Farmers Protest: ಇಂದು ಬೆಂಗಳೂರಿನಲ್ಲಿ ರೈತರಿಂದ ಕೃಷಿ ಕಾಯ್ದೆ ವಿರೋಧಿಸಿ ರಾಜಭವನ ಚಲೋ; ಪ್ರತಿಭಟನೆ ಸಾಗುವ ಮಾರ್ಗ ಹೀಗಿದೆ

ಮೌರ್ಯ ಸರ್ಕಲ್, ಫ್ರೀಡಂಪಾರ್ಕ್, ಮಹಾರಾಣಿ ಕಾಲೇಜು, ಚಾಲುಕ್ಯ ಸರ್ಕಲ್ ಮಾರ್ಗವಾಗಿ ರೈತರ ಪ್ರತಿಭಟನಾ ಮೆರವಣಿಗೆ ಸಾಗಲಿದ್ದು ನಂತರ ರಾಜಭವನ ತಲುಪಲಿದೆ. ಪ್ರತಿಭಟನೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ರೈತರು ಭಾಗವಹಿಸುವ ಸಾಧ್ಯತೆ ಇರುವುದರಿಂದ ಸದರಿ ಮಾರ್ಗದಲ್ಲಿ ಸಂಚಾರ ವ್ಯವಸ್ಥೆಗೆ ಅಡಚಣೆಯಾಗಬಹುದು.

Farmers Protest: ಇಂದು ಬೆಂಗಳೂರಿನಲ್ಲಿ ರೈತರಿಂದ ಕೃಷಿ ಕಾಯ್ದೆ ವಿರೋಧಿಸಿ ರಾಜಭವನ ಚಲೋ; ಪ್ರತಿಭಟನೆ ಸಾಗುವ ಮಾರ್ಗ ಹೀಗಿದೆ
ರಾಜಭವನ ಚಲೋ
Follow us
TV9 Web
| Updated By: Skanda

Updated on: Jun 26, 2021 | 8:49 AM

ಬೆಂಗಳೂರು: ಭಾರತ ಸರ್ಕಾರದ ನೂತನ ಕೃಷಿ ಕಾಯ್ದೆ ತಿದ್ದುಪಡಿಯನ್ನು ನಿರಂತರವಾಗಿ ವಿರೋಧಿಸುತ್ತಿರುವ ರೈತರು ತಮ್ಮ ಪ್ರತಿಭಟನೆಯನ್ನು ಮತ್ತಷ್ಟು ಚುರುಕುಗೊಳಿಸಲು ಸಿದ್ಧರಾಗಿದ್ದಾರೆ. ಕೊರೊನಾ ಎರಡನೇ ಅಲೆ ಆರಂಭವಾದ ನಂತರ ಪ್ರತಿಭಟನೆ ಕಾವು ಕೊಂಚ ನೇಪಥ್ಯಕ್ಕೆ ಸರಿದಂತಾಗಿತ್ತು. ಆದರೆ, ಈಗ ಮತ್ತೆ ಪ್ರತಿಭಟನೆಯನ್ನು ಬಲಗೊಳಿಸಲು ಕರೆ ನೀಡಿರುವ ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡರು ಇಂದಿನಿಂದ (ಜೂನ್​ 26) ಎಲ್ಲಾ ರಾಜ್ಯಗಳ ರಾಜಭವನದ ಎದುರು ಧರಣಿ ಕೂರುವುದಾಗಿ ತಿಳಿಸಿದ್ದಾರೆ. ರೈತರ ಪ್ರತಿಭಟನೆ ಆರಂಭವಾಗಿ ಇಂದಿಗೆ ಏಳು ತಿಂಗಳು ತುಂಬುತ್ತಿದ್ದು, ತಮ್ಮ ನಿಲುವು ಎಷ್ಟು ದೃಢವಾಗಿದೆ ಎಂಬುದನ್ನು ಸಾಬೀತುಪಡಿಸಲು ರೈತ ಮುಖಂಡರು ರಾಜಭವನದ ಎದುರು ಪ್ರತಿಭಟನೆ ನಡೆಸಲಿದ್ದಾರೆ.

ದೆಹಲಿ ರೈತರ ಹೋರಾಟ ಬೆಂಬಲಿಸಲು ಮುಂದಾಗಿರುವ ಕರ್ನಾಟಕ ರಾಜ್ಯ ರೈತರು ಇಂದು ರಾಜಭವನ ಚಲೋ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದಾರೆ. ಬೆಂಗಳೂರಿನ ಮೌರ್ಯ ವೃತ್ತದಲ್ಲಿ ನಡೆಯಲಿರುವ ರೈತರ ಬೃಹತ್ ಪ್ರತಿಭಟನೆ ಬೆಳಿಗ್ಗೆ 11 ಗಂಟೆಗೆ ಶುರುವಾಗಲಿದ್ದು, ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಕೆ ಮಾಡಲು ನಿರ್ಧರಿಸಲಾಗಿದೆ.

ದೆಹಲಿ ರೈತರು ಕಳೆದ 214 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯಲ್ಲಿ ಇಲ್ಲಿಯವರೆಗೆ 550 ಜನ ರೈತರು ಪ್ರಾಣವನ್ನು ಬಲಿದಾನ ಮಾಡಿದ್ದಾರೆ. ಇಷ್ಟಾದರೂ ಸರ್ಕಾರ ಸಮಸ್ಯೆ ಬಗೆಹರಿಸುತ್ತಿಲ್ಲ. ಹೀಗಾಗಿ, ರೈತರ ಒಗ್ಗಟ್ಟನ್ನು ಸಾಬೀತುಪಡಿಸಲು ಇಂದು ರಾಜಭವನ ಚಲೋ ನಡೆಸಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ನೂರಾರು ರೈತರು ಭಾಗಿಯಾಗುವ ನಿರೀಕ್ಷೆಯಿದ್ದು, ದೆಹಲಿ ರೈತರ ಪ್ರತಿಭಟನೆ ಬೆಂಬಲಿಸಿ ಕೇಂದ್ರ ಸರ್ಕಾರದ ವಿರುದ್ದ ರಸ್ತೆಗಿಳಿಯಲಿದ್ದಾರೆ. ರಾಜಭವನ ಚಲೋ ಪ್ರತಿಭಟನೆಯಲ್ಲಿ ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಕುರುಬೂರು ಶಾಂತಕುಮಾರ್, ಎಡಪಕ್ಷಗಳು ಸೇರಿದಂತೆ ನೂರಾರು ರೈತರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಮೌರ್ಯ ಸರ್ಕಲ್, ಫ್ರೀಡಂಪಾರ್ಕ್, ಮಹಾರಾಣಿ ಕಾಲೇಜು, ಚಾಲುಕ್ಯ ಸರ್ಕಲ್ ಮಾರ್ಗವಾಗಿ ರೈತರ ಪ್ರತಿಭಟನಾ ಮೆರವಣಿಗೆ ಸಾಗಲಿದ್ದು ನಂತರ ರಾಜಭವನ ತಲುಪಲಿದೆ. ಪ್ರತಿಭಟನೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ರೈತರು ಭಾಗವಹಿಸುವ ಸಾಧ್ಯತೆ ಇರುವುದರಿಂದ ಸದರಿ ಮಾರ್ಗದಲ್ಲಿ ಸಂಚಾರ ವ್ಯವಸ್ಥೆಗೆ ಅಡಚಣೆಯಾಗಬಹುದು.

ಇದನ್ನೂ ಓದಿ: Farmers Protest: ಜೂನ್​ 26ರಂದು ದೇಶಾದ್ಯಂತ ರೈತರ ಪ್ರತಿಭಟನೆ; ರಾಜಭವನದ ಮುಂದೆ ಕಪ್ಪು ಬಾವುಟ ಹಿಡಿದು ಧರಣಿ 

Farmers Protest: ‘ಟ್ರ್ಯಾಕ್ಟರ್​​ಗಳೊಂದಿಗೆ ಸಿದ್ಧರಾಗಿ’- ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕರೆಕೊಟ್ಟ ರಾಕೇಶ್ ಟಿಕಾಯತ್​

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ