ್ಮೇಗೌಡ ಆತ್ಮಹತ್ಯೆಗೆ ಕಾರಣವಾಯ್ತಾ ಆ ಒಂದು ಪ್ರಕರಣ?

ಸಿಸಿಬಿ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆಗೆ ಕಾರಣವಾಯ್ತಾ ಆ ಒಂದು ಹೈಪ್ರೊಫೈಲ್ ಕೇಸ್?
ಮೃತ ತಿಮ್ಮೇಗೌಡ
ರಾಚಪ್ಪಾಜಿ ನಾಯ್ಕ್
| Edited By: |

Updated on: Aug 05, 2024 | 8:02 PM

Share

ಬೆಂಗಳೂರು/ರಾಮನಗರ, (ಆಗಸ್ಟ್​ 05): ಪಿಎಸ್ಐ ಪರಶುರಾಮ್ ನಿಗೂಢ ಸಾವಿನ ಬೆನ್ನಲ್ಲೇ ಸಿಸಿಬಿ ಇನ್ಸ್​ಪೆಕ್ಟರ್​​ ತಿಮ್ಮೆಗೌಡ ಸಿಸಿಬಿ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿದ್ದು, ಇದು ಪೊಲೀಸ್ ಇಲಾಖೆಯೆ ಬೆಚ್ಚಿ ಬೀಳುವಂತೆ ಮಾಡಿದೆ. ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಇನ್ಸ್ ಪೆಕ್ಟರ್ ತಿಮ್ಮೇಗೌಡ ರಾಮನಗರ ಜಿಲ್ಲೆ ಬಿಡದಿಯ ಕಗ್ಗಲಿಪುರದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಇನ್ಸ್ ಪೆಕ್ಟರ್ ಸಾವಿನ ಹಿಂದೆ ಹಲವು ಅನುಮಾನ ಮೂಡಿವೆ. ಆತ್ಮಹತ್ಯೆ ವೈಯಕ್ತಿಕ ಕಾರಣಕ್ಕೋ ಅಥವಾ ಕೆಲಸದ ಒತ್ತಡವೋ ಎನ್ನುವ ಶಂಕೆ ಹುಟ್ಟಿಕೊಂಡಿದೆ.

1998ರ ಬ್ಯಾಚ್ ನ ಪೊಲೀಸ್ ಅಧಿಕಾರಿಯಾದ ತಿಮ್ಮೇಗೌಡ ಸದ್ಯ ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಇನ್ಸ್​​ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಆದ್ರೆ ಅದೇನಾಯ್ತೋ ಏನೋ ನಿನ್ನೆ (ಆಗಸ್ಟ್​ 04) ರಾತ್ರಿ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಗಚಗುಪ್ಪೆ ಮುಖ್ಯ ರಸ್ತೆಯಲ್ಲಿರುವ ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು(ಆಗಸ್ಟ್ 05) ಬೆಳಗ್ಗೆ ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರಿಗೆ ಇನ್ಸ್ ಪೆಕ್ಟರ್ ತಿಮ್ಮೇಗೌಡ ಅನ್ನೋದು ಗೊತ್ತಾಗಿತ್ತು. ಬಳಿಕ ಕುಟುಂಬಸ್ಥರಿಗೂ ಮಾಹಿತಿ ನೀಡಿದ್ದು, ಅವರು ಮೈಸೂರಿನಿಂದ ಸ್ಥಳಕ್ಕಾಗಮಿಸಿ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಬಿಡದಿಯಲ್ಲಿ ಆತ್ಮಹತ್ಯೆ

ಇನ್ಸ್​ಪೆಕ್ಟರ್ ಸಾವಿಗೆ ಕಾರಣವಾಯ್ತಾ ಹೈಪ್ರೊಫೈಲ್ ಕೇಸ್?

ಸಿಸಿಬಿಯಲ್ಲಿ ಇತ್ತೀಚೆಗೆ ಹೈಪ್ರೊಫೈಲ್ ಲೈಂಗಿಕ ದೌರ್ಜನ್ಯ ಪ್ರಕರಣ ಒಂದು ದಾಖಲಾಗಿತ್ತು..ಅದರ ತನಿಕಾಧಿಕಾರಿಯಾಗಿದ್ದ ತಿಮ್ಮೇಗೌಡರಿಗೆ ಆರೋಪಿಗಳನ್ನು ಬಂಧಿಸಿದ್ದ ವಿಚಾರಕ್ಕೆ ಸಂಬಂಧ ಪಟ್ಟಂತೆ ಒತ್ತಡಗಳು ಇತ್ತು ಅನ್ನೋ ಮಾತು ಕೂಡ ಇದೆ ಇದರ ಜೊತೆಗೆ 2004 ರಲ್ಲಿ ಹಾಸನದಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿದ್ದಾಗ ಈತನ ಮೇಲೆ ಒಂದು ಅತ್ಯಾಚಾರ ಪ್ರಕರಣ ಕೂಡ ದಾಖಲಾಗಿತ್ತು. ಸಂತ್ರಸ್ಥೆಗೆ ಮಗು ಕೂಡ ಜನಿಸಿದ್ದು ತಿಮ್ಮೇಗೌಡರ ಡಿಎನ್ಎ ಮ್ಯಾಚ್ ಆಗಿತ್ತು. ಆ ವಿಚಾರವಾಗಿ ಕೇಸ್ ನ್ಯಾಯಾಲಯದಲ್ಲಿ ಕಮಿಟ್ ಆಗಿದ್ದು, ಆಗಸ್ಟ್ 31 ಕ್ಕೆ ವಿಚಾರಣೆ ದಿನಾಂಕ ಕೂಡ ನಿಗದಿಯಾಗಿತ್ತು..ಈ ವಿಚಾರವಾಗಿಯು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನುವ ಮಾತು ಕೂಡ ಇದೆ.

ಇದಿಷ್ಟೇ ಅಲ್ಲ ಅತ್ತಿಬೆಲೆ ಪಟಾಕಿ ದುರಂತ ಸಂಭವಿಸಿದಾಗ ಅತ್ತಿಬೆಲೆ ಠಾಣೆ ಇನ್ಸ್ ಪೆಕ್ಟರ್ ಆಗಿದ್ದಿದ್ದು ಕೂಡ ಇದೇ ತಿಮ್ಮೇಗೌಡ. ಆ ಸಂದರ್ಭದಲ್ಲಿಯೂ ತಿಮ್ಮೇಗೌಡ ಅಮಾನತ್ತು ಆಗಿದ್ದರು. ಹೀಗೆ ತಿಮ್ಮೇಗೌಡ ಸಾವಿನ ಹಿಂದೆ ಸಾಲು ಸಾಲು ವೈಯಕ್ತಿಕ ಕಾರಣ ಸೇರಿದಂತೆ ಕೆಲಸದ ಒತ್ತಡದ ಮಾತು ಕೂಡ ಕೇಳಿ ಬರುತ್ತಿವೆ.

ಸದ್ಯ ಕೆಂಗೇರಿಯ ಆರ್ ಆರ್.ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಮೈಸೂರಿನ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು, ನಾಳೆ ಹುಟ್ಟೂರು ಚನ್ನಪಟ್ಟಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಸದ್ಯ ಪತ್ನಿ ಸುನಿತಾ ನೀಡಿದ ದೂರಿನ ಆಧಾರದ ಮೇಲೆ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಬಳಿಕ ಸಾವಿನ ಸತ್ಯಾಂಶ ಬೆಳಕಿಗೆ ಬರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ