ಕೈಕೊಟ್ಟ ಹಿಂಗಾರು ಬೆಳೆ: ಸಾಲಬಾಧೆಯಿಂದ ರೈತ ಆತ್ಮಹತ್ಯೆ
ಸಾಲಬಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಹುಬ್ಬಳ್ಳಿ ತಾಲೂಕಿನ ಕೋಳಿವಾಡ ಗ್ರಾಮದ ಬಳಿ ನಡೆದಿದೆ.
ಹುಬ್ಬಳ್ಳಿ: ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ತಾಲೂಕಿನ ಕೋಳಿವಾಡ ಗ್ರಾಮದ ಬಳಿ ನಡೆದಿದೆ.
1.5 ಲಕ್ಷ ರೂಪಾಯಿಗೂ ಹೆಚ್ಚು ಸಾಲ ಮಾಡಿಕೊಂಡಿದ್ದ ರೈತ ವೀರಸಂಗಪ್ಪ ಗುದ್ದಿನ ಮುಂಗಾರು ಬೆಳೆ, ಹಿಂಗಾರು ಬೆಳೆ ಕೈಕೊಟ್ಟ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕ್ ಆಫ್ ಬರೋಡಾದಲ್ಲಿ 1.5 ಲಕ್ಷ ರೂ. ಜೊತೆಗೆ ಕೈಗಡವಾಗಿಯೂ ಸಾಲ ಮಾಡಿದ್ದರು. ಸಾಲವನ್ನು ತೀರಿಸಲು ಸಾಧ್ಯವಾಗದೇ ತನ್ನ ಜಮೀನಿನಲ್ಲಿಯೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಈ ಪ್ರಕರಣ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದೆ.
ಕೈ ಕೊಟ್ಟ ಬೆಳೆ: ನೊಂದ ಅನ್ನದಾತ ನೇಣಿಗೆ ಶರಣು