AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಹಾಲಿನ ದರದಲ್ಲಿ ಇಳಿಕೆ; ಕೋಚಿಮುಲ್ ನಿರ್ಧಾರದ ವಿರುದ್ಧ ರೈತರ ಆಕ್ರೋಶ

ಕೋಲಾರ, ಚಿಕ್ಕಬಳ್ಳಾಪುರ ಎರಡು ಜಿಲ್ಲೆಗಳಲ್ಲಿ ಒಟ್ಟು 1800 ಹಾಲು ಉತ್ಪಾದಕರ ಸಹಕಾರಿ ಸಂಘಗಳಿದ್ದು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೈನೋದ್ಯಮವನ್ನು ನಂಬಿ ಲಕ್ಷಾಂತರ ಕುಟುಂಬಗಳು ಜೀವನ ನಡೆಸುತ್ತಿವೆ. ಪ್ರತಿ ದಿನ ಕೋಚಿಮುಲ್​ನಲ್ಲಿ ಸುಮಾರು 11.50 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ.

ಕೋಲಾರ: ಹಾಲಿನ ದರದಲ್ಲಿ ಇಳಿಕೆ; ಕೋಚಿಮುಲ್ ನಿರ್ಧಾರದ ವಿರುದ್ಧ ರೈತರ ಆಕ್ರೋಶ
ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಹಾಲು
TV9 Web
| Edited By: |

Updated on: Jul 05, 2021 | 10:52 AM

Share

ಕೋಲಾರ: ಕೊರೊನಾ ಎರಡನೇ ಅಲೆಯ ಆತಂಕ ಇಗಷ್ಟೇ ದೂರವಾಗುತ್ತಿದೆ. ಲಾಕ್​ಡೌನ್​ನಿಂದ ತತ್ತರಿಸಿದ ವ್ಯಾಪಾರಿಗಳು, ದಿನಕೂಲಿಕಾರರು, ರೈತರು ಈಗ ಮತ್ತೆ ತಮ್ಮ ಕೆಲಸಕ್ಕೆ ದಾವಿಸುತ್ತಿದ್ದಾರೆ. ಆದರೆ ಇಂತಹ ಸಂಕಷ್ಟದ ಸಮಯದಲ್ಲಿ ಕೈ ಹಿಡಿಯಬೇಕಾದ ಹೈನೋದ್ಯಮ ಗೋಪಾಲಕರನ್ನು ಕೈ ಬಿಟ್ಟಿದೆ. ಕೋಲಾರದಲ್ಲಿ ಹೈನುಗಾರಿಕೆಯನ್ನು ನಂಬಿ ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿವೆ. ಅದರಲ್ಲೂ ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಹಾಲು (ಕೋಚಿಮುಲ್) ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿದೆ. ಹೀಗಿರುವಾಗ ಕೋಲಾರ ಹಾಲು ಒಕ್ಕೂಟದಲ್ಲಿ ಪ್ರತಿ ಲೀಟರ್ ಮೇಲೆ 1.50 ರೂಪಾಯಿ ಇಳಿಕೆ ಮಾಡುವ ಮೂಲಕ ಹಾಲಿನ ದರವನ್ನು ಕಡಿತ ಮಾಡಿ ಗೋಪಾಲಕರನ್ನು ಸಂಕಷ್ಟಕ್ಕೆ ಗುರಿ ಮಾಡಿದೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಲಕ್ಷಾಂತರ ಕುಟುಂಬಗಳು ಅಂತರ್ಜಲ ಕುಸಿದರೂ ಹೈನುಗಾರಿಕೆಯನ್ನು ನಂಬಿ ಜೀವನ ಸಾಗಿಸುತ್ತಿವೆ. ಆದರೆ ಕೊರೊನಾ ಸೋಂಕಿನಿಂದಾಗಿ ರಾಜ್ಯದ ವಿವಿಧೆಡೆ ಹಾಲು ಸರಬರಾಜು ಮಾಡಲಾಗುತ್ತಿಲ್ಲ, ಜತೆಗೆ ಮಾರುಕಟ್ಟೆ ವ್ಯವಸ್ಥೆ ಮಾಡಲು ಕಷ್ಟಕರವಾಗಿದೆ. ಈ ಹಿನ್ನಲೆಯಲ್ಲಿ ಕೆಎಂಎಫ್ ಈಗ ಪ್ರತಿ ಲೀಟರ್ ಮೇಲೆ 1.50 ರೂಪಾಯಿಗಳನ್ನು ಕಡಿಮೆ ಮಾಡಿದೆ. ಕೋಚಿಮುಲ್ ತನ್ನ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್​ಗೆ 27 ರೂಪಾಯಿಗಳನ್ನು ನೀಡುತ್ತಿತ್ತು. ಆದರೆ ಈಗ ಪ್ರತಿ ಲೀಟರ್ ಮೇಲೆ 1.50 ರೂಪಾಯಿ ಕಡಿಮೆ ಮಾಡುವ ಮೂಲಕ ಲೀಟರ್​ಗೆ 25.50 ಪೈಸೆ ರೂಪಾಯಿ ನೀಡುತ್ತಿದೆ ಎಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಅಧ್ಯಕ್ಷ ನಂಜೇಗೌಡ ತಿಳಿಸಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ ಎರಡು ಜಿಲ್ಲೆಗಳಲ್ಲಿ ಒಟ್ಟು 1800 ಹಾಲು ಉತ್ಪಾದಕರ ಸಹಕಾರಿ ಸಂಘಗಳಿದ್ದು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೈನೋದ್ಯಮವನ್ನು ನಂಬಿ ಲಕ್ಷಾಂತರ ಕುಟುಂಬಗಳು ಜೀವನ ನಡೆಸುತ್ತಿವೆ. ಪ್ರತಿ ದಿನ ಕೋಚಿಮುಲ್​ನಲ್ಲಿ ಸುಮಾರು 11.50 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಅಂತರ್ಜಲ ಕುಸಿದಿದ್ದರೂ ಸಹ ಇಲ್ಲಿನ ಗೋಪಾಲಕರು ಹಾಲಿನ ಕ್ಷೀರವನ್ನು ಹರಿಸಿದ್ದಾರೆ. ಆದರೆ ಕೊರೊನಾ ಕರಿನೆರಳು ಹೈನುಗಾರಿಕೆ ಮೇಲೂ ಸಹ ಬಿದ್ದಿರುವುದರಿಂದ ಗೋಪಾಲಕರು ತೊಂದರೆ ಅನುಭವಿಸುತ್ತಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಜಿಲ್ಲೆಯ ಗೋಪಾಲಕರು ಹೈನೋದ್ಯಮವನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಗೋಪಾಲಕರ ಕೈ ಹಿಡಿಯಬೇಕಾದಂತಹ ಕೋಚಿಮುಲ್ ಗೋಪಾಲಕರನ್ನು ಕೈ‌ಬಿಡುವ ಮೂಲಕ‌ ಮತ್ತಷ್ಟು ಸಂಕಷ್ಟವನ್ನು ತಂದೊಡ್ಡಿದೆ. ಪಶು ಆಹಾರದ ಬೆಲೆ ಕೂಡ ಗಗನಕ್ಕೇರಿರುತ್ತಿದ್ದು, ಕೂಡಲೇ ಕೋಚಿಮುಲ್ ಮತ್ತು ಸರ್ಕಾರ ನೆರವಿಗೆ ಬಂದು ಹಾಲು ಖರೀದಿ ದರವನ್ನು ಮತ್ತೆ ಏರಿಸಬೇಕು‌ ಇಲ್ಲದಿದ್ದರೆ ಜಾನುವಾರಗಳ ಸಮೇತ ಕೋಚಿಮುಲ್ ಮುಂದೆ ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಬರದ ನಾಡಿನ ರೈತರ ಬೆನ್ನೆಲುಬು ಹೈನುಗಾರಿಕೆ. ಆದರೆ ಕೋಚಿಮುಲ್ ಹಾಲಿನ ದರ‌ ಕಡಿತ ಮಾಡಿ ಗೋಪಾಲರನ್ನು ಸಂಕಷ್ಟಕ್ಕೆ ದೂಡಿದೆ. ಅದಕ್ಕಾಗಿ ಒಕ್ಕೂಟ ಮತ್ತು ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಂಡು ಗೋಪಾಲಕರ ನೆರವಿಗೆ ನಿಲ್ಲಬೇಕು ಎನ್ನುವುದು ಸದ್ಯ ಜನರ ಮನವಿಯಾಗಿದೆ.

ಇದನ್ನೂ ಓದಿ: ಲಾಕ್​ಡೌನ್​ ನಂತರ ಗೋಪಾಲಕರಿಗೆ ಗುಡ್​ ನ್ಯೂಸ್​: ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ಹಾಲಿನ ದರ ಹೆಚ್ಚಳ

ಜೂನ್,ಜುಲೈ ತಿಂಗಳಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೆನೆಭರಿತ ಹಾಲಿನ ಪುಡಿ ವಿತರಣೆಗೆ ಅನುದಾನ ಬಿಡುಗಡೆ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ