ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ: ಕಿಡಿಗೇಡಿಗಳ ಕೃತ್ಯಕ್ಕೆ ಅಭಿಮಾನಿಗಳ ಕಣ್ಣೀರು, ಆಕ್ರೋಶ
ಕಳೆದ ಒಂದೂವರೆ ವರ್ಷದ ಹಿಂದೆಯಷ್ಟೇ ವಿಷ್ಣುವರ್ಧನ್ ಪ್ರತಿಮೆ ಸ್ಥಾಪನೆಯಾಗಿತ್ತು. ಈ ಹಿಂದೆಯೂ ಕಿಡಿಗೇಡಿಗಳು ಪ್ರತಿಮೆಯನ್ನೇ ಹೊತ್ತೊಯ್ದಿದ್ದರು.

ಬೆಂಗಳೂರು: ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಇರುವ ನಟ ಡಾ.ವಿಷ್ಣುವರ್ಧನ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ಸ್ಥಳದಲ್ಲಿ ಜಮಾವಣೆಯಾಗುತ್ತಿರುವ ವಿಷ್ಣು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ವಿಷ್ಣುವರ್ಧನ್ ಪ್ರತಿಮೆ ಮರು ಪ್ರತಿಷ್ಠಾಪನೆ ಮಾಡಲು ಒತ್ತಾಯಿಸಿದ ಅಭಿಮಾನಿಗಳು, ಪ್ರತಿಮೆ ಧ್ವಂಸ ಮಾಡಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು, ಸಚಿವ ಸೋಮಣ್ಣ ಪ್ರತಿಭಟನಾ ಸ್ಥಳಕ್ಕೆ ಬಂದು ಪ್ರತಿಮೆ ಮರುಸ್ಥಾಪಿಸುವ ಭರವಸೆ ನೀಡಬೇಕು ಎಂದು ಅಭಿಮಾನಿಗಳು ಕಣ್ಣೀರು ಹಾಕುತ್ತ ಆಗ್ರಹಿಸಿದ್ದಾರೆ.
ಕಳೆದ ಒಂದೂವರೆ ವರ್ಷದ ಹಿಂದೆಯಷ್ಟೇ ವಿಷ್ಣುವರ್ಧನ್ ಪ್ರತಿಮೆ ಸ್ಥಾಪನೆಯಾಗಿತ್ತು. ಈ ಹಿಂದೆಯೂ ಕಿಡಿಗೇಡಿಗಳು ಅವರ ಪ್ರತಿಮೆಯನ್ನೇ ಹೊತ್ತೊಯ್ದಿದ್ದರು. ಆದರೆ ಇದೀಗ ಕಿಡಿಗೇಡಿಗಳು ಪ್ರತಿಮೆಯನ್ನು ಧ್ವಂಸಗೊಳಸಿದ್ದಾರೆ. ವಿಷ್ಣು ಮೇಲೆ ಯಾಕೆ ಪದೇಪದೆ ದಬ್ಬಾಳಿಕೆ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ. ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷ್ಣುವರ್ಧನ ಕುರಿತು ತೆಲುಗು ನಟನ ಉದ್ದಟತನದ ಹೇಳಿಕೆಗೆ ಕಿಡಿಕಾರಿದ ಸ್ಯಾಂಡಲ್‌ವುಡ್