ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ಗೆ ಆತ್ಮೀಯ ಬೀಳ್ಕೊಡುಗೆ
ರಾಜ್ಯಸರ್ಕಾರದ ನೂತನ ಮುಖ್ಯಕಾರ್ಯದರ್ಶಿ ರವಿಕುಮಾರ್, ವಿಜಯ್ ಭಾಸ್ಕರ್ ಅವರನ್ನು ಸನ್ಮಾನಿಸಿ, ಬೀಳ್ಕೊಟ್ಟರು.
ಬೆಂಗಳೂರು: ಇಂದು ನಿವೃತ್ತಿ ಹೊಂದಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಬೀಳ್ಕೊಡುಗೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಐಎಎಸ್ ಅಧಿಕಾರಿಗಳು, ಕಾರ್ಯಾಲಯದ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.
ರಾಜ್ಯಸರ್ಕಾರದ ನೂತನ ಮುಖ್ಯಕಾರ್ಯದರ್ಶಿ ರವಿಕುಮಾರ್, ವಿಜಯ್ ಭಾಸ್ಕರ್ ಅವರನ್ನು ಸನ್ಮಾನಿಸಿ, ಬೀಳ್ಕೊಟ್ಟರು.