ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯಾದ್ಯಂತ ಹೆದ್ದಾರಿ ತಡೆದು ರೈತರ ಧರಣಿ, ಎಲ್ಲೆಲ್ಲಿ ಹೆದ್ದಾರಿ ಬಂದ್? ಇಲ್ಲಿದೆ ಮಾಹಿತಿ

ಮೈಸೂರು, ರಾಮನಗರ ಹಾಗೂ ಮಂಡ್ಯ, ಹಾವೇರಿ, ಬೆಳಗಾವಿಯಲ್ಲಿ ಹೆದ್ದಾರಿ ತಡೆದು ಅಧಿವೇಶನದಲ್ಲಿ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯಾದ್ಯಂತ ಹೆದ್ದಾರಿ ತಡೆದು ರೈತರ ಧರಣಿ, ಎಲ್ಲೆಲ್ಲಿ ಹೆದ್ದಾರಿ ಬಂದ್? ಇಲ್ಲಿದೆ ಮಾಹಿತಿ
ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯಾದ್ಯಂತ ಹೆದ್ದಾರಿ ತಡೆದು ರೈತ ಧರಣಿ


ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯಾದ್ಯಂತ ಹೆದ್ದಾರಿ ತಡೆದು ರೈತ ಸಂಘಟನೆಗಳು ಧರಣಿ ನಡೆಸುತ್ತಿವೆ. ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಮೈಸೂರು, ರಾಮನಗರ ಹಾಗೂ ಮಂಡ್ಯ, ಹಾವೇರಿ, ಬೆಳಗಾವಿಯಲ್ಲಿ ಹೆದ್ದಾರಿ ತಡೆದು ಅಧಿವೇಶನದಲ್ಲಿ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮೈಸೂರಿನಲ್ಲಿ ಹಸುಗಳನ್ನು ನಿಲ್ಲಿಸಿ ರಸ್ತೆ ತಡೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೈಸೂರಿನಲ್ಲಿ ಮೈಸೂರು-ಊಟಿ ಹೆದ್ದಾರಿ ತಡೆದು ರೈತರು ಧರಣಿ ನಡೆಸುತ್ತಿದ್ದಾರೆ. ಮೈಸೂರಿನ ಎಪಿಎಂಸಿ ವೃತ್ತದಲ್ಲಿ ಹಸುಗಳನ್ನು ನಿಲ್ಲಿಸಿ ರಸ್ತೆ ತಡೆಯಲಾಗಿದೆ. ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ರದ್ದಾಗಬೇಕು. ಮಳೆಯಿಂದ ಬೆಳೆ ಹಾನಿಗೆ ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ, ರಾಜ್ಯ ರೈತ ಸಂಘ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ರಸ್ತೆ ತಡೆಯಲಾಗಿದೆ.

ಪ್ರತಿಭಟನಾನಿರತರನ್ನು ವಶಕ್ಕೆ ಪಡೆದ ಪೊಲೀಸರು
ರಾಜ್ಯದಲ್ಲಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈತ ಮಹಿಳೆಯರು ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು-ಮುಂಬೈ ಹೆದ್ದಾರಿ ತಡೆದು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ನಾಕಾ ಬಳಿ ಧರಣಿ ನಡೆಸುತ್ತಿದ್ದಾರೆ. ಹೀಗಾಗಿ ರಸ್ತೆ ತಡೆದು ಧರಣಿ ನಡೆಸುತ್ತಿದ್ದ ರೈತ ಮಹಿಳೆಯರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಧರಣಿ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ರೈತರಿಂದ ಪ್ರತಿಭಟನೆ ನಡೆಯುತ್ತಿದೆ. ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಧರಣಿ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು ಪೊಲೀಸರು ಪರ್ಯಾಯ ಮಾರ್ಗ ವ್ಯವಸ್ಥೆ ಮಾಡಿದ್ದಾರೆ. ಮದ್ದೂರು-ಮಳವಳ್ಳಿ ಮಾರ್ಗದಲ್ಲಿ ಮೈಸೂರಿಗೆ ತೆರಳಲು ವ್ಯವಸ್ಥೆ ಮಾಡಲಾಗಿದೆ.

ರಾಮನಗರದ ಎಪಿಎಂಸಿ ಸರ್ಕಲ್ ಬಳಿ ಪ್ರತಿಭಟನೆ
ಇನ್ನು ರಾಜ್ಯ ರೈತಸಂಘದ ಕಾರ್ಯಕರ್ತರಿಂದ ರಾಮನಗರದ ಎಪಿಎಂಸಿ ಸರ್ಕಲ್ ಬಳಿ ಪ್ರತಿಭಟನೆ ನಡೆಯುತ್ತಿದೆ. ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ.

ಕೋಲಾರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ
ರೈತರ ದೆಹಲಿ ಹೋರಾಟ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕೋಲಾರದಲ್ಲಿ ಹೆದ್ದಾರಿ ತಡೆದು ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕೋಲಾರ ತಾಲ್ಲೂಕಿನ ವಡಗೂರು ಗೇಟ್ ಬಳಿ ನಗರದ ಬೆಂಗಳೂರು-ಚೆನ್ನೈ ರಾ.ಹೆದ್ದಾರಿ 75 ತಡೆಯಲಾಗಿದೆ. ಎತ್ತಿನ ಗಾಡಿ, ನೇಗಿಲು, ಹಾಳಾದ ಬೆಳೆಯನ್ನು ಕೈಯಲ್ಲಿ ಹಿಡಿದು ಪ್ರತಿಭಟನೆ ನಡೆಸಲಾಗುತ್ತಿದೆ.ಕಾಯ್ದೆ ಅಧಿಕೃತವಾಗಿ ವಾಪಸ್ ಪಡೆಯಬೇಕು. ಹೋರಾಟದಲ್ಲಿ ಮೃತಪಟ್ಟ ರೈತರಿಗೆ 50 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಗುತ್ತಿದೆ.

ಎಲ್ಲೆಲ್ಲಿ ಹೆದ್ದಾರಿ ಬಂದ್?
1. ತುಮಕೂರು ನಿಂದ ಹೊರಟು ಬೆಂಗಳೂರು ಕಡೆ ಬರುವ ಟೋಲ್ ರಸ್ತೆ
2. ಮಂಡ್ಯ, ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ
3. ಚಿಕ್ಕಬಳ್ಳಾಪುರ ಹಳೇ ಡಿಸಿ ಕಚೇರಿ ಎದುರಿನ ರಾಷ್ಟ್ರೀಯ ಹೆದ್ದಾರಿ
4. ರಾಮನಗರ ರಾಷ್ಟ್ರೀಯ ಹೆದ್ದಾರಿ
5. ಚಾಮರಾಜನಗರ, ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ
6. ಶಿವಮೊಗ್ಗ ಬಸ್ ಸ್ಟ್ಯಾಂಡ್ ಸರ್ಕಲ್
7. ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 4, ಕ್ಯಾದಿಗೆರೆ ಹತ್ತಿರ
8. ಬಳ್ಳಾರಿ, ಬೆಂಗಳೂರು ಬೈಬಾಸ್ ರಾಷ್ಟ್ರೀಯ ಹೆದ್ದಾರಿ, ನಂದೂರು
9. ದಾವಣಗೆರೆ, ಜಯದೇವ ಸರ್ಕಲ್ ನಿಂದ ಎಸಿ ಕಚೇರಿವರೆಗೆ ಟ್ರಾಕ್ಟರ್ ರ್‍ಯಾಲಿ
10. ಕೊಡಗು, ಎಲ್ಲಾ ತಾಲೂಕುಗಳಿಂದ ಕೊಡಗಿಗೆ ಬೈಕ್‌ ರ್‍ಯಾಲಿ
11. ರಾಯಚೂರಿನ ಹೊರಭಾಗದಲ್ಲಿರುವ ಸಾತ್ ಮೈಲ್ ಸಿಂಧನೂರು ನಗರದಲ್ಲಿ ಮುಖ್ಯ ರಸ್ತೆ
12. ವಿಜಯನಗರ, ಸೊಲ್ಲಾಪುರ ಟು ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ-50. ಟಿಬಿ ಡ್ಯಾಂ, ಗಣೇಶ ಗುಡಿ ಹತ್ತಿರ ಹೊಸಪೇಟೆ
13. ವಿಜಯಪುರ ರಾಷ್ಟ್ರೀಯ ಹೆದ್ದಾರಿ 13, ಟೋಲ್
14. ಹಾಸನ, ಧಾರವಾಡ, ಯಾದಗಿರಿ, ಬೆಳಗಾವಿ ಜಿಲ್ಲೆಗಳ ಹೆದ್ದಾರಿ

ಇದನ್ನೂ ಓದಿ: Farm Laws Repeal ಮೂರು ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ಕೇಂದ್ರ ಸಂಪುಟ ಅಸ್ತು

Click on your DTH Provider to Add TV9 Kannada