Farmers Protest ಫೆ.18 ಕರ್ನಾಟಕದಾದ್ಯಂತ ರೈಲು ಸೇವೆ ಬಂದ್?
ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ 2 ತಿಂಗಳಿಂದ ದೆಹಲಿಯಲ್ಲಿ ರೈತರಿಂದ ಪ್ರತಿಭಟನೆ ನಡೆಯುತ್ತಲೇ ಇದೆ. ಆದ್ರೆ ಈ ಬಗ್ಗೆ ಸರ್ಕಾರ ಮಾತ್ರ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಫೆಬ್ರವರಿ 18ರಂದು ಅಂದ್ರೆ ನಾಳೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ದೇಶಾದ್ಯಂತ ಎಲ್ಲ ರೈಲುಗಳನ್ನು ತಡೆಯಲು ರೈತರು ನಿರ್ಧರಿಸಿದ್ದಾರೆ.
ಬೆಂಗಳೂರು: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ 2 ತಿಂಗಳಿಂದ ದೆಹಲಿಯಲ್ಲಿ ರೈತರಿಂದ ಪ್ರತಿಭಟನೆ ನಡೆಯುತ್ತಲೇ ಇದೆ. ಆದ್ರೆ ಈ ಬಗ್ಗೆ ಸರ್ಕಾರ ಮಾತ್ರ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಹೀಗಾಗಿ ರೈತರ ಪ್ರತಿಭಟನೆ ಬೆಂಬಲಿಸಿ ದೇಶಾದ್ಯಂತ ರೈಲು ತಡೆಗೆ ಕರೆ ನೀಡಲಾಗಿದೆ. ಫೆಬ್ರವರಿ 18ರಂದು ಅಂದ್ರೆ ನಾಳೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ದೇಶಾದ್ಯಂತ ಎಲ್ಲ ರೈಲುಗಳನ್ನು ತಡೆಯಲು ರೈತರು ನಿರ್ಧರಿಸಿದ್ದಾರೆ. ರೈತರ ಹೋರಾಟಕ್ಕೆ ಕರ್ನಾಟಕದ ರೈತರಿಂದಲೂ ಬೆಂಬಲ ವ್ಯಕ್ತವಾಗಿದ್ದು ರಾಜ್ಯದಲ್ಲಿಯೂ ರೈತ ಸಂಘಟನೆಗಳಿಂದ ರೈಲು ತಡೆಗೆ ಕರೆ ನೀಡಲಾಗಿದೆ. ಹೀಗಾಗಿ ನಾಳೆ ರೈಲು ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ ಇದೆ.
ಮೂರು ನೂತನ ಕೃಷಿ ವಿಧೇಯಕಗಳ ವಿರುದ್ಧ ತಮ್ಮ ಮುಷ್ಕರವನ್ನು ತೀವ್ರಗೊಳಿಸಲು ನಿರ್ಧರಿಸಿರುವ ರೈತ ಸಂಘಟನೆಗಳು ಫೆಬ್ರುವರಿ 18ರಂದು ದೇಶದಾದ್ಯಂತ 4 ಗಂಟೆಗಳ ಅವಧಿಗೆ ‘ರೇಲ್ ರೋಕೊ’ ಚಳವಳಿ ಮಾಡುವುದಾಗಿ ಘೋಷಿಸಿದ್ದರು. ಇದೇ ಬೆನ್ನಲ್ಲೆ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದಿಂದ ಕರ್ನಾಟಕ ರಾಜ್ಯಾದ್ಯಂತ ರೈಲು ತಡೆಗೆ ಕರೆ ನೀಡಲಾಗಿದೆ.
ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಈ ಬಾರಿ ಸರ್ಕಾರಕ್ಕೆ ಇದರ ಬಿಸಿ ಮುಟ್ಟಿಸಲು ರೈತರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ ಬಾರಿ ರೈತರು ಹೆದ್ದಾರಿಗಳನ್ನು ತಡೆ ಹಿಡಿದು ಪ್ರತಿಭಟನೆ ಮಾಡಿದ್ದರು. ಈ ಬಾರಿ ರೈಲು ತಡೆ ಹಿಡಿದು ಚಳುವಳಿ ಮಾಡಲು ಹೊರಟಿದ್ದಾರೆ. ಇಷ್ಟಲ್ಲಾ ಆದ್ರೂ ಕೇಂದ್ರ ಸರ್ಕಾರ ರೈತರ ಮನವೊಲಿಸುವಲ್ಲಿ ವಿಫಲವಾಗುತ್ತಿದೆ.
ಇದನ್ನೂ ಓದಿ: Farmer’s Protest: ಫೆ.18ಕ್ಕೆ ದೇಶಾದ್ಯಂತ ರೈಲು ತಡೆಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ
Published On - 9:13 am, Wed, 17 February 21