Karnataka Dam Water Level: ಫೆ.10ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Feb 13, 2024 | 7:18 AM

ಕರ್ನಾಟಕದ ಜಲಾಶಯಗಳ ಫೆಬ್ರವರಿ 10ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಫೆ.10ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಡ್ಯಾಂ
Follow us on

ಬೆಂಗಳೂರು, ಫೆ.10: ರಾಜ್ಯದಲ್ಲಿ ಮುಂದಿನ 48 ಗಂಟೆ ಒಣ ಹವೆ ಬೀಸಲಿದೆ. ಇನ್ನು ರಾಜ್ಯದ ಕೆಲವು ಕಡೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ರೀತಿ ರಾಜ್ಯದಲ್ಲಿ ಬಿಸಲು ಜಾಸ್ತಿಯಾದರೆ ರಾಜ್ಯದಲ್ಲಿನ ಕೆರೆ, ಹಳ್ಳ ಮತ್ತು ನದಿಗಳು ಬರಿದಾಗುತ್ತವೆ. ಬೇಸಿಗೆ ಹೊತ್ತಿಗೆ ಕುಡಿಯಲು ನೀರಿಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಫೆಬ್ರವರಿ 10ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 51.19 66.99 0 1080
ತುಂಗಭದ್ರಾ ಜಲಾಶಯ (Tungabhadra Dam) 497.71 105.79 9.47 44.60 0 179
ಮಲಪ್ರಭಾ ಜಲಾಶಯ (Malaprabha Dam) 633.80 37.73 12.70 18.69 0 194
ಕೆ.ಆರ್.ಎಸ್ (KRS Dam) 38.04 49.45 16.93 34.44 328 818
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 45.31 79.46 229 3299
ಕಬಿನಿ ಜಲಾಶಯ (Kabini Dam) 696.13 19.52 12.57 12.17 93 900
ಭದ್ರಾ ಜಲಾಶಯ (Bhadra Dam) 657.73 71.54 31.54 56.94 195 1578
ಘಟಪ್ರಭಾ ಜಲಾಶಯ (Ghataprabha Dam) 662.91 51.00 33.61 26.99 0 126
ಹೇಮಾವತಿ ಜಲಾಶಯ (Hemavathi Dam) 890.58 37.10 14.56 22.16 76 1265
ವರಾಹಿ ಜಲಾಶಯ (Varahi Dam) 594.36 31.10 8.76 11.95 0 146
ಹಾರಂಗಿ ಜಲಾಶಯ (Harangi Dam)​​ 871.38 8.50 3.42 3.29 212 200
ಸೂಫಾ (Supa Dam) 564.00 145.33 62.89 81.14 121 3393

ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್​ ಇರುವ ಬಹಳಷ್ಟು ಸಾಧ್ಯತೆಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:19 am, Sat, 10 February 24