Karnataka Dam Water Level: ಫೆ.14ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಫೆಬ್ರವರಿ14ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಫೆ.14ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಆಲಮಟ್ಟಿ ಡ್ಯಾಂ
Follow us
ವಿವೇಕ ಬಿರಾದಾರ
|

Updated on:Feb 14, 2024 | 7:06 AM

ಬೆಂಗಳೂರು, ಫೆ.14: ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಜಲಾಶಯಗಳು ಬರಿದಾಗುತ್ತಿವೆ. ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಪ್ರಮುಖ ನಾಲ್ಕು ಅಣೆಕಟ್ಟುಗಳಲ್ಲಿನ ನೀರು ದಿನದಿಂದ ದಿನಕ್ಕೆ ಕಾಲಿಯಾಗುತ್ತಿದ್ದು, ಇದರಿಂದ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗಲಿದೆ. ಈ ವಿಚಾರವಾಗಿ ಮಂಗಳವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸದನದಲ್ಲಿ ಮಾತನಾಡಿ, ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವುದು ದೊಡ್ಡ ಸಮಸ್ಯೆಯಾಗಿದ್ದು, ವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ ನೀರಿನ ಬೇಡಿಕೆಯನ್ನು ಪೂರೈಸಲು ಪ್ರಮುಖ ಪರಿಹಾರವನ್ನು ಕಂಡುಹಿಡಿಯುವ ಅಗತ್ಯವಿದೆ ಎಂದು ಹೇಳಿದರು. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಫೆಬ್ರವರಿ 14ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 50.89 64.41 0 833
ತುಂಗಭದ್ರಾ ಜಲಾಶಯ (Tungabhadra Dam) 497.71 105.79 9.40 41.49 0 255
ಮಲಪ್ರಭಾ ಜಲಾಶಯ (Malaprabha Dam) 633.80 37.73 12.43 17.91 0 194
ಕೆ.ಆರ್.ಎಸ್ (KRS Dam) 38.04 49.45 16.70 33.78 419 765
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 44.17 76.64 57 3123
ಕಬಿನಿ ಜಲಾಶಯ (Kabini Dam) 696.13 19.52 12.39 12.01 101 500
ಭದ್ರಾ ಜಲಾಶಯ (Bhadra Dam) 657.73 71.54 30.96 55.83 134 1928
ಘಟಪ್ರಭಾ ಜಲಾಶಯ (Ghataprabha Dam) 662.91 51.00 33.57 25.89 0 126
ಹೇಮಾವತಿ ಜಲಾಶಯ (Hemavathi Dam) 890.58 37.10 14.26 22.08 96 500
ವರಾಹಿ ಜಲಾಶಯ (Varahi Dam) 594.36 31.10 8.70 11.47 0 425
ಹಾರಂಗಿ ಜಲಾಶಯ (Harangi Dam)​​ 871.38 8.50 3.41 3.28 207 200
ಸೂಫಾ (Supa Dam) 564.00 145.33 62.03 79.71 129 2195

ನಗರದಲ್ಲಿ ಪ್ರತಿ ವರ್ಷ 10 ಲಕ್ಷ ಜನಸಂಖ್ಯೆ ಹೆಚ್ಚಾಗುತ್ತಿದ್ದು, ನೀರಿನ ಸಮಸ್ಯೆ ತಲೆದೋರಿದೆ. ಭಾರತದ ಐಟಿ ರಾಜಧಾನಿ ತೀವ್ರ ನೀರಿನ ಕೊರತೆಯನ್ನು ಎದುರಿಸುತ್ತಿದೆ ಮತ್ತು ನಗರದ ಸುಮಾರು 20 ಪ್ರತಿಶತದಷ್ಟು ಮನೆಗಳಿಗೆ ನೀರನ್ನು ಟ್ಯಾಂಕರ್‌ಗಳು ಪೂರೈಸುತ್ತಿವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:03 am, Wed, 14 February 24

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್