ಕೊಪ್ಪಳ: ಜಮೀನಿನಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮತ್ತು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಚಳಗೇರಿ ಬಳಿ ನಡೆದಿದೆ.
ತನ್ನ ಇಬ್ಬರು ಮಕ್ಕಳ ಜೊತೆ ಜಮೀನಿನಲ್ಲಿ ಟ್ರ್ಯಾಕ್ಟರ್ ಮೇಲೆ ನಿಂತು ಹನುಮಂತ ಎಂಬುವರು ಸೂರ್ಯಕಾಂತಿ ರಾಶಿ ಮಾಡ್ತಿದ್ರು. ಈ ವೇಳೆ ಟ್ರ್ಯಾಕ್ಟರ್ನ ಮೇಲಿದ್ದವರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ 4 ವರ್ಷದ ಪ್ರಿಯಾಂಕಾ, 2 ವರ್ಷದ ಬೀರಪ್ಪ ಹಾಗು ತಂದೆ ಹನುಮಂತ ಬೀರಪ್ಪನವರ್(30) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇನ್ನು ಈ ಘಟನೆ ಸಂಬಂಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.