ಟೊಮ್ಯಾಟೊ ದರ ಒಮ್ಮೆಲೆ ಕುಸಿತ: ಬೆಳೆದ ಟೊಮ್ಯಾಟೊವನ್ನೆಲ್ಲಾ ರಸ್ತೆಗೆ ಸುರಿದು ರೈತರ ಆಕ್ರೋಶ

ಟೊಮ್ಯಾಟೋ ದರ ಕುಸಿತ ಕಂಡಿರುವುದರಿಂದ ಬಾಗಲಕೋಟೆ ಹುನಗುಂದ ಪಟ್ಟಣದ ರೈತರು ಆಕ್ರೋಶ ಹೊರಹಾಕಿದ್ದಾರೆ.

ಟೊಮ್ಯಾಟೊ ದರ ಒಮ್ಮೆಲೆ ಕುಸಿತ: ಬೆಳೆದ ಟೊಮ್ಯಾಟೊವನ್ನೆಲ್ಲಾ ರಸ್ತೆಗೆ ಸುರಿದು ರೈತರ ಆಕ್ರೋಶ
ದರ ಕುಸಿತ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಟೊಮ್ಯಾಟೋ ಚೆಲ್ಲಿ ಆಕ್ರೋಶ ಹೊರಹಾಕಿದ ರೈತರು
Follow us
shruti hegde
|

Updated on: Apr 06, 2021 | 1:32 PM

ಬಾಗಲಕೋಟೆ: ಕಷ್ಟಪಟ್ಟು ದುಡಿದು ಗಿಡಗಳಿಗೆ ಆರೈಕೆ ಮಾಡಿ, ಉತ್ತಮ ಬೆಳೆಗೆ ಕಾಯುವ ರೈತರಿಗೆ ಬಹುತೇಕ ಸಂದರ್ಭದಲ್ಲಿ ನಿರಾಶೆಯೇ ಎದುರಾಗುವುದು ನಿಜಕ್ಕೂ ದುರದೃಷ್ಟಕರ ಸಂಗತಿ. ಇತ್ತ ಬೆಳೆ ಕೈಗೆ ಬರುವಾಗ ಅತ್ತ ಮಾರುಕಟ್ಟೆಯಲ್ಲಿ ಒಂದೇ ಸಮನೆ ಬೆಲೆ ಕುಸಿದರೆ ರೈತರ ಕಷ್ಟ ಕೇಳುವವರು ಯಾರು? ಎಂಬಂತಾಗಿದೆ ಪರಿಸ್ಥಿತಿ. ಇದೀಗ ಏಕಾಏಕಿ ಟೊಮ್ಯಾಟೋ ದರ ಕುಸಿತ ಕಂಡಿರುವುದರಿಂದ ಮಾರುಕಟ್ಟೆಯಲ್ಲಿ ಯಾರೂ ಟೊಮ್ಯಾಟೋ ಕೊಳ್ಳಲು ಮುಂದಾಗುತ್ತಿಲ್ಲ ಎಂದು ಜಿಲ್ಲೆಯ ಹುನಗುಂದ ಪಟ್ಟಣದ ರೈತರು ಆಕ್ರೋಶ ಹೊರಹಾಕಿದ್ದಾರೆ.

ಬೆಳಗಲ್ ಗ್ರಾಮದ ಪರಶುರಾಮ ರತ್ನಾಕರ್ ರಸ್ತೆಗೆ ಟೊಮ್ಯಾಟೋ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಗಾಲಾದ ರೈತರು ಆರೈಕೆ ಮಾಡಿ ಬೆಳೆದ ಎಲ್ಲಾ ಟೊಮ್ಯಾಟೋಗಳನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೊಮ್ಯಾಟೋ ದರ ಕುಸಿದಿದೆ, ಇದರಿಂದ ನಾನು ಬೆಳೆದ ಟ್ಯೊಮಾಟೋವನ್ನು ಮಾರುಕಟ್ಟೆಯಲ್ಲಿ ಯಾರೂ ಕೊಳ್ಳುತ್ತಿಲ್ಲ ಎಂದು ರೈತ ಬೇಸರ ವ್ಯಕ್ತಪಡಿಸಿದ್ದಾರೆ.

ಮನೆಯಿಂದ ಪ್ರಯಾಣ ಬೆಳೆಸಿ ಮಾರುಕಟ್ಟೆಗೆ ತಂದ ಟೊಮ್ಯಾಟೊವನ್ನು ಹಿಂದಿರುಗಿ ತೆಗೆದುಕೊಂಡು ಹೋಗಲು ಮನಸ್ಸು ಒಪ್ಪಲಿಲ್ಲ. ಆದ್ದರಿಂದ ರಸ್ತೆಯಲ್ಲಿ ಇಟ್ಟಿದ್ದೇನೆ. ಬಡವರೆಲ್ಲ ಟೊಮ್ಯಾಟೋವನ್ನು ಆಯ್ದು ಕೊಂಡೊಯ್ಯುತ್ತಿದ್ದಾರೆ. ನಾನು ಅವರಲ್ಲಿ ಒಂದು ರೂಪಾಯಿಯನ್ನೂ ನಿರೀಕ್ಷಿಸುವುದಿಲ್ಲ. ದರ ಕುಸಿತ ಕಂಡಿರುವುದರಿಂದ ರೈತರಿಗೆ ಜೀವನ ನಡೆಸಲು ಭೀಕರ ಪರಿಸ್ಥಿತಿ ಎದುರಾಗಿದೆ. ಬೆಳೆದ ಬೆಲೆಗೆ ಉತ್ತಮ ಮಾರುಕಟ್ಟೆ ಬೇಕು. ಸರ್ಕಾರ ಈ ಕುರಿತು ಗಮನ ಹರಿಸಬೇಕು ಎಂದು ರೈತರು ತಮ್ಮ ಅಳಲನ್ನು ಹೊರಹಾಕಿದ್ದಾರೆ.

ಇದನ್ನೂ ಒದಿ: Health Tips: ನೀವು ಟೊಮ್ಯಾಟೊ ಪ್ರಿಯರಾ?- ಮಿತಿಮೀರಿ ತಿನ್ನುತ್ತಿದ್ದರೆ ಎಚ್ಚರ.. ನಿಮ್ಮ ಆರೋಗ್ಯವನ್ನೇ ಹಾಳುಗೆಡವಬಹುದು ಈ ಕೆಂಪುಹಣ್ಣು

ನಿಮ್ಮ ಸಮೃದ್ಧ ಸೌಂದರ್ಯದ ಆರೈಕೆಗೆ ಇಲ್ಲಿದೆ ಮನೆಮದ್ದು

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?