ಕರ್ನಾಟಕದಲ್ಲೊಂದು ಹೀನ ಕೃತ್ಯ: ಮಗಳನ್ನೇ ಗರ್ಭಿಣಿ ಮಾಡಿದ ನೀಚ ತಂದೆ

ಹೆಣ್ಣುಮಕ್ಕಳಿಗೆ ಅಪ್ಪನೇ ಸೂಪರ್ ಹೀರೋ ಎಂಬ ಮಾತುಗಳು ನಾವು ಹಾಗಾಗ ಕೇಳುತ್ತಿರುತ್ತೇವೆ. ಅದರಂತೆ ಹೆಣ್ಣುಮಕ್ಕಳು ಸಹ ತಾಯಿಗಿಂತ ಅಪ್ಪನ ಮೇಲೆ ವಿಶೇಷ ಪ್ರೀತಿಯನ್ನು ಹೊಂದಿರುತ್ತಾರೆ. ಆದರೆ ಇಲ್ಲೋರ್ವ ವ್ಯಕ್ತಿ ಅಪ್ಪ ಎಂಬ ಪದಕ್ಕೆ ಮಸಿ ಬಳಿದಿದ್ದಾನೆ. ಮಗಳು ಎನ್ನುವುದನ್ನು ನೋಡದೇ ತಂದೆಯೇ ಆಕೆ ಮೇಲೆ ತನ್ನ ವಿಕೃತ ಕಾಮದ ತೀಟೆ ತೀರಿಸಿಕೊಂಡಿದ್ದಾನೆ. ಪರಿಣಾಮ ಇದೀಗ ಮಗಳು ಗರ್ಭಿಣಿಯಾಗಿದ್ದಾಳೆ.

ಕರ್ನಾಟಕದಲ್ಲೊಂದು ಹೀನ ಕೃತ್ಯ: ಮಗಳನ್ನೇ ಗರ್ಭಿಣಿ ಮಾಡಿದ ನೀಚ ತಂದೆ
Kolar Ayyayappa
Updated By: ರಮೇಶ್ ಬಿ. ಜವಳಗೇರಾ

Updated on: Mar 12, 2025 | 11:00 PM

ಕೋಲಾರ, (ಮಾರ್ಚ್​ 12): ಅನ್ಯರಿಂದ, ಕೆಟ್ಟ ದೃಷ್ಟಿಯಿಂದ ಮಗಳನ್ನು(daughter) ಕಾಪಾಡಬೇಕಿದ್ದ ತಂದೆಯೇ(Father)   ಪೈಶಾಚಿಕ ಕೃತ್ಯ ಎಸಗಿದ್ದಾನೆ. ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿದ್ದು, ಇದೀಗ ಆಕೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಕೋಲಾರ (Kolar) ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದೆ. ಅಪ್ಪಯ್ಯಪ್ಪ ಎನ್ನುವ ವ್ಯಕ್ತಿ ತನ್ನ 20 ವರ್ಷದ ಮಗಳ ಮೇಲೆ 5 ತಿಂಗಳಿನಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಪರಿಣಾಮ ಮಗಳು ಗರ್ಭಿಣಿಯಾಗಿದ್ದಾಳೆ. ಯುವತಿ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದಾಗ ತಂದೆಯ ವಿಕೃತ ಕಾಮ ಬೆಳಕಿಗೆ ಬಂದಿದೆ.

ಇದನ್ನೂ ಓದಿ:  ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಬಿಜೆಪಿ ಮುಖಂಡ: ಬೆತ್ತಲೆ ವಿಡಿಯೋ..20 ಲಕ್ಷಕ್ಕೆ ಡಿಮ್ಯಾಂಡ್‌.. ಮಾಯಾಂಗನೆ ಲಾಕ್

ಅಪ್ಪಯ್ಯಪ್ಪಗೆ ಮೂರು ಹೆಣ್ಣು ಒಂದು ಗಂಡು ಮಗು ಇದ್ದು, ತಾಯಿ ಇಲ್ಲದ ಮಕ್ಕಳನ್ನು ತಾನೇ ನೋಡಿಕೊಳ್ಳುತ್ತಿದ್ದ. ಮೊದಲ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿ ಕೊಟ್ಟಿದ್ದಾನೆ. ಆದ್ರೆ, 20 ವರ್ಷದ ಮೂರನೇ ಮಗಳ ಮೇಲೆ ತನ್ನ ಕಾಮದ ತೀಟೆ ತೀರಿಸಿಕೊಂಡಿದ್ದಾನೆ. ಮಗಳು ಎನ್ನುವುದನ್ನು ನೋಡದೇ ನಿರಂತರವಾಗಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದರಿಂದ ಯುವತಿ ಗರ್ಭಿಣಿಯಾಗಿದ್ದಾಳೆ.

ಅಪ್ಪಯ್ಯಪ್ಪ ತನ್ನ 20 ವರ್ಷದ ಮಗಳ ಮೇಲೆ ನಿರಂತರವಾಗಿ 5 ತಿಂಗಳಿನಿಂದ ಅತ್ಯಾಚಾರ ಎಸಗಿದ್ದಾನೆ. ಬಳಿಕ ಯುವತಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದು, ಆಗ ವೈದ್ಯರು ಪರೀಕ್ಷೆ ನಡೆಸಿದ ವೇಳೆ ಯುವತಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.

ಇದನ್ನೂ ಓದಿ: ಬೆಳಗಾವಿ: ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್

ಬಳಿಕ ಮಗಳ ತಂದೆ ಅಪ್ಪಯ್ಯಪ್ಪ ವಿರುದ್ಧ ದೂರು ನೀಡಿದ್ದು, ಈ ದೂರಿನ ಮೇರೆಗೆ ಕಾಮಸಮುದ್ರ ಪೊಲೀಸರು ಅಪ್ಪಯ್ಯಪ್ಪನನ್ನು ಬಂಧಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Wed, 12 March 25