ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ; ಕರ್ನಾಟಕದ ವಿವಿಧ ಭಾಗಗಳಲ್ಲಿ ಧರಣಿ

Farmer Protest Latest News: ಯಲಹಂಕ ಪೊಲೀಸ್ ಠಾಣೆ ಮುಂದೆ ಧರಣಿ ಮಾಡಿದ ಹಿನ್ನೆಲೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಾಂತಕುಮಾರ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ; ಕರ್ನಾಟಕದ ವಿವಿಧ ಭಾಗಗಳಲ್ಲಿ ಧರಣಿ
ಭಜನೆ, ಹೋಮ ಮಾಡಿ ರೈತರ ಪ್ರತಿಭಟನೆ
Follow us
sandhya thejappa
|

Updated on:Feb 06, 2021 | 2:44 PM

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ರಾಜ್ಯದ ಹಲವಡೆ ರೈತರು ಪ್ರತಿಭಟನೆ ನಡೆಸಿ, ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸುತ್ತಿದ್ದಾರೆ. ತುಮಕೂರು ರಸ್ತೆಯ ನೈಸ್ ಜಂಕ್ಷನ್ ಬಳಿ ವಾಹನ ತಡೆದು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಯಲಹಂಕ ಪೊಲೀಸ್ ಠಾಣೆ ಮುಂದೆ ಧರಣಿ ಮಾಡಿದ ಹಿನ್ನೆಲೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಾಂತಕುಮಾರ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮಾಕನೂರು ಕ್ರಾಸ್ ಬಳಿ ಹೆದ್ದಾರಿ ತಡೆದು ರೈತರು ಭಜನೆ, ಹೋಮ ಮಾಡುತ್ತಾ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರೈತ ಸಂಘಟನೆಗಳು ನೀಡಿರುವ ಹೆದ್ದಾರಿ ಬಂದ್ ಕರೆ ಹಿನ್ನೆಲೆ  ಗದಗ ನಗರದ ಟಿಪ್ಪು ಸುಲ್ತಾನ್ ಸರ್ಕಲ್​​ನಲ್ಲಿ ಗದಗ-ಹುಬ್ಬಳ್ಳಿ ಹೆದ್ದಾರಿ, ಬಂಡಾಯದ ನಾಡು ನರಗುಂದ ಪಟ್ಟಣದಲ್ಲಿ ಹುಬ್ಬಳ್ಳಿ-ವಿಜಯಪುರ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಿತ್ತಿಪತ್ರ ಹಿಡಿದು ರೈತರು ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸುತ್ತಿದ್ದಾರೆ. ಪುಣೆ-ಬೆಂಗಳೂರು ಹೆದ್ದಾರಿಯನ್ನು ಬಂದ್ ಮಾಡಿ ರಸ್ತೆ ಮೇಲೆ ಮಲಗಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮಹಿಳೆಯರನ್ನು, ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಕೆಂಗೇರಿ ಬಳಿ ರಸ್ತೆ ತಡೆಗೆ ರೈತರು ಯತ್ನಿಸುತ್ತಿದ್ದರು. ಈ ವೇಳೆ ರಸ್ತೆ ತಡೆಯದಂತೆ ಪೊಲೀಸರು ರೈತರಿಗೆ ಸೂಚನೆ ನೀಡಿದ್ದು, ಪೊಲೀಸರು ಮತ್ತು ಧರಣಿ ನಿರತ ರೈತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಂಡ್ಯ ತಾಲೂಕಿನ ಇಂಡುವಾಳು ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದ ರೈತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೇಂದ್ರದ ಕೃಷಿ ಕಾಯ್ದೆಗಳ ಜಾರಿಗೆ ವಿರೋಧ ಹಾಗೂ ದೆಹಲಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ವಿವಿಧ ರೈತಪರ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ವಿಜಯಪುರ ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ 218 ತಡೆದು ಪ್ರತಿಭಟನೆ ನಡೆಯುತ್ತಿದ್ದು, ಹೆದ್ದಾರಿಯ ಮೇಲೆ ಸಸಿಗಳನ್ನು ಇಟ್ಟು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ರೈತರ ಪ್ರತಿಭಟನೆಗೆ ಕರವೆ ಕಾರ್ಯಕರ್ತರು ಸಾಥ್ ನೀಡುತ್ತಿದ್ದಾರೆ. ಹುಬ್ಬಳ್ಳಿ-ವಿಜಯಪುರ ಹೆದ್ದಾರಿ ತಡೆದು ಹಸಿರು ಶಾಲು ಹಾಕಿಕೊಂಡು ಮಕ್ಕಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗೇಟ್ ಬಳಿಯಿರುವ ಏರ್​ಪೋರ್ಟ್​ ಟೋಲ್ ಹತ್ತಿರ ಹುರಿ ಬಿಸಿಲಿ‌ನ‌ ನಡುವೆ ಖರ್ಚೀಪ್ ಮೇಲೆ ಮೊಳೆಗಳನ್ನಿಟ್ಟುಕೊಂಡು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ-48 ತಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ಹೊರವಲಯದ ಬೂವನಹಳ್ಳಿ ರಸ್ತೆ ಮಧ್ಯೆಯೇ ಮುದ್ದೆ, ಬಸ್ಸಾರು ಊಟ ಮಾಡಿ ರೈತರು ಹೋರಾಟ ಮಾಡಿದರು. ಪ್ರತಿಭಟನೆಯಲ್ಲಿ ಭಾಗಿಯಾದ ಎಲ್ಲರಿಗೂ ಮುಖಂಡರು ಊಟ ನೀಡಿದರು.

ಕೃಷಿ ಕಾಯ್ದೆ ವಿರೋಧಿಸಿ ಮಾಡುತ್ತಿದ್ದ ಪ್ರತಿಭಟನೆಯಿಂದ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಟ್ರಾಫಿಕ್‌ನಲ್ಲಿ ಆ್ಯಂಬುಲೆನ್ಸ್  ಸಿಲುಕಿಕೊಂಡಿತು. ವಿಷ ಸೇವಿಸಿದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ‌ ಚಾಲಕ ಟ್ರಾಫಿಕ್‌ ಜಾಮ್‌ನಿಂದ ಪರದಾಟ ಪಟ್ಟರು.

Farmers Protest: ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆ ಹಿಡಿದು ಪ್ರತಿಭಟನೆ; ಷರತ್ತು ವಿಧಿಸಿದ ಪೊಲೀಸರು

Published On - 2:12 pm, Sat, 6 February 21

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ