AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆ ವಿರುದ್ಧ ಅನ್ನದಾತರ ಆಕ್ರೋಶ.. ಮಾರ್ಚ್ 26ರಂದು ಕರ್ನಾಟಕ ಬಂದ್‌

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಮಸೂದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ 117ನೇ ದಿನಕ್ಕೆ ಕಾಲಿಟ್ಟಿದೆ. ಇದೇ ಮಾರ್ಚ್‌ 26 ರಂದು ರೈತರ ಹೋರಾಟ ನಾಲ್ಕು ತಿಂಗಳು ಪೂರ್ಣಗೊಳಿಸಲಿದ್ದು, ರೈತ ಸಂಘಟನೆಗಳು ಮಾರ್ಚ್ 26ರಂದು ಕರ್ನಾಟಕ ಬಂದ್‌ಗೆೆ ನಿರ್ಧರಿಸಿವೆ.

ಕೃಷಿ ಕಾಯ್ದೆ ವಿರುದ್ಧ ಅನ್ನದಾತರ ಆಕ್ರೋಶ.. ಮಾರ್ಚ್ 26ರಂದು ಕರ್ನಾಟಕ ಬಂದ್‌
ಆಯೇಷಾ ಬಾನು
|

Updated on: Mar 23, 2021 | 7:34 AM

Share

ಬೆಂಗಳೂರು: ಕೃಷಿ ಕಾಯ್ದೆ ತಿದ್ದು ಪಡಿ ವಾಪಸ್‌ ಆಗ್ಬೇಕು.. ನೂತನ ಕೃಷಿ ಕಾಯ್ದೆ ತೊಲಗಬೇಕು ಅಂತಾ 116 ದಿನಗಳಿಂದಲೂ ರೈತರು ಹೋರಾಟ ಮಾಡ್ತಿದ್ದಾರೆ. ಅದ್ರಲ್ಲೂ ದೆಹಲಿ ಬಳಿಯೇ ಠಿಕಾಣಿ ಹೂಡಿ ಕೇಂದ್ರಕ್ಕೆ ಬಿಸಿ ಮುಟ್ಟಿಸುತ್ತಿದ್ದಾರೆ. ಅನ್ನದಾತರ ಈ ಹೋರಾಟ ನಿನ್ನೆ ರಾಜ್ಯ ರಾಜಧಾನಿಗೂ ಎಂಟ್ರಿಯಾಗಿತ್ತು. ಕೃಷಿ ಕಾಯ್ದೆ ವಿರುದ್ಧ ತಿರುಗಿಬಿದ್ದಿರೋ ರೈತರು ನಿನ್ನೆ ಬೆಂಗಳೂರು ಚಲೋಗೆ ಕರೆ ನೀಡಿದ್ರು. ಹೀಗಾಗಿ ಸಾವಿರಾರು ರೈತರು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬಳಿ ಜಮಾವಣೆಗೊಂಡು ಬಳಿಕ ವಿಧಾನಸೌಧದತ್ತ ತೆರಳಿದ್ರು. ಆದ್ರೆ ಮಾರ್ಗ ಮಧ್ಯದಲ್ಲೇ ಪೊಲೀಸರು ವಿಧಾನಸೌಧದತ್ತ ಹೋಗದಂತೆ ತಡೆದ್ರು. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೀತು. ಈ ವೇಳೆ ಎಂಟ್ರಿಯಾದ ಹಿರಿಯ ಪೊಲೀಸ್ ಅಧಿಕಾರಿಗಳು ರೈತರ ಱಲಿಯನ್ನ ಫ್ರೀಡಂ ಪಾರ್ಕ್‌ನತ್ತ ತಿರುಗಿಸಿದ್ರು.

ಮಾರ್ಚ್‌ 26 ರಂದು ಕರ್ನಾಟಕ ಬಂದ್‌ ಇನ್ನು ಇದೇ ಮಾರ್ಚ್‌ 26 ರಂದು ರೈತರ ಹೋರಾಟ ನಾಲ್ಕು ತಿಂಗಳು ಪೂರ್ಣಗೊಳಿಸಲಿದೆ. ಹೀಗಾಗಿ ಆವತ್ತು ಭಾರತ್‌ ಬಂದ್‌ ಆಚರಿಸಲು ರೈತ ಸಂಘಟನೆಗಳು ಕರೆ ನೀಡಿವೆ. ರಾಜ್ಯದಲ್ಲೂ ಕರ್ನಾಟಕ ಬಂದ್‌ ಹೆಸರಲ್ಲಿ ಆವತ್ತು ಮುಷ್ಕರ ನಡೆಸಲು ರೈತರು ತೀರ್ಮಾನಿಸಿದ್ದಾರೆ. ಇನ್ನು ಸಮಾವೇಶದ ನೇತೃತ್ವ ವಹಿಸಿದ್ದ ರಾಷ್ಟ್ರೀಯ ರೈತ ನಾಯಕ ರಾಕೇಶ್ ಸಿಂಗ್ ಟಿಕಾಯತ್, ಕೇಂದ್ರದಲ್ಲಿರೋದು ಬಿಜೆಪಿ ಸರ್ಕಾರ ಅಲ್ಲಾ, ಮೋದಿ ಸರ್ಕಾರ ಅಂತಾ ಗುಡುಗಿದ್ರು.

ರೈತರ ಕಿಚ್ಚು ಹೆಚ್ಚಾಗ್ತಿದ್ದಂತೆ ಸಿಎಂ ಬಿಎಸ್‌ವೈ ಸೂಚನೆಯಂತೆ ಸ್ಥಳಕ್ಕೆ ಕೃಷಿ ಸಚಿವ ಬಿಸಿ ಪಾಟೀಲ್‌ ಎಂಟ್ರಿಯಾಗಿದ್ರು. 23 ಬೇಡಿಕೆಗಳ ರೈತರ ಮನವಿ ಸ್ವೀಕರಿಸಿದ ಸಚಿವರು , ರೈತರ ಬೇಡಿಕೆಗಳನ್ನ ಸರ್ಕಾರದ ಗಮನಕ್ಕೆ ತರುತ್ತೇನೆ . ಈ ಬಗ್ಗೆ ಸಿಎಂ ನಿರ್ಧಾರ ಕೈಗೊಳ್ತಾರೆ ಅಂದ್ರು .

ಒಟ್ನಲ್ಲಿ ಸಂಯುಕ್ತ ಹೋರಾಟ ಸಮಿತಿ, ಐಕ್ಯ ಹೋರಾಟ ಸಮಿತಿ ಕರೆ ನೀಡಿದ್ದ ಱಲಿಯಲ್ಲಿ ಸಾವಿರಾರು ರೈತರು ಪಾಲ್ಗೊಂಡಿದ್ರು. ಕೃಷಿಕರ ಹೋರಾಟ ಕಿಚ್ಚು ರಂಗೇರಿದೆ. ಕರ್ನಾಟಕ ಜನ ಸದ್ಯದಲ್ಲೇ ಮತ್ತೊಂದು ಬಂದ್‌ ಎದುರಿಸಬೇಕಾಗಿದೆ.

ಇದನ್ನೂ ಓದಿ: ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಮಹಿಳೆಯರ ಬೆಂಬಲ; ಕೃಷಿ ಕಾಯ್ದೆ ಹಿಂಪಡೆಯಲು ಒತ್ತಾಯ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ