ರೈತ ಮುಖಂಡ ಕುರುಬೂರು ಶಾಂತಕುಮಾರ್ ಬೆಂಗಳೂರಿಗೆ ಏರ್​ಲಿಫ್ಟ್: ಮಣಿಪಾಲ್ ಆಸ್ಪತ್ರೆಗೆ ದಾಖಲು

ಪಂಜಾಬಿನಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಏರ್ ಆಂಬುಲೆನ್ಸ್ ಮೂಲಕ ಕುರುಬೂರು ಶಾಂತಕುಮಾರ್ ಅವರನ್ನು ಪಟಿಯಾಲದಿಂದ ಬೆಂಗಳೂರಿಗೆ ಕರೆತರಲಾಯಿತು.

ರೈತ ಮುಖಂಡ ಕುರುಬೂರು ಶಾಂತಕುಮಾರ್ ಬೆಂಗಳೂರಿಗೆ ಏರ್​ಲಿಫ್ಟ್: ಮಣಿಪಾಲ್ ಆಸ್ಪತ್ರೆಗೆ ದಾಖಲು
ಕುರುಬೂರು ಶಾಂತಕುಮಾರ್

Updated on: Feb 16, 2025 | 4:38 PM

ಬೆಂಗಳೂರು, ಫೆಬ್ರವರಿ 16: ಪಂಜಾಬ್​ನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಭಾನುವಾರ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌ ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ.

ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಶಾಂತಕುಮಾರ್ ಅವರು ಗಾಯಗೊಂಡು ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಆಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
‌
ಈ ಮಧ್ಯೆ, ದೆಹಲಿ ನಿವಾಸಿ ಆಯುಕ್ತರಾದ ಇಂಕೊಂಗ್ಲ ಜಮೀರ್ ಅವರು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪಟಿಯಾಲದ ಆಸ್ಪತ್ರೆ ವೈದ್ಯರ ಜೊತೆ ಸತತ ಸಂಪರ್ಕದಲ್ಲಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ನಿನ್ನೆ ಏರ್ ಆಂಬುಲೆನ್ಸ್ ಸಜ್ಜುಗೊಳಿಸಿದ್ದರು.

ಇಬ್ಬರು ಸಹಾಯಕರು ಹಾಗೂ ವೈದ್ಯರ ತಂಡದೊಂದಿಗೆ ಇಂದು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.

ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡ ಕುರುಬೂರು ಶಾಂತಕುಮಾರ್: ಪಂಜಾಬ್​ನಿಂದ ಬೆಂಗಳೂರಿಗೆ ಏರ್​​ ಲಿಫ್ಟ್

ಕುರುಬೂರು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆಸಿಕೊಳ್ಳಲು ವ್ಯವಸ್ಥೆ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಭಾನುವಾರ ಬೆಳಗ್ಗೆ ಟ್ವೀಟ್ ಮಾಡಿದ್ದರು. ಅದರ ಬೆನ್ನಲ್ಲೇ, ಶಾಂತಕುಮಾರ್ ಅವರನ್ನು ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿದ್ದರಾಮಯ್ಯ ಟ್ವೀಟ್


‘ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ನಮ್ಮ ಸರ್ಕಾರ ವ್ಯವಸ್ಥೆ ಮಾಡಿದೆ. ಏರ್ ಆಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಚಂಡೀಗಡದಿಂದ ಬೆಂಗಳೂರಿಗೆ ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಬೆಳಗ್ಗೆ ಟ್ವೀಟ್ ಮಾಡಿದ್ದರು.

ರಸ್ತೆ ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us