AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡ್​ ದುರಂತದ ಭಯ: ಆದೇಶ ಹೊರಡಿಸಿದ 24 ಗಂಟೆಯಲ್ಲೇ 69 ಎಕರೆ ಅರಣ್ಯ ಒತ್ತುವರಿ ತೆರವು

ಪಶ್ಚಿಮಘಟ್ಟ, ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ಅಧ್ಯಕ್ಷ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ದೀಕ್ಷಿತ್​ ಆದೇಶದಂತೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಹೋಬಳಿಯಲ್ಲಿ 31 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಗೊಂಡಿದೆ. ಸಚಿವ ಈಶ್ವರ್‌ ಖಂಡ್ರೆ ಆದೇಶ ಹೊರಡಿಸಿದ 24 ಗಂಟೆಯಲ್ಲೇ 69 ಎಕರೆ ಅರಣ್ಯ ಒತ್ತುವರಿ ತೆರವು ಮಾಡಲಾಗಿದೆ.

ವಯನಾಡ್​ ದುರಂತದ ಭಯ: ಆದೇಶ ಹೊರಡಿಸಿದ 24 ಗಂಟೆಯಲ್ಲೇ 69 ಎಕರೆ ಅರಣ್ಯ ಒತ್ತುವರಿ ತೆರವು
ವಯನಾಡ್​ ದುರಂತದ ಭಯ: ಆದೇಶ ಹೊರಡಿಸಿದ 24 ಗಂಟೆಯಲ್ಲೇ 69 ಎಕರೆ ಅರಣ್ಯ ಒತ್ತುವರಿ ತೆರವು
ಪ್ರಸನ್ನ ಗಾಂವ್ಕರ್​
| Edited By: |

Updated on: Aug 05, 2024 | 7:43 PM

Share

ಬೆಂಗಳೂರು, ಆಗಸ್ಟ್​ 05: ಕರ್ನಾಟಕದ 10 ಜಿಲ್ಲೆಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರೆ ಘಟ್ಟ ಪ್ರದೇಶಗಳಲ್ಲಿ ಒತ್ತುವರಿ ತತ್‌ಕ್ಷಣದಿಂದಲೇ ತೆರವು (encroachment) ಮಾಡುವಂತೆ ಇತ್ತೀಚೆಗೆ ಅರಣ್ಯ ಖಾತೆ ಸಚಿವ ಈಶ್ವರ್‌ ಖಂಡ್ರೆ (eshwar khandre) ಸೂಚಿಸಿದ್ದರು. ಇದೀಗ ಅವರ ಸೂಚನೆ ಮೇರೆಗೆ 24 ಗಂಟೆಯಲ್ಲಿ ನೂತನ ಕಾರ್ಯಪಡೆ ರಚಿಸಿ ಪಶ್ಚಿಮಘಟ್ಟದಲ್ಲಿ ಒತ್ತುವರಿಯಾಗಿದ್ದ 69 ಎಕರೆ ಅರಣ್ಯ ತೆರವು ಕಾರ್ಯಾಚರಣೆ ಆರಂಭ ಮಾಡಲಾಗಿದೆ.

ಪಶ್ಚಿಮಘಟ್ಟ, ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ಅಧ್ಯಕ್ಷ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ದೀಕ್ಷಿತ್​ ಆದೇಶದಂತೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಹೋಬಳಿಯಲ್ಲಿ 31 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಗೊಂಡಿದ್ದು, ಮಾಗುಂಡಿ ಗ್ರಾಮದ ಸರ್ವೆ ನಂ. 29ರಲ್ಲಿ 17 ಎಕರೆ 17 ಗುಂಟೆ, ಹಲಸೂರು ಗ್ರಾಮದ ಸರ್ವೆ ನಂ. 55ರಲ್ಲಿ 13 ಎಕರೆ 38 ಗುಂಟೆ, ತನುಡಿ ಸರ್ವೆ ನಂ. 9, 21, 22, 23, 72, 97ರಲ್ಲಿ 36 ಎಕರೆ ಸೇರಿ ಒಟ್ಟು 69 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯ ಆರಂಭಿಸಲಾಗಿದೆ.

ಇದನ್ನೂ ಓದಿ: ಶಿರೂರು, ವಯನಾಡ್ ಭೂಕುಸಿತದಿಂದ ಎಚ್ಚೆತ್ತ ಸರ್ಕಾರ, ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ‌, ರೆಸಾರ್ಟ್ ತೆರವಿಗೆ ಸೂಚನೆ

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸಚಿವ ಈಶ್ವರ್‌ ಖಂಡ್ರೆ  ಸೂಚನೆ ನೀಡಿದ್ದರು. ಅದರಂತೆ ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ.

2 ಲಕ್ಷಕ್ಕೂ ಹೆಚ್ಚು ಎಕರೆ ಒತ್ತುವರಿಯನ್ನ ತೆರವು ಮಾಡಿದ್ದೇವೆ: ಈಶ್ವರ್ ಖಂಡ್ರೆ

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಒಟ್ಟು 2 ಲಕ್ಷಕ್ಕೂ ಹೆಚ್ಚು ಎಕರೆ ಒತ್ತುವರಿಯನ್ನ ತೆರವು ಮಾಡಿದ್ದೇವೆ. ಒತ್ತುವರಿ ಮಾಡುವುದರಲ್ಲಿ ಯಾವುದೇ ಕಾಲ ಹರಣ ಆಗಿಲ್ಲ. ಇದರ ಎಲ್ಲಾ ಮಾಹಿತಿ ನಾನು ಇನ್ನಷ್ಟು ನೀಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆ.12ರಂದು ಮಾನವ- ಆನೆ ಸಂಘರ್ಷ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ, 11 ರಾಷ್ಟ್ರಗಳ ಭಾಗಿ

ಈಗಾಗಲೇ ಒತ್ತುವರಿ ತೆರವು ಕಾರ್ಯ ಪಡೆ ರಚನೆ ಆಗಿದೆ. ಅನಧಿಕೃತ ಹೋಂ ಸ್ಟೇ ಗಳನ್ನ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 2015 ನಂತರ ಆಗಿರುವ ಹೋಂ ಸ್ಟೇ, ರೆಸಾರ್ಟ್​ಗಳನ್ನ ತೆರವು ಮಾಡಲಾಗುತ್ತದೆ. ಅಧಿಕೃತವಾಗಿ ಅವರ ಜಮೀನಿನಲ್ಲೆ ಕಟ್ಟಿದ್ದರೆ ಯಾವುದೇ ಕ್ರಮ ಇಲ್ಲ. 3 ಎಕರೆ ಒಳಗೆ ಇರುವವರನ್ನ ತೆರೆವುಗೊಳಿಸದಂತೆ ನಿಯಮ ಇದೆ. ಅಧಿಕಾರಿಗಳು ಶಾಮಿಲಾಗಿದ್ದರು ಕೂಡ ಕ್ರಮ‌ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ