ದಾಳಿಂಬೆ ಬೆಳೆಗೆ ದುಂಡಾಣು ಅಂಗ ಮಾರಿ ರೋಗಬಾಧೆ; ಟ್ರ್ಯಾಕ್ಟರ್​ನಿಂದ ಬೆಳೆ ನಾಶಕ್ಕೆ ಮುಂದಾದ ಬಳ್ಳಾರಿ ರೈತ

ಕಳೆದ ಆರೇಳು ತಿಂಗಳಲ್ಲಿ ಮಳೆಯ ಪ್ರಮಾಣ ಜಾಸ್ತಿಯಾಗಿರುವುದರಿಂದ ಗಿಡದಲ್ಲಿ ಬೆಳೆದಿದ್ದ ದಾಳಿಂಬೆ ಕಾಯಿ ಮೇಲೆ ಕೆಂಪು ಚುಕ್ಕೆಯಕಾರದ ರೋಗ ಕಾಣಿಸಿಕೊಂಡು ಫಸಲು ಅಷ್ಟೇನು ಸರಿಯಾಗಿರಲಿಲ್ಲ. ಹೀಗಾಗಿ, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಈ ಕಾರಣಕ್ಕೆ ಬೆಳೆ ನಾಶದ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಬೆಳೆಗಾರ ಕಂಠಿ ಕಂಟೆಪ್ಪ ಬೇಸರ ವ್ಯಕ್ತಿಪಡಿಸಿದ್ದಾರೆ.

ದಾಳಿಂಬೆ ಬೆಳೆಗೆ ದುಂಡಾಣು ಅಂಗ ಮಾರಿ ರೋಗಬಾಧೆ; ಟ್ರ್ಯಾಕ್ಟರ್​ನಿಂದ ಬೆಳೆ ನಾಶಕ್ಕೆ ಮುಂದಾದ ಬಳ್ಳಾರಿ ರೈತ
ಟ್ರ್ಯಾಕ್ಟರ್​ನಿಂದ ಬೆಳೆ ನಾಶಕ್ಕೆ ಮುಂದಾದ ಬಳ್ಳಾರಿ ರೈತ
Follow us
TV9 Web
| Updated By: preethi shettigar

Updated on: Jul 11, 2021 | 3:19 PM

ಬಳ್ಳಾರಿ: ಕೊರೊನಾ ಎರಡನೇ ಅಲೆಯ ತೀವ್ರತೆಯನ್ನು ಅರಿತ ರಾಜ್ಯ ಸರ್ಕಾರ ಲಾಕ್​ಡೌನ್​ ಘೋಷಿಸಿತ್ತು. ಹೀಗಾಗಿ ಎಲ್ಲಾ ವ್ಯಾಪಾರ, ವ್ಯವಹಾರಗಳು ಬಂದ್​ ಆಗಿತ್ತು. ಆದರೆ ಈಗ ಪರಿಸ್ಥಿತಿ ಸುಧಾರಿಸಿದೆ. ಜುಲೈ 5 ರಿಂದ ಲಾಕ್​ಡೌನ್​ ಮುಕ್ತಾಯವಾಗಿದೆ. ಅದರಂತೆ ಎಲ್ಲಾ ಚಟುವಟಿಕೆಗಳು ಪುನರಾರಂಭವಾಗಿದ್ದು, ರೈತರು ಕೂಡ ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಿದ್ದಾರೆ. ಅಂತೆಯೇ ವಿಜಯನಗರದಲ್ಲಿ ಕೂಡ ಪರಿಸ್ಥಿತಿ ಸುಧಾರಿಸುತ್ತಿದೆ. ಆದರೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ನಂದಿಹಳ್ಳಿ ಗ್ರಾಮದ ರೈತ ಮಾತ್ರ ಬೆಳೆ ರೋಗದಿಂದಾಗಿ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ವಿಜಯನಗರ ಜಿಲ್ಲೆಯ ಕಂಠಿ ಕಂಟೆಪ್ಪ ಎಂಬುವವರ ಸುಮಾರು ಐದು ಎಕರೆ ಹೊಲದಲ್ಲಿ ಬೆಳೆದಿದ್ದ ದಾಳಿಂಬೆ ಗಿಡಗಳಿಗೆ ದುಂಡಾಣು ಅಂಗ ಮಾರಿ ರೋಗಬಾಧೆ ಎದುರಾಗಿದ್ದು, ರೋಗಬಾಧೆಯಿಂದ ದಾಳಿಂಬೆ ಗಿಡಗಳು ಸಂಪೂರ್ಣ ಹಾಳಾಗಿ ಹೋಗಿದೆ. ಹೀಗಾಗಿ, ಟ್ರ್ಯಾಕ್ಟರ್ ಸಹಾಯದೊಂದಿಗೆ ತೋಟಗಾರಿಕೆ ಬೆಳೆಗಾರ ಕಂಠಿ ಕಂಟೆಪ್ಪನವರು, ದಾಳಿಂಬೆ ಗಿಡಗಳನ್ನ ನಾಶ ಮಾಡಲು ಮುಂದಾಗಿದ್ದಾರೆ.

ಕಳೆದ ಮೂರು ವರ್ಷಗಳ ಹಿಂದೆಯೇ ತನ್ನ ಐದು ಎಕರೆ ಹೊಲದಲ್ಲಿ ದಾಳಿಂಬೆ ಗಿಡಗಳನ್ನು ಬೆಳೆಯಲಾಗಿದೆ. ಅಂದಾಜು 14 ಲಕ್ಷ ರೂಪಾಯಿ ವರೆಗೂ ಈ ಬೆಳೆಗೆ ಖರ್ಚು ಮಾಡಲಾಗಿದೆ. ಕೇವಲ 1.20 ಲಕ್ಷ ರೂಪಾಯಿಗಳವರೆಗೆ ಮಾತ್ರ ಆದಾಯ ಬಂದಿದೆ. ಮನುಷ್ಯನ ನಡುವಿನ ಎತ್ತರಕ್ಕೆ ಬೆಳೆದು ನಿಂತಿದ್ದ ಈ ದಾಳಿಂಬೆ ಗಿಡಗಳಿಗೆ ದುಂಡಾಣು ಅಂಗ ಮಾರಿ ರೋಗಬಾಧೆ ಕಾಣಿಸಿಕೊಂಡ ಪರಿಣಾಮ ಈ ದಾಳಿಂಬೆ ಬೆಳೆನಾಶಕ್ಕೆ ಮುಂದಾಗಿದ್ದೇನೆ ಎಂದು ಬೆಳೆಗಾರ ಕಂಠಿ ಕಂಟೆಪ್ಪ ತಿಳಿಸಿದ್ದಾರೆ.

ಕಳೆದ ಆರೇಳು ತಿಂಗಳಲ್ಲಿ ಮಳೆಯ ಪ್ರಮಾಣ ಜಾಸ್ತಿಯಾಗಿರುವುದರಿಂದ ಗಿಡದಲ್ಲಿ ಬೆಳೆದಿದ್ದ ದಾಳಿಂಬೆ ಕಾಯಿ ಮೇಲೆ ಕೆಂಪು ಚುಕ್ಕೆಯಕಾರದ ರೋಗ ಕಾಣಿಸಿಕೊಂಡು ಫಸಲು ಅಷ್ಟೇನು ಸರಿಯಾಗಿರಲಿಲ್ಲ. ಹೀಗಾಗಿ, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಈ ಕಾರಣಕ್ಕೆ ಬೆಳೆ ನಾಶದ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಬೆಳೆಗಾರ ಕಂಠಿ ಕಂಟೆಪ್ಪ ಬೇಸರ ವ್ಯಕ್ತಿಪಡಿಸಿದ್ದಾರೆ.

ಇದನ್ನೂ ಓದಿ: ಒಂದು ತಿಂಗಳ ಕಾಲ ಸುರಿದ ಮಳೆಯಿಂದ ಈರುಳ್ಳಿ ಬೆಳೆಗೆ ಹಾನಿ; ನೇರಳೆ‌ ಮಚ್ಚೆ ರೋಗದಿಂದ ಕಂಗಾಲಾದ ಚಿತ್ರದುರ್ಗದ ರೈತರು

ಬಂಗಾರದಂಥ ಬೆಳೆಗೆ ಮಜ್ಜಿಗೆ ರೋಗದ ಕಾಟ: ಬೇಸತ್ತ ರೈತರಿಂದ ಮೆಣಸಿನಕಾಯಿ ಬೆಳೆ ನಾಶ..!

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?