ಪಂಜಾಬ್ನಲ್ಲಿ ಕುರುಬೂರು ಶಾಂತಕುಮಾರ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು
ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಕಾರು ಅಪಘಾತಕ್ಕೀಡಾಗಿದೆ. ಪ್ರತಿಭಟನೆ ಸಂಬಂಧ ಸಭೆಗೆ ತೆರಳುತ್ತಿದ್ದ ವೇಳೆನವದೆಹಲಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿದೆ. ಪರಿಣಾಮ ಕುರುಬೂರ್ ಶಾಂತಕುಮಾರ್ ಅವರು ಗಾಯಗೊಂಡಿದ್ದು, ಕೂಡಲೇ ಅವರನ್ನು ಅಲ್ಲಿನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ, (ಫೆಬ್ರವರಿ 14): ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಪಂಜಾಬ್ನ ಪಟಿಯಾಲ ರಸ್ತೆಯಲ್ಲಿ ಕಾರು ಡಿವೈಡರ್ಗೆ ಡಿಕ್ಕಿಯಾಗಿದೆ. ದೆಹಲಿಯ ಕನೋಲಿ ಬಾರ್ಡರ್ ನಲ್ಲಿ ವಿವಿಧ ಬೇಡಿಕೆಗಳ ಆಗ್ರಹಿಸಿ ಒಂದು ವರ್ಷದಿಂದ ಪ್ರತಿಭಟನೆ ನಡೆಯುತ್ತಿದ್ದು, ಈ ಸಂಬಂಧ ಇಂದು (ಫೆಬ್ರವರಿ 14) ದೆಹಲಿಯಲ್ಲಿ ಕರೆಯಲಾಗಿದ್ದ ಸಭೆಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯ ಈ ದುರ್ಘಟನೆ ಸಂಭವಿಸಿದೆ. ಪರಿಣಾಮ ಘಟನೆಯಲ್ಲಿ ಕುರುಬೂರ್ ಶಾಂತಕುಮಾರ್ ಹಾಗೂ ತಮಿಳುನಾಡಿನ ಪಾಂಡಿಯನ್ ಅವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ದೆಹಲಿಯಲ್ಲಿ ಕರೆಯಲಾಗಿದ್ದ ರೈತ ಮುಖಂಡರ ಸಭೆಯಲ್ಲಿ ಭಾಗಿಯಾಗಲು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಪಂಜಾಬಿನ ಪಾಟಿಯಾಲ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿಯಾಗಿದೆ. ಕಾರು ಅಪಘಾತದಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಹಾಗೂ ತಮಿಳುನಾಡಿನ ಪಾಂಡಿಯನ್ ಎಂಬುವರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಕುರುಬೂರು ಶಾಂತಕುಮಾರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಣಾಪಾಯದಿಂದ ಪಾರಾಗಿದ್ದಾರೆ.
ಅಂದಹಾಗೇ ಕಳೆದ ಒಂದು ವರ್ಷದಿಂದ ದೆಹಲಿಯ ಕರ್ನೂಲಿ ಗಡಿಯಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಪ್ರತಿಭಟನೆಯ ಸಂಬಂಧ ಕರೆಯಲಾಗಿದ್ದಂತ ಸಭೆಯಲ್ಲಿ ಭಾಗವಹಿಸುವುದಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾರು ಅಪಘಾತವಾಗಿದೆ.