ಜಮೀನು ವಿವಾದ ಹಿನ್ನೆಲೆ ತಂದೆ-ಮಗನ ಭೀಕರ ಹತ್ಯೆ

ರಾಜಕೀಯ ವೈಷಮ್ಯ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ತಂದೆ-ಮಗನನ್ನು ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಜಮ್ಮಿಹಾಳ ಗ್ರಾಮದಲ್ಲಿ ನಡೆದಿದೆ. ಕಲಘಟಗಿ ಪಿಎಲ್​ಡಿ ಬ್ಯಾಂಕ್ ಸದಸ್ಯ ವೀರಭದ್ರಪ್ಪ ಸತ್ತೂರು(48), ಆತನ ಮಗ ರವಿ ಸತ್ತೂರ (20) ಹತ್ಯೆಗೀಡಾದವರು. ವೀರಭದ್ರಪ್ಪ  ದೇವಿಲಿಂಗನಕೊಪ್ಪದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೂ ಆಗಿದ್ದರು. ಜಮ್ಮಿಹಾಳ ಗ್ರಾಮದ ಅಕ್ಕಿ ಕುಟುಂಬ ಹಾಗೂ ಸತ್ತೂರ ಕುಟುಂಬಗಳ ನಡುವೆ ಹಿಂದಿನಿಂದಲೂ ರಾಜಕೀಯ ವೈಷಮ್ಯವಿತ್ತು ಎನ್ನಲಾಗಿದೆ. ಜಮೀನಿನ ರಸ್ತೆಗಾಗಿ ಎರಡೂ ಕುಟುಂಬಗಳ ನಡುವೆ ಜಗಳವಾಗಿತ್ತು. ಅಕ್ಕಿ […]

ಜಮೀನು ವಿವಾದ ಹಿನ್ನೆಲೆ ತಂದೆ-ಮಗನ ಭೀಕರ ಹತ್ಯೆ
ಸಾಧು ಶ್ರೀನಾಥ್​

Updated on: Sep 10, 2019 | 4:37 PM

ರಾಜಕೀಯ ವೈಷಮ್ಯ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ತಂದೆ-ಮಗನನ್ನು ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಜಮ್ಮಿಹಾಳ ಗ್ರಾಮದಲ್ಲಿ ನಡೆದಿದೆ.

ಕಲಘಟಗಿ ಪಿಎಲ್​ಡಿ ಬ್ಯಾಂಕ್ ಸದಸ್ಯ ವೀರಭದ್ರಪ್ಪ ಸತ್ತೂರು(48), ಆತನ ಮಗ ರವಿ ಸತ್ತೂರ (20) ಹತ್ಯೆಗೀಡಾದವರು. ವೀರಭದ್ರಪ್ಪ  ದೇವಿಲಿಂಗನಕೊಪ್ಪದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೂ ಆಗಿದ್ದರು.

ಜಮ್ಮಿಹಾಳ ಗ್ರಾಮದ ಅಕ್ಕಿ ಕುಟುಂಬ ಹಾಗೂ ಸತ್ತೂರ ಕುಟುಂಬಗಳ ನಡುವೆ ಹಿಂದಿನಿಂದಲೂ ರಾಜಕೀಯ ವೈಷಮ್ಯವಿತ್ತು ಎನ್ನಲಾಗಿದೆ. ಜಮೀನಿನ ರಸ್ತೆಗಾಗಿ ಎರಡೂ ಕುಟುಂಬಗಳ ನಡುವೆ ಜಗಳವಾಗಿತ್ತು. ಅಕ್ಕಿ ಕುಟುಂಬವು ಸತ್ತೂರ ಕುಟುಂಬದ ತಂದೆ-ಮಗನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಹಾಕಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವೀರಭದ್ರಪ್ಪ ಸ್ಥಳದಲ್ಲೇ ಮೃತಪಟ್ಟಿದ್ದು, ಆತನ ಮಗ ರವಿಯನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ರವಿಯೂ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇನ್ನು ಈ ಘಟನೆ ಸಂಬಂಧ ಕಲಘಟಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Published On - 3:34 pm, Tue, 10 September 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us