ಬೆಂಬಲ ಬೆಲೆ ಘೋಷಿಸಿ ರಾಗಿ ಖರೀದಿಸಿದ ಸರ್ಕಾರದಿಂದ ಹಣ ನೀಡದೆ ನಿರ್ಲಕ್ಷ್ಯ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಈಗಾಗಲೇ ಅನೇಕ ರೈತರು ಆಹಾರ ಇಲಾಖೆ ಕಚೇರಿಗೆ ಅಲೆದಲೆದು‌ ಸುಸ್ತಾಗಿದ್ದಾರೆ. ಹೊಸದುರ್ಗ, ಹೊಳಲ್ಕೆರೆ ತಾಲೂಕು ಕಚೇರಿ, ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಗೂ ತೆರಳಿ ರಾಗಿ ಹಣ ನೀಡುವಂತೆ ಮನವಿ ಮಾಡಿದ್ದೇವೆ. ಆದರೂ ಕೊರೊನಾ ನೆಪ ಹೇಳಿ ಕಳುಹಿಸಿದ್ದಾರೆ ಎಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.

ಬೆಂಬಲ ಬೆಲೆ ಘೋಷಿಸಿ ರಾಗಿ ಖರೀದಿಸಿದ ಸರ್ಕಾರದಿಂದ ಹಣ ನೀಡದೆ ನಿರ್ಲಕ್ಷ್ಯ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ರಾಗಿ ಬೆಳೆ
Follow us
TV9 Web
| Updated By: preethi shettigar

Updated on: Jun 25, 2021 | 2:57 PM

ಚಿತ್ರದುರ್ಗ: ದೇಶದ ಬೆನ್ನೆಲುಬಾದ ರೈತರ ನೆರವಿಗೆ ನಾನಾ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಆದರೆ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಅನೇಕ ಯೋಜನೆಗಳು ವಿಫಲಗೊಳ್ಳುತ್ತಿದ್ದು, ರೈತರು ಈ ಯೋಜನೆಗಳ ಫಲಾನುಭವಿಸಗಳಾಗದೆ ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಕೋಟೆನಾಡು ಚಿತ್ರದುರ್ಗದ ರಾಗಿ ಕೇಂದ್ರದಲ್ಲಿ ರಾಗಿ ಖರೀದಿಸಿದ ಸರ್ಕಾರ ಈವರೆಗೆ ಹಣ ನೀಡಿಲ್ಲ. ಈ ವಿಚಾರ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಬೆಳೆದ ಬೆಳೆಗೆ ಬೆಲೆ ಸಿಗದೆ ಅನ್ನದಾತರು ಕಂಗಾಲಾಗಿದ್ದಾರೆ.

ಚಿತ್ರದುರ್ಗದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ರಾಗಿ ಬೆಳೆ ಬೆಳೆಯಲಾಗುತ್ತದೆ. ಆದರೆ, ರಾಗಿ ಬೆಲೆ ಕ್ವಿಂಟಲ್​ಗೆ 2.500ಕ್ಕೆ ಇಳಿದ ಕಾರಣ ಸರ್ಕಾರ‌ ಬೆಂಬಲ ಬೆಲೆ ಘೋಷಿಸಿತ್ತು. ರಾಗಿ ಕೇಂದ್ರಗಳನ್ನು ತೆರೆದು ಕ್ವಿಂಟಲ್ ಗೆ 3.295 ರೂಪಾಯಿಯಂತೆ ಖರೀದಿ ಮಾಡಲಾಗಿತ್ತು. ಹೀಗಾಗಿ, ಸರ್ಕಾರ ಹೇಗೋ ನೆರವಿಗೆ ಬಂತಲ್ಲ ಎಂದು ರೈತರು ನಿಟ್ಟುಸಿರು‌ಬಿಟ್ಟಿದ್ದರು. ಆದರೆ ರಾಗಿ ಖರೀದಿಸಿ ಮೂರು ತಿಂಗಳು ಕಳೆದರೂ ಬಹುತೇಕ ರೈತರಿಗೆ ಈವರೆಗೆ ಹಣ ಕೈ ಸೇರಿಲ್ಲ ಎಂದು ರೈತ ವೆಂಕಟೇಶ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ಅನೇಕ ರೈತರು ಆಹಾರ ಇಲಾಖೆ ಕಚೇರಿಗೆ ಅಲೆದಲೆದು‌ ಸುಸ್ತಾಗಿದ್ದಾರೆ. ಹೊಸದುರ್ಗ, ಹೊಳಲ್ಕೆರೆ ತಾಲೂಕು ಕಚೇರಿ, ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಗೂ ತೆರಳಿ ರಾಗಿ ಹಣ ನೀಡುವಂತೆ ಮನವಿ ಮಾಡಿದ್ದೇವೆ. ಆದರೂ ಕೊರೊನಾ ನೆಪ ಹೇಳಿ ಕಳುಹಿಸಿದ್ದಾರೆ ಎಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.

ಈ ಬಗ್ಗೆ ಡಿಸಿ ಕವಿತಾ ಮನ್ನಿಕೇರಿ ಅವರನ್ನು ಕೇಳಿದರೆ ಈ ಬಗ್ಗೆ ಖಚಿತ ಮಾಹಿತಿ ಇಲ್ಲ. ಮಾಹಿತಿ ಪಡೆದು ಸಂಜೆ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ. ಸದ್ಯ ರೈತರ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಜಿಲ್ಲಾಡಳಿತಕ್ಕೆ ರೈತ ಮುಖಂಡರು ಎಚ್ಚರಿಕೆ ನೀಡಿದ್ದು, ಕೂಡಲೇ ರಾಗಿ ಖರೀದಿಸಿ ಹಣ ನೀಡದಿದ್ದರೆ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ರಾಗಿ ಖರೀದಿಸಿದ ಆಹಾರ ಇಲಾಖೆ ಈವರೆಗೆ ಬಹುತೇಕ ರೈತರಿಗೆ ಹಣ ನೀಡಿಲ್ಲ. ಹೀಗಾಗಿ, ನೂರಾರು‌ ಜನ ರೈತರು ಕಂಗಾಲಾಗಿದ್ದು‌, ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಹೀಗಾಗಿ, ಇನ್ನಾದರೂ ಸರ್ಕಾರ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಇದನ್ನೂ ಓದಿ:

ಕಳಪೆ ಈರುಳ್ಳಿ ಬೀಜ ನೀಡಿದ ಕಲಾಶ್ ಕಂಪನಿ; ಪರಿಹಾರಕ್ಕೆ ಚಿತ್ರದುರ್ಗ ರೈತರ ಆಗ್ರಹ

ಬಳ್ಳಾರಿಯಲ್ಲಿ ಮೆಣಸಿನಕಾಯಿ ಬೀಜಕ್ಕಾಗಿ ಮುಂದುವರಿದ ರೈತರ ಪರದಾಟ; ತೋಟಗಾರಿಕೆ ಇಲಾಖೆ ಕಚೇರಿಗೆ ನುಗ್ಗಿ ಆಕ್ರೋಶ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ