ಬೆಂಗಳೂರು, ಜೂನ್.24: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾವಿರಾರು ರೈತರು (Farmers) ಪ್ರತಿಭಟನೆ (Protest) ನಡೆಸುತ್ತಿದ್ದಾರೆ. ಡಿಸಿ ಕಚೇರಿ ಮುತ್ತಿಗೆ ಹಾಕಲು ಸಾವಿರಾರು ರೈತರು ಮುಂದಾಗಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಪಾದಯಾತ್ರೆಗೆ ಚಾಲನೆ ನೀಡಿದರು. ಮೈ ಮೇಲೆ ಸಗಣಿ ಸುರಿದುಕೊಂಡು ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನಕಪುರ ರೋಡ್ ನಿಂದ ಪಾದಯಾತ್ರೆ ಮೂಲಕ ಕೆಜಿ ರೋಡ್ ನಲ್ಲಿರುವ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಎತ್ತಿನ ಗಾಡಿಗಳ ಮೂಲಕ ಪಾದಯಾತ್ರೆ ಮಾಡಿದ್ದಾರೆ.
ಇನ್ನು ಮತ್ತೊಂದೆಡೆ ನಾಳೆ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷ ಹಿನ್ನೆಲೆ ಬೆಂಗಳೂರಲ್ಲಿ ಇಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಹಾಗೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಂದೆ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದಕ್ಕೆ ಖಂಡಿಸಿದ್ದು ರಾಹುಲ್ ಗಾಂಧಿ ಕ್ಷಮೆಯಾಚಿಸುವಂತೆ ಆಗ್ರಹಿಸಿ ಪೋಸ್ಟರ್ ಅಭಿಯಾನ ನಡೆಸಲಾಗುತ್ತಿದೆ. ಆನಂದರಾವ್ ಸರ್ಕಲ್ ಬಳಿಯಿರುವ ಕಾಂಗ್ರೆಸ್ ಭವನಕ್ಕೆ ಪೋಸ್ಟರ್ ಅಂಟಿಸಲು ತೆರಳಿದ್ದ ಬಿಜೆಪಿಯ ನಾಯಕರನ್ನು ತಡೆದು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಸದ್ಯ ಈಗ ಬಿಡುಗಡೆ ಮಾಡಿ ಕಳಿಸಿದ್ದಾರೆ.
ಸಂವಿಧಾನಕ್ಕೆ ಅಂದು ಅಪಮಾನ ಮಾಡಿದ್ದಕ್ಕೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಇಂದು ಕ್ಷಮೆ ಕೋರಬೇಕು ಎಂದು ವಿಪಕ್ಷ ಬಿಜೆಪಿ ಆಗ್ರಹಿಸಿದೆ. ಶಾಸಕ ಡಾ. ಅಶ್ವಥ್ ನಾರಾಯಣ, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಸೇರಿದಂತೆ ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ