ಬೆಂಗಳೂರು: ಮೈ ಮೇಲೆ ಸಗಣಿ ಸುರಿದುಕೊಂಡು ರೈತರ ಪ್ರತಿಭಟನೆ, ಬೇಡಿಕೆ ಈಡೇರಿಸುವಂತೆ ಒತ್ತಾಯ
ಮೈ ಮೇಲೆ ಸಗಣಿ ಸುರಿದುಕೊಂಡು ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನಕಪುರ ರೋಡ್ ನಿಂದ ಪಾದಯಾತ್ರೆ ಮೂಲಕ ಕೆಜಿ ರೋಡ್ ನಲ್ಲಿರುವ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಎತ್ತಿನ ಗಾಡಿಗಳ ಮೂಲಕ ಪಾದಯಾತ್ರೆ ಮಾಡಿದ್ದಾರೆ.

ಬೆಂಗಳೂರು, ಜೂನ್.24: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾವಿರಾರು ರೈತರು (Farmers) ಪ್ರತಿಭಟನೆ (Protest) ನಡೆಸುತ್ತಿದ್ದಾರೆ. ಡಿಸಿ ಕಚೇರಿ ಮುತ್ತಿಗೆ ಹಾಕಲು ಸಾವಿರಾರು ರೈತರು ಮುಂದಾಗಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಪಾದಯಾತ್ರೆಗೆ ಚಾಲನೆ ನೀಡಿದರು. ಮೈ ಮೇಲೆ ಸಗಣಿ ಸುರಿದುಕೊಂಡು ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನಕಪುರ ರೋಡ್ ನಿಂದ ಪಾದಯಾತ್ರೆ ಮೂಲಕ ಕೆಜಿ ರೋಡ್ ನಲ್ಲಿರುವ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಎತ್ತಿನ ಗಾಡಿಗಳ ಮೂಲಕ ಪಾದಯಾತ್ರೆ ಮಾಡಿದ್ದಾರೆ.
ರೈತರ ಒತ್ತಾಯಗಳು
- ಬೆಂಗಳೂರು ದಕ್ಷಿಣ ತಾಲೂಕಿನ 30 ಗ್ರಾಮಗಳಲ್ಲಿ ದಶಕಗಳಿಂದ ಉಳುಮೆ ಬಂದಿರುವ ಸಾಗುವಳಿ ಜಮೀನುಗಳನ್ನು ಪೋಡಿ, ದುರಸ್ತಿ ಮಾಡಿಕೊಟ್ಟು ರೈತರಿಗೆ ತಮ್ಮ ಜಮೀನುಗಳ ಮೇಲೆ ಸಂಪೂರ್ಣ ಹಕ್ಕನ್ನು ಕೊಡಬೇಕು.
- ಸೋಮನಹಳ್ಳಿ ಬಳಿ ನಿರ್ಮಿಸುತ್ತಿರುವ ಟೋಲ್ ನಲ್ಲಿ ಸ್ಥಳೀಯ ವಾಹನ ಸವಾರರಿಗೆ ಸರ್ವಿಸ್ ರಸ್ತೆ ನೀಡಬೇಕು ಅಥವಾ ಟೋಲನ್ನು ಕಗ್ಗಲೀಪುರ ಬೈಪಾಸ್ ಗೆ ಸ್ಥಳಾಂತರಿಸಬೇಕು
- ಕಗ್ಗಲಿಪುರ, ಸಾಲುಹುಣಸೆ ಉದಿಪಾಳ್ಯ ಬೈಪಾಸ್ ರಸ್ತೆ ನಿರ್ಮಿಸಿ ಸ್ಥಳೀಯರಿಗೆ ಉಂಟಾಗುತ್ತಿರುವ ವಾಹನ ದಟ್ಟಣೆ ಸಮಸ್ಯೆಯನ್ನು ತಪ್ಪಿಸುವುದು
- ಅರಣ್ಯ ಇಲಾಖೆ ರೈತರನ್ನು ಒಕ್ಕಲೆಸಬೇಕೆಂದು ನೀಡುತ್ತಿರುವ ಕಿರುಕುಳದಿಂದ ಮುಕ್ತಿ ಕೂಡಿಸಬೇಕು
- 45 ವರ್ಷಗಳಿಂದ ಸಾಕಮ್ಮ ಬಡಾವಣೆಯಲ್ಲಿ ವಾಸಿಸುತ್ತಿರುವ ಗುಡಿಸಲು ನಿವಾಸಿಗಳಿಗೆ ಮನೆ ಭಾಗ್ಯ ಕಲ್ಪಿಸಬೇಕು.
- ಪಟ್ಟರೆಡ್ಡಿ ಪಾಳ್ಯ ಗ್ರಾಮಕ್ಕೆ ಪರ್ಯಾಯ ರಸ್ತೆ ನಿರ್ಮಿಸಬೇಕು.
- 7 ತಿಂಗಳಿನಿಂದ ತಡೆ ಹಿಡಿದಿರುವ ಹಾಲು ಉತ್ಪಾದಕ ರೈತರ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು.
- ಸ್ಥಳೀಯವಾಗಿ ಉದ್ಭವಿಸಿರುವ ಸೇತುವೆ ರಸ್ತೆಗಳನ್ನು ನಿರ್ಮಿಸಿ ಕೊಡುಬೇಕು.
- ಹೆಚ್ಚಿನ ಮಳೆಯಾದಾಗ ನದಿಗಳಿಗೆ ಹರಿದು ಹೋಗುತ್ತಿರುವ ಅಪಾರ ಪ್ರಮಾಣದ ನೀರನ್ನು ಕೆರೆಗಳಿಗೆ ತುಂಬಿಸಿ ಅಂತರ್ಜಲ ಹೆಚ್ಚಿಸಬೇಕು.ಇದನ್ನೂ ಓದಿ: ಮಳೆಯಾದರೂ ಬಗೆಹರಿದಿಲ್ಲ ಬೆಂಗಳೂರು ನೀರಿನ ಬಿಕ್ಕಟ್ಟು: ಈ ಪ್ರದೇಶಗಳಲ್ಲಿ ಟ್ಯಾಂಕರ್ ನೀರಿನ ಬೆಲೆ ಬಲು ದುಬಾರಿ
ಇನ್ನು ಮತ್ತೊಂದೆಡೆ ನಾಳೆ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷ ಹಿನ್ನೆಲೆ ಬೆಂಗಳೂರಲ್ಲಿ ಇಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಹಾಗೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಂದೆ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದಕ್ಕೆ ಖಂಡಿಸಿದ್ದು ರಾಹುಲ್ ಗಾಂಧಿ ಕ್ಷಮೆಯಾಚಿಸುವಂತೆ ಆಗ್ರಹಿಸಿ ಪೋಸ್ಟರ್ ಅಭಿಯಾನ ನಡೆಸಲಾಗುತ್ತಿದೆ. ಆನಂದರಾವ್ ಸರ್ಕಲ್ ಬಳಿಯಿರುವ ಕಾಂಗ್ರೆಸ್ ಭವನಕ್ಕೆ ಪೋಸ್ಟರ್ ಅಂಟಿಸಲು ತೆರಳಿದ್ದ ಬಿಜೆಪಿಯ ನಾಯಕರನ್ನು ತಡೆದು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಸದ್ಯ ಈಗ ಬಿಡುಗಡೆ ಮಾಡಿ ಕಳಿಸಿದ್ದಾರೆ.
ಸಂವಿಧಾನಕ್ಕೆ ಅಂದು ಅಪಮಾನ ಮಾಡಿದ್ದಕ್ಕೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಇಂದು ಕ್ಷಮೆ ಕೋರಬೇಕು ಎಂದು ವಿಪಕ್ಷ ಬಿಜೆಪಿ ಆಗ್ರಹಿಸಿದೆ. ಶಾಸಕ ಡಾ. ಅಶ್ವಥ್ ನಾರಾಯಣ, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಸೇರಿದಂತೆ ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ