ಶಾಮನೂರು ಶಿವಶಂಕರಪ್ಪ ಕುಟುಂಬದ ಸಕ್ಕರೆ ಕಾರ್ಖಾನೆಯ ಧೂಳಿನ ಕಾಟಕ್ಕೆ ಬೇಸತ್ತು.. DySP ಎದುರು ರೈತ ಆತ್ಮಹತ್ಯೆಗೆ ಯತ್ನ

ಸಕ್ಕರೆ ಕಾರ್ಖಾನೆಯ ಹಾರು ಬೂದಿಯಿಂದ ಬೇಸತ್ತ ರೈತನೊಬ್ಬ ಇಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ನಡೆದಿದೆ.

ಶಾಮನೂರು ಶಿವಶಂಕರಪ್ಪ ಕುಟುಂಬದ ಸಕ್ಕರೆ ಕಾರ್ಖಾನೆಯ ಧೂಳಿನ ಕಾಟಕ್ಕೆ ಬೇಸತ್ತು.. DySP ಎದುರು ರೈತ ಆತ್ಮಹತ್ಯೆಗೆ ಯತ್ನ
DySP ಎದುರು ರೈತ ಆತ್ಮಹತ್ಯೆಗೆ ಯತ್ನ
Follow us
KUSHAL V
|

Updated on: Jan 23, 2021 | 10:59 PM

ದಾವಣಗೆರೆ: ಸಕ್ಕರೆ ಕಾರ್ಖಾನೆಯ ಹಾರು ಬೂದಿಯಿಂದ ಬೇಸತ್ತ ರೈತನೊಬ್ಬ ಇಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ನಡೆದಿದೆ. ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದ ಒಡೆತನದಲ್ಲಿರುವ ಕಾರ್ಖಾನೆಯ ಧೂಳಿನ ಕಾಟಕ್ಕೆ ಬೇಸತ್ತು ರೈತ ವಿಷ ಕುಡಿದು ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ.

ಚಿಕ್ಕಬಿದರಿನಲ್ಲಿ ರೈತ ಹಾಲೇಶಪ್ಪ AC ಮಮತಾ ಹಾಗೂ DySP ತಾಮ್ರಧ್ವಜ ಸಮ್ಮುಖದಲ್ಲೇ ವಿಷ ಕುಡಿಯಲು ಯತ್ನಿಸಿದ್ದಾನೆ. ಆದರೆ, ಸಮಯಪ್ರಜ್ಞೆ ತೋರಿದ ಪೊಲೀಸರು ಆತನ ಕೈಯಲ್ಲಿದ್ದ ವಿಷದ ಬಾಟಲಿ ಕಸಿದುಕೊಂಡರು.

ಹಾಲೇಶಪ್ಪ ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು? ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಯಿಂದ ಹೊರಬರುತ್ತಿದ್ದ ಹಾರು ಬೂದಿಯ ಉಪಟಳವನ್ನು ನಿಲ್ಲಿಸುವಂತೆ ಸ್ಥಳೀಯರು ಇಂದು ಗ್ರಾಮಕ್ಕೆ ಭೇಟಿ ನೀಡಿದ್ದ AC ಮಮತಾ ಮತ್ತು DySP ತಾಮ್ರಧ್ವಜ ಅವರ ಬಳಿ ಮನವಿ ಮಾಡಿದರು.

ಹಾರು ಬೂದಿಯಿಂದ ಸುಮಾರು 20 ವರ್ಷಗಳ ಕಾಲ ನಲುಗಿ ಹೋಗಿದ್ದೇವೆ. ಅಧಿಕಾರಿಗಳು ಬರ್ತಾರೆ, ಹೋಗ್ತಾರೆ. ಆದರೆ, ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಗ್ರಾಮಸ್ಥರು ಗರಂ ಆದರು. ಇದಕ್ಕೆ, ಸ್ಪಂದಿಸಿದ ಅಧಿಕಾರಿಗಳು 20 ದಿನದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು. ಈ ನಡುವೆ, ರೈತ ಹಾಲೇಶಪ್ಪ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಪತ್ನಿ ಮೇಲೆ ಹಲ್ಲೆಗೈದು ಪತಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್