ಈಡೇರದ ಉದ್ಯೋಗ ಭರವಸೆ: ನಂಜನಗೂಡು ಏಷಿಯನ್ ಪೇಂಟ್ಸ್ ಕಾರ್ಖಾನೆಗೆ ಮತ್ತೆ ಪ್ರತಿಭಟನೆಯ ಬಿಸಿ
ನಂಜನಗೂಡು ತಾಲೂಕು ಇಮ್ಮಾವು ಗ್ರಾಮದಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆಗೆ ಮತ್ತೆ ಪ್ರತಿಭಟನೆಯ ಬಿಸಿ ತಟ್ಟಿದೆ. ಉದ್ಯೋಗ ನೀಡುವ ಭರವಸೆ ನೀಡಿ ಮಾತು ತಪ್ಪಿದೆ ಎಂದು ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಭೂಮಿ ನೀಡಿದ ರೈತ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮೈಸೂರು: ನಂಜನಗೂಡು ತಾಲೂಕು ಇಮ್ಮಾವು ಗ್ರಾಮದಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆಗೆ ಮತ್ತೆ ಪ್ರತಿಭಟನೆಯ ಬಿಸಿ ತಟ್ಟಿದೆ. ಉದ್ಯೋಗ ನೀಡುವ ಭರವಸೆ ನೀಡಿ ಮಾತು ತಪ್ಪಿದೆ ಎಂದು ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಭೂಮಿ ನೀಡಿದ ರೈತ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.
ಭೂಮಿ ನೀಡಿದ್ದ ರೈತ ಕುಟುಂಬಗಳು ನಿರಂತರವಾಗಿ 90 ದಿನಗಳ ಕಾಲ ಪ್ರತಿಭಟನೆ ನಡೆಸಿ ಕಾರ್ಖಾನೆ ಆಡಳಿತ ಮಂಡಳಿಗೆ ಬಿಸಿ ಮುಟ್ಟಿಸಿದ್ದವು. ಆಗ, ರೈತರ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಮ್ಮುಖದಲ್ಲಿ ಸಂಧಾನ ಮಾಡಲಾಗಿತ್ತು. ಸಂಧಾನದಲ್ಲಿ, ಭೂಮಿ ನೀಡಿದ ರೈತರಿಗೆ ಉದ್ಯೋಗ ನೀಡುವುದಾಗಿ ಕಾರ್ಖಾನೆ ಆಡಳಿತ ಮಂಡಳಿ ಮಾತು ಕೊಟ್ಟಿತ್ತು. ಇದೀಗ ಮಾತು ತಪ್ಪಿದೆ ಎಂದು ಏಷಿಯನ್ ಪೇಂಟ್ಸ್ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ರೈತ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ನಂಜನಗೂಡಿನಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಪ್ರತಿಭಟನೆಗೆ ಸಿದ್ದರಾಮಯ್ಯ ಬೆಂಬಲ