ಬೆಂಗಳೂರು ವಿಮಾನ ನಿಲ್ದಾಣದಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್, ಯದುವೀರ್ ಸಿಂಗ್​ಗೆ ಸ್ವಾಗತ

ಬೆಂಗಳೂರು: ಕರ್ನಾಟಕದ ರೈತ ಚಳುವಳಿಯನ್ನು ಬಲಗೊಳಿಸಲು ರಾಷ್ಟ್ರೀಯ ನಾಯಕರಾದ ರಾಕೇಶ್ ಟಿಕಾಯಿತ್ ಮತ್ತು ಯದುವೀರ್ ಸಿಂಗ್ ಅವರನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಇಂದು ಬೆಂಗಳೂರಿನ ಆನಂದರಾವ್ ಸರ್ಕಾರದಲ್ಲಿರುವ ಗಾಂಧಿ ಪ್ರತಿಮೆಗೆ ಕೇಂದ್ರದ ರೈತ ನಾಯಕರು ರಾಜ್ಯದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಜೊತೆಗೂಡಿ ಮಾಲಾರ್ಪಣೆ ಮಾಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನಂತರ ಅವರನ್ನು ಶಿವಮೊಗ್ಗಕ್ಕೆ ಬೀಳ್ಕೊಡಲಾಯಿತು. ಕಿಸಾನ್ ಸಂಯುಕ್ತ ಮೋರ್ಚಾ ರಾಷ್ಟ್ರೀಯ ಮುಖಂಡರುಗಳಾದ ರಾಕೇಶ್ ಟಿಕಾಯತ್, ಯದುವೀರ್ ಸಿಂಗ್, ದರ್ಶನ್ ಪಾಲ್ ಅವರನ್ನು ಬೆಂಗಳೂರಿನ ಮೌರ್ಯ ಸರ್ಕಲ್​ನಲ್ಲಿ […]

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್, ಯದುವೀರ್ ಸಿಂಗ್​ಗೆ ಸ್ವಾಗತ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್, ಯದುವೀರ್ ಸಿಂಗ್​ಗೆ ಸ್ವಾಗತ

Updated on: Mar 20, 2021 | 2:31 PM

ಬೆಂಗಳೂರು: ಕರ್ನಾಟಕದ ರೈತ ಚಳುವಳಿಯನ್ನು ಬಲಗೊಳಿಸಲು ರಾಷ್ಟ್ರೀಯ ನಾಯಕರಾದ ರಾಕೇಶ್ ಟಿಕಾಯಿತ್ ಮತ್ತು ಯದುವೀರ್ ಸಿಂಗ್ ಅವರನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಇಂದು ಬೆಂಗಳೂರಿನ ಆನಂದರಾವ್ ಸರ್ಕಾರದಲ್ಲಿರುವ ಗಾಂಧಿ ಪ್ರತಿಮೆಗೆ ಕೇಂದ್ರದ ರೈತ ನಾಯಕರು ರಾಜ್ಯದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಜೊತೆಗೂಡಿ ಮಾಲಾರ್ಪಣೆ ಮಾಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನಂತರ ಅವರನ್ನು ಶಿವಮೊಗ್ಗಕ್ಕೆ ಬೀಳ್ಕೊಡಲಾಯಿತು.

ಕಿಸಾನ್ ಸಂಯುಕ್ತ ಮೋರ್ಚಾ ರಾಷ್ಟ್ರೀಯ ಮುಖಂಡರುಗಳಾದ ರಾಕೇಶ್ ಟಿಕಾಯತ್, ಯದುವೀರ್ ಸಿಂಗ್, ದರ್ಶನ್ ಪಾಲ್ ಅವರನ್ನು ಬೆಂಗಳೂರಿನ ಮೌರ್ಯ ಸರ್ಕಲ್​ನಲ್ಲಿ ಸ್ವಾಗತಿಸಿ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಶಿವಮೊಗ್ಗ ಕಿಸಾನ್ ಪಂಚಾಯತ್ ನಲ್ಲಿ ಭಾಗವಹಿಸಲು ಬೆಂಗಳೂರಿನಿಂದ ರಾಲಿ ಮೂಲಕ ರಾಜ್ಯ ರೈತ ಮುಖಂಡರಾದ ಕುರುಬೂರು ಶಾಂತಕುಮಾರ್. ಚುಕ್ಕಿ ನಂಜುಂಡಸ್ವಾಮಿ. ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್ ಅವರ ಜೊತೆಯಲ್ಲಿ ತೆರಳಿದರು.

Published On - 2:28 pm, Sat, 20 March 21